Author: Ganesh Tumkuru

ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಶೋನಿಂದ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಂ ಪ್ರಕಾಶ್ ರಾವ್ ಅವರು ಈಗಾಗಲೇ ಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದರು. ಬಿಗ್‌ ಬಾಸ್‌ ಮನೆಯಲ್ಲಿನ ಕಠಿಣ ವಾತಾವರಣ, ಅದರಲ್ಲೂ ವಿಶೇಷವಾಗಿ ವಿಮಾನದ ಥೀಮ್ ಹೊಂದಿರುವ ಸೆಟ್‌ನಲ್ಲಿ ಮಲಗುವ ವ್ಯವಸ್ಥೆ ಹಾಗೂ ವಾಸಿಸುವುದರಿಂದ ಅವರಿಗೆ ತೀವ್ರವಾದ ದೈಹಿಕ ಅಸ್ವಸ್ಥತೆ ಮತ್ತು ಕಾಲುನೋವು ಹೆಚ್ಚಾಗಿತ್ತು. ಇದರೊಂದಿಗೆ ರಿಯಾಲಿಟಿ ಶೋನ ನಿರಂತರ ಒತ್ತಡ, ಸ್ಪರ್ಧಿಗಳ ನಡುವಿನ ಚರ್ಚೆಗಳು ಹಾಗೂ ಮನೆಯೊಳಗಿನ ತೀವ್ರ ವಾತಾವರಣದಿಂದಾಗಿ ಅವರಿಗೆ ಮಾನಸಿಕ ಒತ್ತಡ ಮತ್ತು ಆತಂಕ ಉಂಟಾಗಿತ್ತು. ವಯೋಸಹಜ ಸುಸ್ತು ಹಾಗೂ ದೈಹಿಕ ಆಯಾಸದಿಂದ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಎಚ್ಚೆತ್ತ ಬಿಗ್‌ ಬಾಸ್ ನಿರ್ಮಾಣ ತಂಡವು ತಕ್ಷಣವೇ ಅವರನ್ನು ದೊಡ್ಮನೆಯಿಂದ ಹೊರತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದೆ. ಗಮನಾರ್ಹ ಸಂಗತಿಯೆಂದರೆ,…

Read More

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಮತ್ತು ಬರಗಾಲದ ಪರಿಸ್ಥಿತಿಯನ್ನು ರಾಜಕೀಯಗೊಳಿಸದಂತೆ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರೈತರ ಬೆಂಬಲಕ್ಕೆ ನಿಲ್ಲಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ. ಮಂಗಳವಾರ ಈ ಕುರಿತು ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ತೀವ್ರ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಿದ್ಯುತ್‌ ಕೊರತೆ ಎದುರಾಗುವ ಸಾಧ್ಯತೆಯಿದೆ. ಹಾಗೆಂದು ರೈತರು ಅಥವಾ ಶಾಸಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರದಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ರೈತರ ಸಮಸ್ಯೆಗಳನ್ನು ನೇರವಾಗಿ ಅರಿತುಕೊಳ್ಳಲು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗುತ್ತಿದ್ದು, ರೈತರ ಜೊತೆ ಚರ್ಚಿಸಿ ಅಗತ್ಯ ಪರಿಹಾರ ಹಾಗೂ ಘೋಷಣೆಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು. ಇದೇ ವೇಳೆ, ರಾಜಕೀಯ ಪಕ್ಷಗಳು ಮಳೆ ಕೊರತೆಯ ವಿಚಾರವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅಥವಾ ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್…

Read More

ಬೆಂಗಳೂರು: ಮುಕ್ತ ಚುನಾವಣೆ, ಮಾನವ ಹಕ್ಕುಗಳಿಗೆ ಬೆಲೆ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜನಸಮುದಾಯದ ಭಾಗವಹಿಸುವಿಕೆ ಇರುವ ದೇಶಗಳಲ್ಲಿ ಮಾತ್ರ ಶಾಂತಿಯುತ ವಾತಾವರಣವಿರಲು ಸಾಧ್ಯ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪ್ರತಿಪಾದಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು. ನೆರೆಯ ದೇಶಗಳಲ್ಲಿ ಪ್ರಜಾಪ್ರಭುತ್ವಕ್ಕೆ ಹಿನ್ನಡೆಯಾಗಿದ್ದರೂ, ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಬಲವಾದ ಅಡಿಪಾಯದಿಂದಾಗಿ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವ ಬೆಳವಣಿಗೆಗಳಿಗೆ ಗೆಲುವು ಸಿಕ್ಕಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ದೇಶದ ಜನಸಂಖ್ಯೆಯಲ್ಲಿ ಶೇ. 65ರಷ್ಟು ಯುವ ಸಮುದಾಯವಿದ್ದು, ಇಂದಿನ ಜೆನ್‌ಝೀ ಪೀಳಿಗೆಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಧಾರೆ ಎರೆಯಬೇಕಿದೆ. ಪ್ರತಿಯೊಂದು ಶಾಲಾ-ಕಾಲೇಜುಗಳಿಗೆ ಮತ್ತು ಮನೆಗಳಿಗೆ ಸಂವಿಧಾನದ ಪೀಠಿಕೆಯನ್ನು ತಲುಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು. ಹನ್ನೆರಡನೇ ಶತಮಾನದಲ್ಲೇ ಬಸವಣ್ಣನವರು ಸಮಾನತೆಯ ಪ್ರತಿಪಾದನೆ ಮಾಡಿ, ಅಲ್ಲಮ ಪ್ರಭುಗಳ ಅಧ್ಯಕ್ಷತೆಯಲ್ಲಿ ಅನುಭವ ಮಂಟಪವನ್ನು ಪ್ರಾರಂಭಿಸುವ ಮೂಲಕ ಇಡೀ…

Read More

ಬೆಂಗಳೂರು/ಮಧುಗಿರಿ: ಮಧುಗಿರಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಿಂದ ನೃಪತುಂಗ ಸರ್ಕಲ್‌ವರೆಗೆ (ರಾಷ್ಟ್ರೀಯ ಹೆದ್ದಾರಿ–69) ಇರುವ 390 ಮೀಟರ್‌ ವರೆಗಿನ ಅಪಾಯಕಾರಿ ಬ್ಲಾಕ್ ಸ್ಪಾಟ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರೂ. 29.94 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣದ ಈ ನಿರ್ದಿಷ್ಟ ಪ್ರದೇಶದಲ್ಲಿ ಕಳೆದ 8 ವರ್ಷಗಳಿಂದ ಒಟ್ಟು 10 ಅಪಘಾತಗಳು ಸಂಭವಿಸಿದ್ದು, ದುರದೃಷ್ಟವಶಾತ್ 4 ಮಂದಿ ಪ್ರಾಣ ಕಳೆದುಕೊಂಡಿದ್ದರು ಹಾಗೂ 8 ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ ಬ್ಲಾಕ್ ಸ್ಪಾಟ್ ಅನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿಪಡಿಸಬೇಕು ಎಂಬುದು ಸಾರ್ವಜನಿಕರ ಮತ್ತು ಸ್ಥಳೀಯರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಜನರ ಈ ಪ್ರಮುಖ ಸಮಸ್ಯೆಗೆ ಸ್ಪಂದಿಸುವಂತೆ ಕೋರಿ, ಕೇಂದ್ರ ಸಚಿವ ವಿ. ಸೋಮಣ್ಣ ಅವರು ಜೂನ್ 17ರಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಗಳಿಗೆ ಅಧಿಕೃತ ಪತ್ರ…

Read More

ಬೀದರ್: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ರಾಮ್ ಗಣೇಶ್ ಮಂಡಲ್ ವತಿಯಿಂದ ಗಣೇಶೋತ್ಸವದ ಸಂಭ್ರಮವು ಅತ್ಯಂತ ವಿಜೃಂಭಣೆಯಿಂದ ಪ್ರಾರಂಭವಾಯಿತು. ಉತ್ಸವದ ಮೊದಲ ದಿನವಾದ ಇಂದು ಬೃಹತ್ ಹಾಗೂ ಆಕರ್ಷಕ ಗಾತ್ರದ ಗಣಪತಿಯನ್ನು ವಿಧ್ಯುಕ್ತವಾಗಿ ಪ್ರತಿಷ್ಠಾಪಿಸಿ, ವಿಶಿಷ್ಟ ಪೂಜೆಗಳನ್ನು ನೆರವೇರಿಸಲಾಯಿತು. ಮಂಡಳದಿಂದ ಪ್ರತಿಷ್ಠಾಪಿಸಿರುವ ಈ ಬೃಹತ್ ಗಾತ್ರದ ಗಣಪತಿಯು ಕಣ್ಣಿಗೆ ಆಕರ್ಷಕವಾಗಿ ಕಾಣುತ್ತಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಅದ್ಭುತ ಪ್ರತಿಮೆಯನ್ನು ಕಣ್ತುಂಬಿಕೊಳ್ಳಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಂಜೆ 8:00 ಗಂಟೆಗೆ ಗಣೇಶನ ಮೊದಲ ದಿನದ ಧಾರ್ಮಿಕ ಪೂಜಾ ವಿಧಿವಿಧಾನಗಳು ಆರಂಭಗೊಂಡು ಭಕ್ತಿಭಾವದಿಂದ ನೆರವೇರಿದವು. ಪೂಜೆಯ ನಂತರ ಆಗಮಿಸಿದ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಸಮರ್ಪಿಸಲಾಯಿತು. ಉತ್ಸವದ ಮುಂದುವರಿದ ಭಾಗವಾಗಿ, ಇನ್ನುಳಿದ ಐದು ದಿನಗಳ ಕಾಲ ಪ್ರತಿದಿನ ಸಂಜೆ ವಿಶೇಷ ಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲು ಕಮಿಟಿಯ ಸದಸ್ಯರು ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದ್ದಾರೆ. ಬೀದರ್ ನಗರದ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿಘ್ನಹರ್ತ ಶ್ರೀ ಗಣೇಶನ ಆಶೀರ್ವಾದ ಪಡೆದುಕೊಳ್ಳಬೇಕಾಗಿ…

Read More

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಮುಂಗಾರು ಮಳೆಯ ಅನಿಶ್ಚಿತತೆ ಹಾಗೂ ತೀವ್ರ ಮಳೆ ಕೊರತೆಯಿಂದ ಕಂಗಾಲಾದ ರೈತರೊಬ್ಬರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬೀನ್‌ ಬೆಳೆಯನ್ನು ಟ್ರ್ಯಾಕ್ಟರ್‌ ಹರಿಸಿ ನಾಶಪಡಿಸಿರುವ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ಕಾಸರತೂಗಾಂವ್‌ ಗ್ರಾಮದ ರೈತ ದಿಗಂಬರ ಬಿರಾದರ್‌ ಅವರು ತಮ್ಮ ಸ್ವಂತ 5 ಎಕರೆ ಜಮೀನಿನಲ್ಲಿ ಸೋಯಾಬೀನ್‌, ಹೆಸರು ಮತ್ತು ಉದ್ದು ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಹಂಗಾಮಿನಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೆ ಬೆಳೆ ಸಂಪೂರ್ಣವಾಗಿ ಬಾಡತೊಡಗಿತು. ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೇಸತ್ತು ಮೂರು ಎಕರೆ ಪ್ರದೇಶದಲ್ಲಿದ್ದ ಸೋಯಾಬೀನ್‌ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ರೈತ ದಿಗಂಬರ ಬಿರಾದರ್‌, ಬೀಜ, ಗೊಬ್ಬರ, ಕೀಟನಾಶಕ ಹಾಗೂ ಕೂಲಿ ಸೇರಿ ಇಲ್ಲಿಯವರೆಗೆ 50 ರಿಂದ 60 ಸಾವಿರ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದ ಮಾಂಜ್ರಾ ನದಿ ಪ್ರವಾಹದಿಂದ ಬೆಳೆ ನಾಶವಾಗಿತ್ತು. ಈ ಬಾರಿ ಅನಾವೃಷ್ಟಿಯಿಂದ ಬೆಳೆ…

Read More

ಕಲಬುರಗಿ: ನಗರದ ಹೀರಾಪುರ ರಸ್ತೆಯ ಫ್ಲೈ ಓವರ್ ಮೇಲೆ ಗಣೇಶ ಮೂರ್ತಿ ತರಲು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಕೊಟನೂರು ಬಡಾವಣೆಯ ಪ್ರಶಾಂತ್ ಬಿರಾದರ್ (23) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಬೈಕ್‌ ನಲ್ಲಿ ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಳೆದ ರಾತ್ರಿ ಪ್ರಶಾಂತ್ ಹಾಗೂ ಅವರ ಸ್ನೇಹಿತರು ಗಣೇಶನ ಮೂರ್ತಿಯನ್ನು ತರಲು ಬೈಕ್‌ ನಲ್ಲಿ ಹೊರಟಿದ್ದರು. ಈ ವೇಳೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ (ಪಕ್ಕದ ಬೈಕ್ ಟಚ್ ಆಗಿ) ಸವಾರರು ಕೆಳಗೆ ಬಿದ್ದಿದ್ದಾರೆ. ಅಪಘಾತದ ರಭಸಕ್ಕೆ ಇಬ್ಬರು ಸವಾರರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್ ಬಿರಾದರ್ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯೊಪ್ಪಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಯುವಕನ ಸ್ಥಿತಿ ಅತೀವ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನಾ ಸಂಬಂಧ…

Read More

ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ ಗೃಹಪ್ರವೇಶವು ಅತ್ಯಂತ ಸರಳ ಹಾಗೂ ಖಾಸಗಿಯಾಗಿ ಶಾಸ್ತ್ರೋಕ್ತವಾಗಿ ನೆರವೇರಿದೆ. ಯಾವುದೇ ರಾಜಕೀಯ ಅದ್ದೂರಿತನವಿಲ್ಲದೆ, ರಾಜಕೀಯ ನಾಯಕರು ಹಾಗೂ ಸಾರ್ವಜನಿಕರಿಗೆ ಯಾವುದೇ ಆಹ್ವಾನ ನೀಡದೆ, ಅತ್ಯಂತ ಗೌಪ್ಯವಾಗಿ ಈ ಧಾರ್ಮಿಕ ಕಾರ್ಯಕ್ರಮ ಜರುಗಿದೆ. ಭಾನುವಾರ ರಾತ್ರಿಯಿಂದಲೇ ನೂತನ ಮನೆಯಲ್ಲಿ ಗಣಪತಿ ಹೋಮ, ವಾಸ್ತು ಹೋಮ ಸೇರಿದಂತೆ ವಿವಿಧ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು ಆರಂಭವಾಗಿದ್ದವು. ಸೋಮವಾರ ಮುಂಜಾನೆ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ನೇತೃತ್ವದಲ್ಲಿ ಪೂರ್ಣಾಹುತಿ ಹಾಗೂ ಗೃಹಪ್ರವೇಶದ ವಿಧಿಗಳು ಜರುಗಿದವು. ಕುಟುಂಬದ ಕೆಲವೇ ಕೆಲವು ಸದಸ್ಯರು ಮತ್ತು ಆಪ್ತರಷ್ಟೇ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಿದ್ದರಾಮಯ್ಯ ಅವರ ಮೈಸೂರು ಭೇಟಿಯ ಮಾಹಿತಿಯನ್ನೂ ಕೂಡ ಮುಂಚಿತವಾಗಿ ಗುಟ್ಟಾಗಿಡಲಾಗಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಮತ್ತು ದೀರ್ಘಕಾಲ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಮೈಸೂರಿನಲ್ಲಿ ಸ್ವಂತ ಮನೆಯಿರಲಿಲ್ಲ. ಮೈಸೂರಿನಲ್ಲಿ…

Read More

ಕೊರಟಗೆರೆ: ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಗಣೇಶನ ಪ್ರತಿಷ್ಠಾಪನೆಗಾಗಿ ಪೆಂಡಲ್ ಹಾಕುವ ಸಂದರ್ಭದಲ್ಲಿ ಚಪ್ಪರದಿಂದ ಬಿದ್ದು 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಬುರುಗನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬುರುಗನಹಳ್ಳಿ ಗ್ರಾಮದ ಗೋವಿಂದರಾಜು (65) ಮೃತರು. ಗಣೇಶನ ಪ್ರತಿಷ್ಠಾಪನೆಗಾಗಿ ಪೆಂಡಲ್ ಹಾಕುವ ಕೆಲಸದಲ್ಲಿ ತೊಡಗಿದ್ದ ಅವರು ಚಪ್ಪರದ ಮೇಲಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚರಂಡಿಯಲ್ಲಿದ್ದ ಕಲ್ಲಿಗೆ ತಲೆ ಬಲವಾಗಿ ಅಪ್ಪಳಿಸಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಣೇಶ ಚತುರ್ಥಿಯ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ನಡೆದ ಈ ಅನಿರೀಕ್ಷಿತ ದುರಂತದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ದುಃಖ ಮಡುಗಟ್ಟಿದ್ದು, ಗೋವಿಂದರಾಜು ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಬ್ಬದ ಸಡಗರದಲ್ಲಿದ್ದ ಬುರುಗನಹಳ್ಳಿ ಗ್ರಾಮದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ…

Read More

ತುರುವೇಕೆರೆ: ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ತಮ್ಮ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಎಸ್.ವಸಂತ್ ಕುಮಾರ್ ಆರೋಪಿಸಿದರು. ಅವರು ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರ ಸಹಿ ಇರುವ ಶಿಫಾರಸು ಪತ್ರ ಬಹಿರಂಗಪಡಿಸುತ್ತಾ ಇತ್ತೀಚಿಗೆ ಶಾಸಕರು ನೀಡಿದ್ದ ಬೇಜವಾಬ್ದಾರಿ ಹೇಳಿಕೆಗಳಿಗೆ ಅಧಿಕೃತ ದಾಖಲೆಗಳ ಸಮೇತ ತಿರುಗೇಟು ನೀಡಿದರು. ಕಾಂಗ್ರೆಸ್ ಸರ್ಕಾರದಲ್ಲಿ 13% ಕಮಿಷನ್ ನೀಡದೆ ಕೆಲಸಗಳಾಗುವುದಿಲ್ಲ ಎಂದು ಶಾಸಕರು ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ನೀವೇ ಲೇಟರ್ ಹೆಡ್ ನೀಡಿ ಕೆಲಸ ಮಂಜೂರು ಮಾಡಿಸಿಕೊಂಡು ಬಂದಿದ್ದೀರಿ. ಅಂದ ಮೇಲೆ, ನೀವೇ ಆ 13% ಕಮಿಷನ್ ಕೊಟ್ಟು ಕೆಲಸ ತಂದಿದ್ದೀರಿ. ಹಾಗಿದ್ದರೆ ಆ ಕಮಿಷನ್ ಹಣವನ್ನು ಯಾರಿಗೆ ಕೊಟ್ಟಿದ್ದೀರಿ ಎಂಬುದನ್ನು ಜನತೆಯ ಮುಂದೆ ಸ್ಪಷ್ಟಪಡಿಸಿ. ಇದು ಸಾರ್ವಜನಿಕರ ತೆರಿಗೆ ಹಣ. ಕಾಂಗ್ರೆಸ್ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಕೊಟ್ಟ ಅನುದಾನವನ್ನು ದುರುಪಯೋಗಪಡಿಸಿಕೊಳ್ಳಲು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದರು.…

Read More