Subscribe to Updates
Get the latest creative news from FooBar about art, design and business.
- ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
- ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
- ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
- ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
- ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
- ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
Author: Ganesh Tumkuru
ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ ಪ್ರಾರಂಭವಾಗಿದ್ದು, ಸಾಕಷ್ಟು ಅರ್ಜಿಗಳನ್ನ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತಾಲೂಕಿನ ಕೋಳಾಲ ಗ್ರಾಮದ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಅರ್ಜಿ ಸ್ವೀಕರಿಸಿ ಮಾತನಾಡಿದರು. ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ ಮಾರ್ಗದರ್ಶನದಲ್ಲಿ ಕೋಳಾಲ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಪ್ರಜಾ ಸೇವಾ ಅಭಿಯಾನ ಮಾಡಲಾಗುತ್ತಿದ್ದು, ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮುಖ್ಯವಾಗಿ ಭೂ ಮಾಪನ ಇಲಾಖೆಯ ತತ್ಕಾಲ್ ಪೋಡಿ, ದುರಸ್ಥಿ, ತಿದ್ದುಪಡಿ, ಆರ್.ಆರ್.ಟಿ ಆಗಿಲ್ಲ ಮತ್ತು 3–4 ತಿಂಗಳಿಂದ ದಿನಕ್ಕೆ 2 ಗಂಟೆಯಷ್ಟೇ ಪಂಪ್ ಸೆಟ್ ವಿದ್ಯುತ್ ನೀಡುತ್ತಿದ್ದು, ಹೆಚ್ಚಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ರೈತರು ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ಹಾಗೂ ತಾಲ್ಲೂಕು…
ಬೆಂಗಳೂರು: ಬೆಂಗಳೂರಿನ ಗಾಂಧಿ ಭವನದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ (ರಿ.) ರಾಜ್ಯ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಮತ್ತು ಸನ್ಮಾನ ಸಮಾರಂಭವು ಅತ್ಯಂತ ಅರ್ಥಪೂರ್ಣವಾಗಿ ನೆರವೇರಿತು. ಸಂಘಟನೆಯ ರಾಜ್ಯ ಅಧ್ಯಕ್ಷರಾದ ಮುತ್ತಣ್ಣ ಎಸ್. ಶಿವಳ್ಳಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವರಾದ ಸಿ.ಎಂ. ಇಬ್ರಾಹಿಂ, ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷರಾದ ಶಿವಣ್ಣ ಬಿ., ಹಾಸನ ಜಿಲ್ಲಾ ಸಂಚಾಲಕರಾದ ಮಂಜು ಶ್ರವಣೂರು (ಮಂಜನಾಯಕ ಎಸ್.ಸಿ.), ರಾಜ್ಯ ಉಪಾಧ್ಯಕ್ಷರಾದ ದೊಡ್ಡಳ್ಳಿ ದೊಡ್ಡೇಗೌಡರು ಸೇರಿದಂತೆ ರಾಜ್ಯ ಹಾಗೂ ವಿವಿಧ ಜಿಲ್ಲೆ, ತಾಲೂಕುಗಳ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಾಮಾಜಿಕ ನ್ಯಾಯ, ಸಮಾನತೆ, ಸ್ವಾಭಿಮಾನ ಹಾಗೂ ಶೋಷಿತ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಸದಾ ಧ್ವನಿಯಾಗುವ ಸಂಕಲ್ಪದೊಂದಿಗೆ ಹೊಸ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಗೌರವ ಮತ್ತು ಸಮಾನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಲು ಈ ವೇದಿಕೆಯಲ್ಲಿ ತೀರ್ಮಾನಿಸಲಾಯಿತು. “ಒಗ್ಗಟ್ಟೇ ನಮ್ಮ ಶಕ್ತಿ…
ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ಪತ್ನಿಯ ಜತೆಗಿನ ವಿವಾದದಿಂದ ನೊಂದ ವ್ಯಕ್ತಿಯೊಬ್ಬ ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ಆತಂಕ ಸೃಷ್ಟಿಸಿದ ರೋಚಕ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬ್ರೂಸ್ಪೇಟೆ ಪೊಲೀಸ್ ಠಾಣೆಯ ಮುಂಭಾಗವೇ ಈ ಹೈಡ್ರಾಮಾ ನಡೆದಿದ್ದು, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಬಳ್ಳಾರಿಯ ಮುರಾರ್ಜಿ (ಮುಂದರಗಿ) ಪ್ರದೇಶದ ನಿವಾಸಿ ಇಸ್ಮಾಯಿಲ್ ಟ್ರಾನ್ಸ್ಫಾರ್ಮರ್ ಏರಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಹಾಗೂ ಅವರ ಪತ್ನಿ ಕೌಟುಂಬಿಕ ಸಮಸ್ಯೆಗೆ ಸಂಬಂಧಿಸಿದಂತೆ ಬ್ರೂಸ್ಪೇಟೆ ಪೊಲೀಸ್ ಠಾಣೆಗೆ ಬಂದಿದ್ದರು. ಠಾಣೆಯಲ್ಲಿ ಪೊಲೀಸರು ಇವರ ವಿಚಾರಣೆ ನಡೆಸುತ್ತಿದ್ದ ವೇಳೆ, ಇಸ್ಮಾಯಿಲ್ ಹಠಾತ್ತನೆ ಠಾಣೆಯಿಂದ ಹೊರಗೋಡಿ ಬಂದಿದ್ದಾರೆ. ಬಳಿಕ ಠಾಣೆಯ ಎದುರು ಇದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಹತ್ತಿ ಕುಳಿತಿದ್ದಾರೆ. ಪತ್ನಿಯ ಕಾಟ ಹಾಗೂ ಕೌಟುಂಬಿಕ ಕಲಹಕ್ಕೆ ಬೇಸತ್ತು ಅವರು ಈ ರೀತಿ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಜೀವಂತ ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ವ್ಯಕ್ತಿ ಕುಳಿತಿರುವುದನ್ನು ಕಂಡು ಪೊಲೀಸರು ಮತ್ತು ಸ್ಥಳೀಯರು ತೀವ್ರ ಆತಂಕಕ್ಕೊಳಗಾದರು. ತಕ್ಷಣವೇ ಎಚ್ಚೆತ್ತ…
ಬೆಂಗಳೂರು: ಪೊಲೀಸ್ ಠಾಣೆಗೆ ನುಗ್ಗುವುದಾಗಿ ಎಚ್ಚರಿಕೆ ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ಠಾಣೆಗೆ ನುಗ್ಗಿ, ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ಉಚಿತ ವ್ಯವಸ್ಥೆ ಮಾಡಲಾಗುವುದು ಎಂದು ತಿರುಗೇಟು ನೀಡಿದ್ದಾರೆ. ಗಣೇಶ ಹಬ್ಬದ ಮೆರವಣಿಗೆ ಹಾಗೂ ಸೂಕ್ಷ್ಮ ಪ್ರದೇಶಗಳ ಮಾರ್ಗದ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಶಾಂತಿ ಸಭೆಯಲ್ಲಿ ಇನ್ಸ್ಪೆಕ್ಟರ್ ಧನಂಜಯ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿ, “ಯಾರಿಗೆ ಧಮ್ಕಿ ಹಾಕ್ತೀರಿ? ಇನ್ನೊಮ್ಮೆ ಈ ರೀತಿ ಮಾತನಾಡಿದರೆ ನಾನೇ ನೇರವಾಗಿ ಪೊಲೀಸ್ ಠಾಣೆಗೆ ನುಗ್ಗುತ್ತೇನೆ” ಎಂದು ಎಚ್ಚರಿಕೆ ನೀಡಿದ್ದರು. ಪ್ರತಾಪ್ ಸಿಂಹ ಅವರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಾಮಾಜಿಕ ಜಾಲತಾಣದ ಮೂಲಕ ತೀವ್ರವಾಗಿ ತರಾಟೆಗೆ…
ರಾಯಚೂರು: ತನ್ನ ತಂಗಿಯೊಂದಿಗೆ ಅನೈತಿಕ ಸಂಬಂಧವಿರುವ ಶಂಕೆಯ ಹಿನ್ನೆಲೆಯಲ್ಲಿ, ಮನೆಯಲ್ಲಿ ಊಟ ಮಾಡುತ್ತಿದ್ದ ಯುವಕನನ್ನು ಮತ್ತೊಬ್ಬ ಯುವಕ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಹನುಮೇಶ್ (32) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಅದೇ ಏರಿಯಾದ ಆರೋಪಿ ಶಂಕರ್, ಹತ್ಯೆಯ ಬಳಿಕ ತಾನಾಗಿಯೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಹನುಮೇಶ್ ಅವಿವಾಹಿತನಾಗಿದ್ದು, ಭತ್ತದ ವ್ಯಾಪಾರ ಮಾಡಿಕೊಂಡು ತಂದೆ–ತಾಯಿ ಹಾಗೂ ತಮ್ಮನೊಂದಿಗೆ ವಾಸವಾಗಿದ್ದ. ಶುಕ್ರವಾರ (ಸೆಪ್ಟೆಂಬರ್ 12) ಬೆಳಿಗ್ಗೆ 10:30ರ ಸುಮಾರಿಗೆ ಕುಟುಂಬದವರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ ಹನುಮೇಶ್ ಮನೆಯಲ್ಲಿ ಒಬ್ಬನೇ ಇದ್ದನು. ಆತ ಊಟ ಮುಗಿಸಿ ಭತ್ತದ ವ್ಯಾಪಾರಕ್ಕೆ ತೆರಳಲು ಸಜ್ಜಾಗುತ್ತಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ಶಂಕರ್, ಹಿಂಬದಿಯಿಂದ ದಾಳಿ ನಡೆಸಿ ಹನುಮೇಶ್ ನ ತಲೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಶಂಕರ್ ಹಾಗೂ ಮೃತ ಹನುಮೇಶ್ ಅವರ ಮನೆಗಳು ಅಕ್ಕಪಕ್ಕದಲ್ಲೇ…
ಬೆಂಗಳೂರು: ನಾಗೇಂದ್ರ ಪ್ರಕರಣದ ಬಳಿಕ, ಈಗ ಸಚಿವ ಡಿ.ಕೆ. ಶಿವಕುಮಾರ್ ಸಂಪುಟದ ಎರಡನೇ ವಿಕೆಟ್ ಪತನಕ್ಕೆ ಪ್ರತಿಪಕ್ಷ ಬಿಜೆಪಿ ಎದುರು ನೋಡುತ್ತಿದೆ. ಜಾರಿ ನಿರ್ದೇಶನಾಲಯದ (ED) ತನಿಖೆ ಪೂರ್ಣಗೊಂಡು ಅವರು ನಿರ್ದೋಷಿ ಎಂದು ಸಾಬೀತಾಗುವವರೆಗೆ, ಲೋಕೋಪಯೋಗಿ ಇಲಾಖೆ (PWD) ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಇಡಿ (ED) ಬಿಡುಗಡೆ ಮಾಡಿರುವ ಹೇಳಿಕೆಯು ಕರ್ನಾಟಕದಲ್ಲಿನ ರಾಹುಲ್ ಗಾಂಧಿಯವರ ‘ಎಟಿಎಂ ಸರ್ಕಾರ’ದ ಮೇಲೆ ತೀವ್ರ ಅನುಮಾನದ ಕಾರ್ಮೋಡವನ್ನು ಸೃಷ್ಟಿಸಿದೆ. ಪಿಡಬ್ಲ್ಯೂಡಿ ಗುತ್ತಿಗೆಗಳ ಮೂಲಕ ಸಂಗ್ರಹಿಸಿದ ಹಣವನ್ನು ವಿದೇಶದಲ್ಲಿ ಚಿನ್ನದ ಗಣಿಗಾರಿಕೆಯಾಗಿ ಪರಿವರ್ತಿಸಲಾಗಿದೆ ಎಂಬ ಗಂಭೀರ ಆರೋಪವನ್ನು ಸಚಿವ ಸತೀಶ್ ಜಾರಕಿಹೊಳಿ ಎದುರಿಸುತ್ತಿದ್ದಾರೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ. ಗುತ್ತಿಗೆದಾರರಿಂದ ಸಂಗ್ರಹಿಸಿದ ಹಣವನ್ನು ಅನಧಿಕೃತ ಮಾರ್ಗಗಳ ಮೂಲಕ ವಿದೇಶದಲ್ಲಿ ಆಸ್ತಿಗಳನ್ನು ಖರೀದಿಸಲು ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿನ ಚಿನ್ನದ ಗಣಿಗಾರಿಕೆ ಕಂಪನಿಯೊಂದರಲ್ಲಿ ಸುಮಾರು ಶೇ. 40ರಷ್ಟು ಪಾಲು ಪಡೆಯಲು…
ಹುಬ್ಬಳ್ಳಿ: ನಗರದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗಾಗಿ ತರುವ ವೇಳೆ ಮೆರವಣಿಗೆಯಲ್ಲಿ ಕೆಲ ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ. ಈ ಕುರಿತು ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಕಿಡಿಗೇಡಿಗಳಿಗೆ ಲಾಠಿ ಏಟಿನ ಮೂಲಕ ತಕ್ಕ ಪಾಠ ಕಲಿಸಿದ್ದಾರೆ. ಸೆಪ್ಟೆಂಬರ್ 12ರ ರಾತ್ರಿ ಸುಮಾರು 9:30ರ ವೇಳೆಗೆ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ಸಾಗುವ ರಸ್ತೆಯ ಬಳಿ ಮೇದಾರ್ ಓಣಿಯ ಗಣಪತಿ ಮತ್ತು ಕಲಾಲ್ ಓಣಿಯ ಗಣಪತಿ ಮೆರವಣಿಗೆಗಳು ಮುಖಾಮುಖಿಯಾಗಿದ್ದವು. ಈ ಸಂದರ್ಭದಲ್ಲಿ ಕಲಾಲ್ ಓಣಿಯ ಗಣಪತಿ ಡಿಜೆ ಮುಂದೆ ಕೆಲ ಯುವಕರು ಮದ್ಯದ ಅಮಲಿನಲ್ಲೋ ಅಥವಾ ಉನ್ಮಾದದಲ್ಲೋ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಲು ಮುಂದಾಗಿದ್ದಾರೆ. ಮೆರವಣಿಗೆಯಲ್ಲಿ ಮಹಿಳೆಯರಿಗೆ ಕಿರಿಕುಳ ನೀಡುತ್ತಿರುವ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಯಾವುದೇ ದೊಡ್ಡ ಅಹಿತಕರ ಘಟನೆಗೆ ಅವಕಾಶ ನೀಡದೆ ಕೂಡಲೇ ಮಧ್ಯಪ್ರವೇಶಿಸಿದ್ದಾರೆ. ಕೇವಲ 30 ಸೆಕೆಂಡ್ ಗಳಿಗಿಂತ ಕಡಿಮೆ ಅವಧಿಯಲ್ಲಿ ಕನಿಷ್ಠ ಬಲಪ್ರಯೋಗ ಮಾಡಿ, ಅಸಭ್ಯ ವರ್ತನೆ…
ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಅನ್ವಯ, ಈ ಹಿಂದೆ ಬುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಬಸವರಾಜ ಜಾಬಶೆಟ್ಟಿ ಅವರ ಸ್ಥಾನಕ್ಕೆ ವಿನೋದ ಅಪ್ಪೆ ಅವರನ್ನು ನೇಮಿಸಲಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಸೆಪ್ಟೆಂಬರ್ 11 ರಂದು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ವರದಿ: ಅರವಿಂದ ಮಲ್ಲೀಗೆ, ಬೀದರ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ತಿಪಟೂರು: ನಗರದ ವಿವಿಧ ಹೋಟೆಲ್ ಗಳು, ಡಾಬಾಗಳು ಮತ್ತು ಬೇಕರಿಗಳ ಮೇಲೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಕಳಪೆ ಗುಣಮಟ್ಟದ ಹಾಗೂ ಅವಧಿ ಮೀರಿದ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕು ವೈದ್ಯಾಧಿಕಾರಿ ಚೆನ್ನಕೇಶವ ಈ ಕುರಿತು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯ ವೇಳೆ ಕೆಲವು ಹೋಟೆಲ್ ಗಳಲ್ಲಿ ಯಾವುದೇ ಸ್ವಚ್ಛತೆ ಇಲ್ಲದೆ ಕೊಳೆತ ತರಕಾರಿಗಳನ್ನು ಬಳಸುವುದು ಕಂಡುಬಂದಿದ್ದು, ತ್ರಿಗುಣ ಡಾಬಾ ಹಾಗೂ ರೇಣುಕಾ ಬಾರ್ ಅಂಡ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ. ನಕ್ಷತ್ರ ಬಾರ್ ನಲ್ಲಿಯೂ ಸ್ವಚ್ಛತೆ ಕೊರತೆ ಕಂಡುಬಂದಿದ್ದು, ಅಲ್ಲಿ ಅವಧಿ ಮೀರಿದ ಮೊಸರು ಪತ್ತೆಯಾಗಿದೆ. ಇದೇ ಮಾರ್ಗದಲ್ಲಿರುವ ಯಶಸ್ ಬೇಕರಿಯನ್ನು ಪರಿಶೀಲಿಸಿದಾಗ, ಪರವಾನಗಿ ಅವಧಿ ಮುಗಿದು ಆರು ತಿಂಗಳಾದರೂ ಯಾವುದೇ ನವೀಕರಣವಿಲ್ಲದೆ ಬೇಕರಿ ನಡೆಸುತ್ತಿರುವುದು ತಿಳಿದುಬಂದಿದೆ. ಈ ಎಲ್ಲಾ ನಿಯಮ ಉಲ್ಲಂಘನೆಗಳಿಗೂ ಸಂಬಂಧಪಟ್ಟವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ನಗರಸಭೆ ಆಯುಕ್ತರಾದ ವಿಶ್ವೇಶ್ವರ ಭದ್ರಗಡ್ಡೆ ಮಾತನಾಡಿ, ತಿಪಟೂರು ನಗರ ಸಭೆ ವ್ಯಾಪ್ತಿಯಲ್ಲಿ ಉತ್ತಮ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಬೆನ್ನಲ್ಲೇ, ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಕಿಡಿಕಾರಿದ್ದಾರೆ. ಸರ್ಕಾರವು ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಸಾಧನೆ ಮಾಡುವುದಕ್ಕಿಂತ ಪ್ರಚಾರಕ್ಕೇ ಹೆಚ್ಚಿನ ಒತ್ತು ನೀಡಿದೆ ಎಂದು ಅವರು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರಿಗೆ ಮುಖ್ಯಮಂತ್ರಿಯಂತೆ ಕಾಣದೆ “ರಿಯಲ್ ಎಸ್ಟೇಟ್ ಏಜೆಂಟ್” ರೀತಿಯಲ್ಲಿ ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯದಿದ್ದರೂ, ಕೇವಲ 100 ದಿನಗಳ ಸಂಭ್ರಮಾಚರಣೆ ಹೆಸರಿನಲ್ಲಿ ಜನರನ್ನು ಮರಳು ಮಾಡಲಾಗುತ್ತಿದೆ ಎಂದು ಟೀಕಿಸಿದರು. ಸರ್ಕಾರವು ಯಾವುದೇ ಕಣ್ಣಿಗೆ ಕಾಣುವ ಸಾಧನೆ ಮಾಡಿಲ್ಲ, ಕೇವಲ ಜಾಹೀರಾತು ಮತ್ತು ಪ್ರಚಾರದಲ್ಲಷ್ಟೇ ನಂಬರ್ ಒನ್ ಆಗಿದೆ. ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತು ಎದುರಾಗಿರುವ ಸಮಸ್ಯೆಗಳಿಂದ ಪಾರಾಗಲು ಮುಖ್ಯಮಂತ್ರಿಗಳು ದೇವಸ್ಥಾನಗಳಿಗೆ ಅಲೆಯುತ್ತಿದ್ದಾರೆ. ಬರ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ‘ಬ್ರ್ಯಾಂಡ್…