Subscribe to Updates
Get the latest creative news from FooBar about art, design and business.
- ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
- ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
- ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
- ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
- ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
- ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
Author: Ganesh Tumkuru
ಬೆಂಗಳೂರು: ತಮ್ಮ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ ಬೆನ್ನಲ್ಲೇ, ತಮ್ಮ ವಿರುದ್ಧ ಇ.ಡಿ.ಗೆ ದೂರು ನೀಡಿದ ವ್ಯಕ್ತಿ ಯಾರೆಂಬುದು ತಮಗೆ ತಿಳಿದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗೆ ಮಾಹಿತಿ ನೀಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ವಿರುದ್ಧ ಇ.ಡಿ.ಗೆ ದೂರು ಕೊಟ್ಟವರು ಯಾರೆಂಬುದರ ಬಗ್ಗೆ ಮಾಹಿತಿ ಕಲೆಹಾಕಿದ್ದೇನೆ ಮತ್ತು ನನಗೆ ಮುಂಚಿತವಾಗಿಯೇ ವಿಷಯ ತಿಳಿದಿತ್ತು. ದೂರು ನೀಡಿದವರು ಸ್ವಪಕ್ಷದವರೇ ಅಥವಾ ಬೇರೆಯವರೇ ಎಂಬುದನ್ನು ನಾವು ಪತ್ತೆ ಹಚ್ಚುತ್ತೇವೆ. ಎಲ್ಲರಿಗೂ ದೂರು ನೀಡುವ ಹಕ್ಕಿದೆ, ಆದರೆ ನಾವು ಈ ವಿಚಾರವನ್ನು ಕಾನೂನುಬದ್ಧವಾಗಿ ಹಾಗೂ ದಾಖಲೆಗಳೊಂದಿಗೆ ಎದುರಿಸುತ್ತೇವೆ” ಎಂದು ಹೇಳಿದರು. ಇ.ಡಿ. ಅಧಿಕಾರಿಗಳ ಪರಿಶೀಲನೆಯು ರಾಜಕೀಯ ಪ್ರೇರಿತವಾಗಿರಬಹುದು ಎಂದು ಅಭಿಪ್ರಾಯಪಟ್ಟ ಸಚಿವರು, ತಮಗೆ ಯಾವುದೇ ನೋಟಿಸ್ ಬಂದರೂ ಸೂಕ್ತ ಉತ್ತರ ನೀಡುವುದಾಗಿ ತಿಳಿಸಿದರು. ಮುಂದುವರಿದು, ತಮ್ಮ ಕುಟುಂಬದ ಒಟ್ಟು ವಹಿವಾಟು ಸಾವಿರಾರು ಕೋಟಿ ರೂಪಾಯಿಗಳಷ್ಟಿದ್ದು, ಪರಿಶೀಲನೆ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಂಚ ಗ್ಯಾರಂಟಿ’ ಯೋಜನೆಗಳ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲೇ ಈ ಯೋಜನೆಗಳು ರೂಪುಗೊಂಡವು ಎಂದು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಸಂಪಾದಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ‘ಅನ್ನಭಾಗ್ಯ’ (10 ಕೆ.ಜಿ. ಅಕ್ಕಿ ನೀಡುವ ಯೋಜನೆ) ಒಂದನ್ನು ಹೊರತುಪಡಿಸಿ, ಉಳಿದ ಎಲ್ಲಾ ನಾಲ್ಕು ಯೋಜನೆಗಳು ತಮ್ಮದೇ ಕಲ್ಪನೆಯಲ್ಲಿ ಮೂಡಿಬಂದವು ಎಂದು ತಿಳಿಸಿದರು. “ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದ ಅವಧಿಯಲ್ಲೇ ಈ ಪಂಚ ಗ್ಯಾರಂಟಿ ಯೋಜನೆಗಳ ನೀಲನಕ್ಷೆ ಸಿದ್ಧವಾಗಿತ್ತು. ಇದರಲ್ಲಿ 10 ಕೆ.ಜಿ. ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರ ಆಲೋಚನೆಯಾಗಿದ್ದರೆ, ಉಳಿದ ಗ್ಯಾರಂಟಿಗಳನ್ನು ನಾನೇ ಸಿದ್ಧಪಡಿಸಿದ್ದು, ಅವುಗಳ ಕಲ್ಪನೆಯೂ ನನ್ನದೇ ಆಗಿತ್ತು” ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಇದೇ ವೇಳೆ, ಪಕ್ಷದ ಸಂಘಟನೆ, ಭಾರತ್ ಜೋಡೋ ಯಾತ್ರೆಯ ಯಶಸ್ವಿ ಸಂಘಟನೆ ಹಾಗೂ ರಾಜ್ಯದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿರುವ ಕುರಿತು ಕೂಡ ಅವರು…
ಬೆಂಗಳೂರು: ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ’80ರ ದಶಕದ ಟ್ರೆಂಡ್’ (1980s AI Photo Trend) ಜೋರಾಗಿಯೇ ಸದ್ದು ಮಾಡುತ್ತಿದೆ. ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು ಸೇರಿದಂತೆ ಸಾಮಾನ್ಯ ಜನರೂ ಸಹ ತಮ್ಮ ಹಳೆಯ ಅಥವಾ ಈಗಿನ ಫೋಟೋಗಳನ್ನು 80ರ ದಶಕದ ರೆಟ್ರೋ ಲುಕ್ಗೆ (Retro Look) ಅಂದರೆ ಕರ್ಲಿ ಹೇರ್ ಸ್ಟೈಲ್, ಡೆನಿಮ್ ಜೀನ್ಸ್ ಹಾಗೂ ಹಳೆಯ ಕಾಲದ ಶೈಲಿಗೆ ಬದಲಾಯಿಸಿಕೊಂಡು ವಾಟ್ಸ್ಆ್ಯಪ್ ಸ್ಟೇಟಸ್, ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಈ ಹುಚ್ಚಾಟಕ್ಕೆ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳುವಂತೆ ಸೈಬರ್ ತಜ್ಞರು ಮತ್ತು ಪೊಲೀಸರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಫೋಟೋ ಎಡಿಟಿಂಗ್ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುವ ಜಾಲ ಸಕ್ರಿಯವಾಗಿದೆ. 80ರ ದಶಕದ ಫೋಟೋಗಳನ್ನು ಸೃಷ್ಟಿಸಲು ಜನರು ವಿವಿಧ ಮೊಬೈಲ್ ಆ್ಯಪ್ ಗಳು ಹಾಗೂ ಆನ್ ಲೈನ್ ಲಿಂಕ್ಗಳನ್ನು ಅತಿ ಉತ್ಸಾಹದಿಂದ ಬಳಸುತ್ತಿದ್ದಾರೆ. ಯಾವುದೇ ಪರಿಶೀಲನೆ ಇಲ್ಲದೆ ಅಪರಿಚಿತ ಆ್ಯಪ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುವುದು ಮತ್ತು ಆ್ಯಪ್ ಗಳು ಕೇಳುವ…
ಹಾಸನ: ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ, ಹಾಸನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಮತ್ತು ಹಾಸನ ಸಂಸದರಾದ ಶ್ರೇಯಸ್ ಎಂ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೂತನವಾಗಿ ತಲೆ ಎತ್ತುತ್ತಿರುವ ಹೈಟೆಕ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಹಾಗೂ ಬಡವರಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆ ಒದಗಿಸುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಪ್ರಗತಿಯನ್ನು ಸಚಿವರು ಮತ್ತು ಸಂಸದರು ವೀಕ್ಷಿಸಿದರು. ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಅತ್ಯುತ್ತಮ ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಈ ಮಹತ್ತ್ವಾಕಾಂಕ್ಷಿ ಯೋಜನೆಗಳು ಆದಷ್ಟು ಶೀಘ್ರವಾಗಿ ಲೋಕಾರ್ಪಣೆಗೊಂಡು ಹಾಸನ ಜಿಲ್ಲೆಯ ಜನಸಾಮಾನ್ಯರಿಗೆ ಸರಕಾರಿ ಸೇವೆಗಳು ಹಾಗೂ ಉತ್ತಮ ಆರೋಗ್ಯ ಸೌಲಭ್ಯಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ವಹಿಸಲು ತಿಳಿಸಲಾಯಿತು. ವರದಿ: ಮಂಜು ಶ್ರವಣೂರು, ಹೊಳೆನರಸೀಪುರ. ನಮ್ಮತುಮಕೂರಿನ…
ತುಮಕೂರು: ಕಳೆದ ಎರಡು ದಶಕಗಳಿಂದ ಶಾಂತವಾಗಿದ್ದ ಪಾವಗಡ ತಾಲ್ಲೂಕಿನಲ್ಲಿ ಮತ್ತೆ ನಕ್ಸಲ್ ಹಾಗೂ ಬ್ಲ್ಯಾಕ್ ಮೇಲ್ ಚಟುವಟಿಕೆಗಳು ಮುನ್ನೆಲೆಗೆ ಬಂದಿವೆ. ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿ ಹಾಗೂ ಕಾಮ್ರೆಡ್ ದೇವಣ್ಣ ದಳಂ ಹೆಸರಿನಲ್ಲಿ ಬಂದಿರುವ ಬೆದರಿಕೆ ಪತ್ರವು ಗಡಿ ಭಾಗದ ಸಾರ್ವಜನಿಕರಲ್ಲಿ ಮತ್ತು ರೈತರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ. ತಾಲ್ಲೂಕಿನ ಗಂಗಾಸಾಗರ ಗ್ರಾಮದ ವಾಸಿಯಾದ ಮುತ್ತುಕುಂಟ ಭೂಪಪ್ಪ ಅವರ ತೋಟದ ಗೇಟ್ಗೆ ತೆಲುಗಿನಲ್ಲಿ ಬರೆದಿರುವ ಬೆದರಿಕೆ ಪತ್ರವನ್ನು ಅಂಟಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗುರುವಾರ ಬೆಳಕಿಗೆ ಬಂದಿರುವ ಈ ಕೃತ್ಯವು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಆಂಧ್ರ ಪ್ರದೇಶ ವಿಳಾಸ ಹೊಂದಿರುವ ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿ ಹಾಗೂ ದೇವಣ್ಣ ದಳಂ ಹೆಸರಿನ ಈ ಪತ್ರದಲ್ಲಿ, ಕನಿಕಲಬಂಡೆ ಗ್ರಾಮದ ಉಪ್ಪಾರ ವೆಂಕಟೇಶ್ ಎಂಬಾತನ ವಿರುದ್ಧದ ಪ್ರಕರಣಗಳ ಖರ್ಚಿಗಾಗಿ ಮತ್ತು ಪಕ್ಷದ ಬೆಳವಣಿಗೆಗೆ ಹಣದ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 16ರೊಳಗೆ ವಕೀಲ ಸುಬ್ಬರಾಯಪ್ಪ ಅವರ ಮೂಲಕ ಐದು ಲಕ್ಷ ರೂಪಾಯಿ ಹಣವನ್ನು ಕಳುಹಿಸಿಕೊಡುವಂತೆ…
ತುಮಕೂರು: ತುಮಕೂರು ದಸರಾ ಕೊಡುಗೆಯಾಗಿ ನಗರದ ಅಮಾನಿಕೆರೆಯಲ್ಲಿ ನಾವೀನ್ಯಪೂರ್ಣ ತೇಲುವ ಸಂಗೀತ ಕಾರಂಜಿ ಹಾಗೂ ಡಾ.ಶ್ರೀ ಶಿವ ಕುಮಾರ ಸ್ವಾಮೀಜಿ ವೃತ್ತದಲ್ಲಿ ‘ತುಮಕೂರು ಸ್ಕ್ವೇರ್’ ಶಾಶ್ವತ ನಿರ್ಮಾಣಕ್ಕೆ ಶುಕ್ರವಾರ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಶಿಲಾನ್ಯಾಸ ನೆರವೇರಿಸಿದರು. ಪ್ರತ್ಯೇಕವಾಗಿ ಗುದ್ದಲಿಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಅವರು, ಈ ಉಭಯ ಯೋಜನೆಗಳನ್ನು ಕೇವಲ ದಸರಾ ಹಬ್ಬಕ್ಕಾಗಿ ಮಾಡುತ್ತಿರುವುದಲ್ಲ, ಶಾಶ್ವತವಾಗಿ ಇರಲಿದ್ದು ನಗರವಾಸಿಗಳನ್ನು ರಂಜಿಸಲಿದೆ. ತುಮಕೂರು ನಗರದ ಸೌಂದರ್ಯವೂ ವೃದ್ಧಿಸಲಿದೆ. ಪ್ರಸ್ತುತ ವಾರದ ಪ್ರತಿ ಶನಿವಾರ, ಭಾನುವಾರ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವಂತೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ, ಆದರೆ ದಿನನಿತ್ಯವೂ ಅಗತ್ಯತೆ ಇದ್ದರೆ ಅದನ್ನು ಮುಂದೆ ನೋಡಿಕೊಂಡು ಆರಂಭಿಸಲಾಗುವುದು. ನೂರು ಅಡಿಗೂ ಹೆಚ್ಚು ಎತ್ತರಕ್ಕೆ ತೇಲುವ ಸಂಗೀತ ಕಾರಂಜಿಯು ಸುಮಾರು 300 ಅಡಿ ವಿಸ್ತೀರ್ಣಕ್ಕೆ ಹರಡಲಿದ್ದು, ಕಣ್ಣುಗಳಿಗೆ ರಸದೌತಣ ನೀಡಲಿದೆ. ವಿದೇಶಗಳ ಪ್ರಮುಖ ನಗರಗಳಲ್ಲಿ ಜನಾಕರ್ಷಣೆಯ ಸೆಂಟರ್ ಗಳಿರುತ್ತವೆ. ಉದಾಹರಣೆಗೆ ನ್ಯೂಯಾರ್ಕ್ನ ನ್ಯೂಯಾರ್ಕ್ ಸ್ಕ್ವೇರ್. ಅದೇ ಮಾದರಿಯಲ್ಲಿ…
ಬೀದರ್: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಕಲ್ಪಿಸಲು ಉದ್ದೇಶಿಸಿರುವ ಶೇ.7.5ರ ವಿಶೇಷ ಮೀಸಲಾತಿ ಸೌಲಭ್ಯವನ್ನು, ಗ್ರಾಮೀಣ ಭಾಗದ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಂಘ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುನಾಥ್ ರೆಡ್ಡಿ ಅವರು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಹಾಗೂ ನ್ಯಾಯಯುತ ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ. ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ತಿದ್ದುಪಡಿ ತಂದು, ಗ್ರಾಮೀಣ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ.7.5ರ ವಿಶೇಷ ಮೀಸಲಾತಿ ಕಲ್ಪಿಸುವ ಕರಡು ಅಧಿಸೂಚನೆಯನ್ನು ಸಂಘ ಸ್ವಾಗತಿಸಿದೆ. ಗ್ರಾಮೀಣ ಹಾಗೂ ಗಡಿಭಾಗದ ತಾಲೂಕುಗಳಲ್ಲಿರುವ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ 1 ರಿಂದ 10ನೇ…
ತಿಪಟೂರು: ರಾಜ್ಯದ ಬಹುಸಂಖ್ಯಾತ ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಸರ್ಕಾರಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಒತ್ತಾಯಿಸಿ, ಆದಿಜಾಂಬವ ಮಾದಿಗ ಸಮುದಾಯದ ಮಠಾಧೀಶರ ವೇದಿಕೆ ವತಿಯಿಂದ ಕೋಡಿಹಳ್ಳಿ ಆದಿಜಾಂಬವ ಸೇವಾಶ್ರಮದ ಶ್ರೀ ಷಡಕ್ಷರ ಮುನಿಮಹಾಸ್ವಾಮೀಜಿಗಳ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸ್ವಾಮೀಜಿಗಳು ನೊಣವಿನಕೆರೆ ಅಜ್ಜಯ್ಯನವರಿಗೆ ಗುರುವಂದನೆ ಸಲ್ಲಿಸಿ ಭಿನ್ನವತ್ತಳೆ ಅರ್ಪಿಸಿದರು. ಸಮಾಜದಲ್ಲಿ ಅತ್ಯಂತ ಹಿಂದುಳಿದಿರುವ ಮಾದಿಗ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯವಾಹಿನಿಯಲ್ಲಿರುವ ಮಠಮಾನ್ಯಗಳು ಶ್ರಮಿಸಬೇಕು ಎಂದು ಷಡಕ್ಷರಮುನಿ ಮಹಾಸ್ವಾಮೀಜಿಗಳು ತಿಳಿಸಿದರು. ಆರ್ಥಿಕವಾಗಿ ಸಬಲವಾಗಿರುವ ಮಠಗಳು ಸಣ್ಣಪುಟ್ಟ ಸಮಾಜಗಳ ಮಠಗಳನ್ನು ತಮ್ಮೊಂದಿಗೆ ಕೊಂಡೊಯ್ಯುವ ಮೂಲಕ ಧರ್ಮವನ್ನು ಉಳಿಸಿ, ಸಮಾಜವನ್ನು ಬಲಗೊಳಿಸುವ ಕೆಲಸ ಮಾಡಬೇಕು ಎಂದರು. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ, ಸಮುದಾಯದ ಮುಖಂಡ ಹಾಗೂ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡುವಂತೆ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಅಜ್ಜಯ್ಯನವರಲ್ಲಿ ಮನವಿ ಮಾಡಿದರು. ರಾಜ್ಯದ ಮಾದಿಗ ಸ್ವಾಮೀಜಿಗಳ ಒಕ್ಕೂಟದ ಗುರುವಂದನೆ ಸ್ವೀಕರಿಸಿ ಮಾತನಾಡಿದ ಶ್ರೀ ಕರಿವೃಷಭ…
ತುಮಕೂರು: ಒಂಬೈನ್ನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ. ಅಂತಹ ವಚನ ಚಳವಳಿಯನ್ನು ಪುಸ್ತಕ ರೂಪದಲ್ಲಿ ನೀಡಿರುವ ಬಸವಯುಗ ವೈಭವ ಪುಸ್ತಕ ಒಂದು ಐತಿಹಾಸಿಕ ಕೃತಿ ಎಂದು ರಾಷ್ಟ್ರೀಯ ಚಿಂತಕರು, ಮಾಜಿ ಸಂಸತ್ ಸದಸ್ಯರಾದ ಡಾ.ಬಸವರಾಜ ಪಾಟೀಲ್ ಸೇಡಂ ಅಭಿಪ್ರಾಯಪಟ್ಟಿದ್ದಾರೆ. ಶ್ರೀಸಿದ್ಧಗಂಗಾ ಮಠದಲ್ಲಿ ಲೇಖಕರಾದ ಶಾಮಲಿಂಗ ಜವಳಿ ಅವರು ಬರೆದಿರುವ ಬಸವಾದಿ ಶರಣರನ್ನು ಸ್ಮರಿಸುವ 12ನೇ ಶತಮಾನದಿಂದ 21ನೇ ಶತಮಾನದವರೆಗಿನ ಬಸವ ತತ್ವವನ್ನು ಪರಿಚಯಿಸುವ ಬಸವಯುಗ ವೈಭವ ಗ್ರಂಥ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು, ಶರಣ ತತ್ವದ 900 ವರ್ಷಗಳ ಇತಿಹಾಸವನ್ನು ದಾಖಲಿಸುವ ಈ ಕೃತಿ ನಾಡಿನ ಉದ್ದಗಕ್ಕೂ ಬೆಳಕಾಗಬೇಕು ಎಂದರು. ಬಸವಯುಗ ವೈಭವ ಒಂದು ವಿಶಿಷ್ಟ ಗ್ರಂಥ. 12ನೇ ಶತಮಾನದಿಂದ 21ನೇ ಶತಮಾನದವರೆಗೆ ಬಸವಣ್ಣರ ಬಗ್ಗೆ ಯಾರುಯಾರು ಬಸವ ತತ್ವವನ್ನು ಪ್ರಸರಿಸಿದರೋ ಅವರನ್ನು ಪರಿಚಯಿಸುವ ಕೆಲಸ ಆಗಿದೆ. ಬಸವಯುಗ ಮಾನವನಿಗೆ ಘನತೆ ತಂದುಕೊಟ್ಟ ಯುಗ. ಮಾನವೀಯ ಅನುಕಂಪದ ಪ್ರತಿಪಾದಿಸಿದ…
ಬೀದರ್: ಜಿಲ್ಲೆಯ ವಸತಿ ನಿಲಯದ ಆಡಳಿತ ನಿರ್ವಹಣೆಯಲ್ಲಿ ಗಂಭೀರ ಸ್ವರೂಪದ ಲೋಪಗಳು ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿಯನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠಲರಾವ್ ಆದೇಶ ಹೊರಡಿಸಿದ್ದಾರೆ. ಔರಾದ್ ತಾಲೂಕಿನ ಧೂಪತಮಹಾಗಾಂವ್ ಗ್ರಾಮದ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿ ಶೋಭಾ ಅಮಾನತುಗೊಂಡವರಾಗಿದ್ದಾರೆ. ಸೆಪ್ಟೆಂಬರ್ 3 ರಂದು ಜಿ.ಪಂ. ಸಿಇಒ ಗಿತ್ತೆ ಮಾಧವ್ ಅವರು ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ವೇಳೆ, ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಹಾಗೂ ಶೈಕ್ಷಣಿಕ ಹಿತಾಸಕ್ತಿಗೆ ಸಂಬಂಧಿಸಿದ ವ್ಯವಸ್ಥೆಗಳಲ್ಲಿ ಹಲವು ಗೊಂದಲ ಹಾಗೂ ಅವ್ಯವಸ್ಥೆಗಳು ಕಂಡುಬಂದಿದ್ದವು. ವಸತಿ ನಿಲಯದ ನಿರ್ವಹಣೆಯಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಕಿರಿಯ ಮೇಲ್ವಿಚಾರಕಿ ಶೋಭಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಅವರು ಸಲ್ಲಿಸಿದ್ದ ಲಿಖಿತ ಉತ್ತರವು ಸಮಂಜಸವಾಗಿಲ್ಲದಿರುವುದು ಪರಿಶೀಲನೆಯಲ್ಲಿ ದೃಢಪಟ್ಟಿತ್ತು. ಕರ್ತವ್ಯಲೋಪ ಮತ್ತು ಮೇಲ್ವಿಚಾರಣೆಯಲ್ಲಿ ಎಸಗಿದ ನಿರ್ಲಕ್ಷ್ಯವನ್ನು ಗಂಭೀರವಾಗಿ…