Subscribe to Updates
Get the latest creative news from FooBar about art, design and business.
- ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
- ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
- ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
- ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
- ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ
- ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ
Author: Ganesh Tumkuru
ತುಮಕೂರು: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೀ ಒಬ್ಬ ವ್ಯಕ್ತಿಯಾಗಿರದೇ ಈ ನಾಡಿನ ಶಕ್ತಿಯಾಗಿದ್ದರು. ಬಲಿಷ್ಠ ಭಾರತವನ್ನು ನಿರ್ಮಿಸುವಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂದು ಜಿಲ್ಲೆಯ ಹಿರಿಯ ಹರಿಕಥಾ ವಿದ್ವಾಂಸ, ಕೇಂದ್ರ ನಾಟಕ ಸಂಗೀತ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣ್ ದಾಸ್ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಎಸ್ ಐಎಫ್ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಬುಧವಾರ ನಗರದ ಉತ್ತರ ಬಡಾವಣೆ ಶಿರಾ ರಸ್ತೆಯಲ್ಲಿರುವ ಕೆ.ಎಸ್ .ಐ.ಎಫ್. ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಭಾರತರೆತ್ನ ಡಾ: ಬಿ.ಆರ್. ಅಂಬೇಡ್ಕರ್ ಓದು ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತುಳಿತಕ್ಕೆ ಒಳಗಾಗಿದ್ದ ಎಲ್ಲಾ ಸಮುದಾಯಗಳ ಪ್ರತಿನಿಧಿಯಾಗಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಅಂಬೇಡ್ಕರ್ ಸೇವೆ ಸಲ್ಲಿಸಿದ್ದರು. ಭಾರತದ ಸಂವಿಧಾನ ರಚನಾ ಸಮಿತಿಯ ಕರಡು ಅಧ್ಯಕ್ಷರಾಗಿ ಅವರು ಬೃಹತ್ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿದರು. ಅಸ್ಪೃಶ್ಯತೆ ನಿವಾರಣೆಗೆ, ಮಹಿಳೆಯರ…
ಬೀದರ್: ಔರಾದ್ (ಬಾ) ತಾಲೂಕಿನ ಸಂತಪೂರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾ ಸೇವಾ’ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ವತಿಯಿಂದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು. ಸಂತಪೂರ ಹಾಗೂ ಸುತ್ತಮುತ್ತಲಿನ ಸುಮಾರು 35 ಗ್ರಾಮಗಳ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೂಡಲೇ ಸರ್ಕಾರಿ ಪಿಯುಸಿ ಹಾಗೂ ಪದವಿ ಕಾಲೇಜುಗಳನ್ನು ಮಂಜೂರು ಮಾಡಬೇಕು. ಪ್ರಸ್ತುತ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ದೂರದ ಬೀದರ್ ನಗರಕ್ಕೆ ಅಲೆಯುವಂತಾಗಿದೆ. ಸಂತಪೂರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಕೊರತೆಯಿಂದಾಗಿ ಗರ್ಭಿಣಿಯರು ಹಾಗೂ ಗ್ರಾಮೀಣ ಭಾಗದ ಮಹಿಳೆಯರು ತುರ್ತು ಚಿಕಿತ್ಸೆಗೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ವೈದ್ಯರನ್ನು ನೇಮಿಸಬೇಕು. ಬೀದರ್ ಸಹಾಯಕ ಆಯುಕ್ತರಾದ ಮೊಹಮ್ಮದ್ ಶಕೀಲ್ (KAS), ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಕಿರಣ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಈ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿಎಸ್ ಎಸ್ (ಭೀಮಮಾರ್ಗ) ತಾಲೂಕು ಸಂಚಾಲಕರಾದ ತುಕಾರಾಮ ಹಸನ್ಮುಖಿ ಮಾತನಾಡಿ,…
ತುಮಕೂರು: ಸುಪ್ರೀಂ ಕೋರ್ಟ್ ಆದೇಶಂತೆ ನಗರಪಾಲಿಕೆ ಅಧಿಕಾರಿಗಳು ನಗರದಲ್ಲೇ ಫುಟ್ ಪಾತ್ ಅಂಗಡಿಗಳನ್ನು ತೆರವು ಮಾಡಿಸಿದ್ದಾರೆ. ಈ ಕ್ರಮದಿಂದ ನಗರದ ಎರಡೂವರೆ ಸಾವಿರಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಕುಟುಂಬಗಳು ಬದುಕು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಿರುವುದು ಅಮಾನವೀಯ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಹೇಳಿದರು. ನಗರದಲ್ಲಿ ಸಮೃದ್ಧಿ ಬೀದಿಬದಿ ವ್ಯಾಪಾರಿಗಳ ಸಂಘದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಕನ್ನಡ ಸೇನೆ ಹಾಗೂ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ತಮ್ಮ ವ್ಯಾಪಾರ ಕಳೆದುಕೊಂಡಿರುವ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡದಿದ್ದರೆ ಬರುವ ಸೋಮವಾರ ನಗರಾಪಾಲಿಕೆ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಗುವುದು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ನೀಡಲಾಗುವುದು ಎಂದರು. ನಗರದ ವಿವಿಧ ರಸ್ತೆಗಳ ಫುಟ್ ಪಾತ್ ಗಳಲ್ಲಿ ಪಾದಚಾರಿಗಳ ಓಡಾಟಕ್ಕೆ ತೊಂದರೆ ಆಗದಂತೆ ಹಲಾವರು ವರ್ಷಗಳಿಂದ ಸಣ್ಣ ಪ್ರಮಾಣದ ವ್ಯಾಪಾರ…
ತುಮಕೂರು: ತಾಲೂಕಿನ ಗ್ರಾಮವೊಂದರಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶುಕ್ರವಾರ ನಡೆದಿದೆ. ಬಾಲಕಿಯ ಸಂಬಂಧಿ ಸಾಹಿಲ್ ಎಂಬಾತನಿಂದ ಅತ್ಯಾಚಾರದ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗೆ ಇಬ್ಬರು ಪತ್ನಿಯರಿದ್ದು, ಎರಡನೇ ಪತ್ನಿಯ ಮಗಳೇ ಸಂತ್ರಸ್ತ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡು ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಅವರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ ಮುಚ್ಚಿದ ಪ್ರಕರಣ ಈಗ ಜೆಡಿಎಸ್ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ! ಅಂದು ‘ತಮ್ಮದೇ ಆಡಳಿತ’ ಎಂಬ ಅಹಂನಲ್ಲಿ ಸಾರ್ವಜನಿಕ ರಸ್ತೆಯನ್ನೇ ನಕಲಿ ದಾಖಲೆ ಸೃಷ್ಟಿಸಿ ಬಂದ್ ಮಾಡಿದ್ದ ನಾಯಕರಿಗೆ, ಈಗ ಲೋಕಾಯುಕ್ತ ತನಿಖೆಯ ಬಿಸಿ ತಟ್ಟಲಾರಂಭಿಸಿದೆ. ಪುರಸಭೆಯ 23 ವಾರ್ಡ್ ಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಂಬ ಏಕೈಕ ಕಾರಣಕ್ಕೆ, ಸಾರ್ವಜನಿಕ ಹಿತಾಸಕ್ತಿಯನ್ನು ಬಲಿಕೊಟ್ಟು ತಾಲ್ಲೂಕು ಕಚೇರಿಯ ಪೂರ್ವ ಭಾಗದ ಮುಖ್ಯ ರಸ್ತೆಗೆ ಬೀಗ ಜಡಿಯಲಾಗಿತ್ತು. ನಿಯಮಗಳನ್ನು ಗಾಳಿಗೆ ತೂರಿ, ಅಧಿಕಾರಿಗಳನ್ನು ಹೆದರಿಸಿ–ಬೆದರಿಸಿ ಕಾನೂನುಬಾಹಿರ ಕೆಲಸ ಮಾಡಿಸಲಾಯಿತು. ಆದರೆ, ಈ ‘ಪಾಳೇಗಾರಿ ಆಡಳಿತ’ದ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸುತ್ತಿದ್ದಂತೆ, ಬಣ್ಣ ಬಯಲಾಗುತ್ತಿದ್ದು, ಉತ್ತರಿಸಲಾಗದೆ ಅಧಿಕಾರಿಗಳು ಬೆವರುತ್ತಿದ್ದಾರೆ. ಸಾಲು ಸಾಲು ಅಕ್ರಮಗಳ ಪಟ್ಟಿ! ಬಿಇಒ ಕರ್ತವ್ಯಲೋಪ ಸಾಬೀತು: ಶಾಲೆಯ ಆಟದ ಮೈದಾನದಲ್ಲೇ ಅನಧಿಕೃತ ಕಟ್ಟಡ ತಲೆಎತ್ತುತ್ತಿದ್ದರೂ ಕಣ್ಣುಮುಚ್ಚಿ ಕುಳಿತಿದ್ದ ಕ್ಷೇತ್ರ…
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಶಕಗಳ ಬೇಡಿಕೆಯಾಗಿದ್ದ ಅಭಿವೃದ್ಧಿ ಕಾಮಗಾರಿಗೆ ಅಧಿಕೃತ ಚಾಲನೆ ದೊರೆತಿದೆ. ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ (ವಿಶೇಷ/ಮಹಾತ್ಮಾ ಗಾಂಧಿ ನರೇಗಾ ಅಥವಾ ಸಂಬಂಧಿತ) ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ತಿರುವು ಕಾಲುವೆ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶರಣಪ್ಪ ಗಾದ್ದಗೆ ಅವರು ಶುಕ್ರವಾರ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಔರಾದ್ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಕಳೆದ ಸುಮಾರು 40 ವರ್ಷಗಳಿಂದ ಯಾವುದೇ ಮಹತ್ವದ ಯೋಜನೆಯ ಕೆಲಸಗಳು ಆರಂಭಗೊಂಡಿರಲಿಲ್ಲ. ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡು ಬಂದ ಕೆಲವೇ ದಿನಗಳಲ್ಲಿ (ಒಂದೇ ತಿಂಗಳಲ್ಲಿ) ಪಿಡಿಒ ಶರಣಪ್ಪ ಗಾದ್ದಗೆ ಅವರು ಸಕ್ರಿಯವಾಗಿ ಸ್ಪಂದಿಸಿ, ಗ್ರಾಮದಲ್ಲಿ ತಿರುವು ಕಾಲುವೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ದೀರ್ಘಕಾಲದ ಬಳಿಕ ಗ್ರಾಮದಲ್ಲೇ ಉದ್ಯೋಗ ದೊರೆತಿರುವುದರಿಂದ ಬಡ ಕುಟುಂಬಗಳ ಕೂಲಿ ಕಾರ್ಮಿಕರು ನಿರಾಳರಾಗಿದ್ದಾರೆ. ತಮಗೆ ಕೆಲಸ ಕಲ್ಪಿಸಿಕೊಟ್ಟ ಪಿಡಿಒ ಅವರಿಗೆ ಕಾರ್ಮಿಕರು ಧನ್ಯವಾದ ಹಾಗೂ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಪರಿಶೀಲನಾ ಸಂದರ್ಭದಲ್ಲಿ…
ಅರಸೀಕೆರೆ: ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಬಿ ತಾಂಡ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಬನಶಂಕರಿ ದೇವಿಯವರ ನೂತನ ದೇವಾಲಯ ಪ್ರವೇಶ ಮತ್ತು ಅಮ್ಮನವರ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಭಕ್ತಿಭಾವದಿಂದ ನೆರವೇರಿತು. ಈ ಪವಿತ್ರ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಹಾಸನ ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಭಾಗವಹಿಸಿ, ದೇವಿಯವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ನಾಡಿನ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರ ಆರೋಗ್ಯ ಮತ್ತು ನೆಮ್ಮದಿಗಾಗಿ ದೇವಿಯಲ್ಲಿ ಪ್ರಾರ್ಥಿಸಿದರು. ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಗ್ರಾಮಸ್ಥರ ಶ್ರದ್ಧೆ, ಭಕ್ತಿ ಹಾಗೂ ಒಗ್ಗಟ್ಟಿನ ಪ್ರತೀಕವಾಗಿ ಈ ನೂತನ ದೇವಾಲಯ ನಿರ್ಮಾಣಗೊಂಡಿದೆ. ಇದು ಮುದುಡಿ ಬಿ ತಾಂಡ್ಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಶ್ರೀಮಂತಗೊಳಿಸಲಿ” ಎಂದು ಶುಭ ಹಾರೈಸಿದರು. ಅಲ್ಲದೆ, ದೇವಿಯವರ ಅನುಗ್ರಹದಿಂದ ಪ್ರತಿಯೊಂದು…
ಗುಬ್ಬಿ: ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿಗೆ ಸ್ಥಳದಲ್ಲೇ ಉತ್ತರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಯಶಸ್ಸಿಗೆ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಅವರು ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸೆ.5 ರಂದು ನಡೆಯುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಕ್ಕೆ ಅವಶ್ಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಮೂಲಭೂತ ಸವಲತ್ತು ಜೊತೆಗೆ ಇಲಾಖಾವಾರು ಸ್ಟಾಲ್ ಮೂಲಕ ಅರ್ಜಿ ಸ್ವೀಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ಕಾರ್ಯಕ್ರಮ ಕುರಿತು ಪ್ರಚಾರ ಕಾರ್ಯ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಸ್ಥಳೀಯ ಪಟ್ಟಣ ಪಂಚಾಯಿತಿ ಮೂಲಕ ಜನರಿಗೆ ಆಂದೋಲನ ಬಗ್ಗೆ ತಿಳಿಸಲಾಗಿದೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಉಪಸ್ಥಿತರಿದ್ದು, ಅರ್ಜಿ ಆಹವಾಲು ಸ್ವೀಕರಿಸಲಿದ್ದಾರೆ. ಸ್ಥಳದಲ್ಲೇ ಅರ್ಜಿಗೆ ಉತ್ತರ ಸಿಗಲಿದೆ. ಇಲ್ಲವಾದಲ್ಲಿ ಮೂರು ಹಂತದಲ್ಲಿ ಅಂದರೆ ತಹಸೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಮೂಲಕ…
ತುಮಕೂರು: ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರ(ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗಳಿಗೆ ಸೇರಿದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ.ಗಳ ಮಿತಿಯೊಳಿರಬೇಕು. ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಸೆಪ್ಟೆಂಬರ್ 30ರೊಳಗೆ ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ: bcwd-helpline@gmail.com ಮೂಲಕ ಅಥವಾ ಜಿಲ್ಲಾ/ ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…
ತುಮಕೂರು: ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ತಲಾ 4 ಸೇರಿದಂತೆ ಒಟ್ಟು 12 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ವಿವರ ಇಂತಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಕೊರಟಗೆರೆ ತಾಲೂಕು ಶಂಭೋನಹಳ್ಳಿ ಶಾಲೆಯ ರೇವಣ್ಣ ಎಸ್., ಮಧುಗಿರಿ ತಾಲೂಕು ಸೋಗೆನಹಳ್ಳಿ ಗೊಲ್ಲರಹಟ್ಟಿ ಶಾಲೆಯ ನೇತ್ರಾವತಿ ಯು., ಪಾವಗಡ ತಾಲೂಕು ಪಾವಗಡ ಪಟ್ಟಣದ ಶನೇಶ್ವರ ದೇವಸ್ಥಾನದ ಹಿಂಭಾಗದ ಶಾಲೆಯ ಆದಿಲಕ್ಷ್ಮಿ ಹಾಗೂ ಸಿರಾ ತಾಲೂಕು ಅನುಪನಹಳ್ಳಿ ಶಾಲೆಯ ನಿರ್ಮಲ ಆಯ್ಕೆಯಾಗಿದ್ದಾರೆ. ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಕೊರಟಗೆರೆ ತಾಲೂಕು ಪಾಠಗಾನಹಳ್ಳಿ ಶಾಲೆಯ ಗಿರಿಜಮ್ಮ ಹೆಚ್.ಜೆ., ಪಾವಗಡ ತಾಲೂಕು ಕಣಿವೆನಹಳ್ಳಿ ಶಾಲೆಯ ನಾರಾಯಣಪ್ಪ ಕೆ., ಸಿರಾ ತಾಲೂಕು ಒಜ್ಜುಗುಂಟೆ ಶಾಲೆಯ ಸಿದ್ದಪ್ಪ ಟಿ.ಹೆಚ್., ಮುಖ್ಯ ಶಿಕ್ಷಕರಾದ ಮಧುಗಿರಿ ತಾಲೂಕು ಯಳ್ಳೂರು ಶಾಲೆಯ ದೇವರಾಜಮ್ಮ ಹೆಚ್.ಎನ್. ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಕೊರಟಗೆರೆ ತಾಲೂಕು ದುಡ್ಡನಹಳ್ಳಿ…