Author: Ganesh Tumkuru

ಪಾವಗಡ: ತಾಲ್ಲೂಕಿನ ಜನರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಪ್ರಜಾ ಸೇವಾ’ ಆಂದೋಲನದ ವೇಳೆ ವಿವಾದಾತ್ಮಕ ಘಟನೆಯೊಂದು ನಡೆದಿದೆ. ತಾಲ್ಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಶಾಸಕ ಎಚ್.ವಿ. ವೆಂಕಟೇಶ್ ಅವರು ಸಾರ್ವಜನಿಕರೊಬ್ಬರೊಂದಿಗೆ ನಡೆದುಕೊಂಡ ರೀತಿಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳನ್ನು ವಿವರಿಸಲು ಮುಂದಾದ ಸಾರ್ವಜನಿಕರಿಗೆ ಶಾಸಕರು ಕಠಿಣ ಪದ ಬಳಸಿ, “ಅರ್ಜಿ ಕೊಟ್ಟೋಗ್ಬೇಕಷ್ಟೇ, ಜಾಸ್ತಿ ಮಾತಾಡಬೇಡ, ಆಚೆ ಹೋಗು” ಎಂದು ಹೇಳಿರುವುದು ವಿಡಿಯೋದಲ್ಲಿದೆ. ಸಾರ್ವಜನಿಕರು ಮತ್ತಷ್ಟು ಮಾತನಾಡಲು ಪ್ರಯತ್ನಿಸಿದಾಗ, “ತಿರ್ಗಾ ಮಾತಾಡಿದ್ರೆ ಅಷ್ಟೇ” ಎಂದು ಎಚ್ಚರಿಕೆ ರೀತಿಯಲ್ಲಿ ಶಾಸಕರು ನುಡಿದಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿದ್ದ ಕೆಲವರು ಹಾಗೂ ಹಿಂಬಾಲಕರು ಸಾರ್ವಜನಿಕರಿಗೆ ವಿಡಿಯೋ ಮಾಡದಂತೆ ಮತ್ತು ಮೊಬೈಲ್ ಫೋನ್‌ಗಳನ್ನು ಆಫ್ ಮಾಡುವಂತೆ ಧಮ್ಕಿ ಹಾಕಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಜನರ ಅಹವಾಲುಗಳನ್ನು ಆಲಿಸಿ ಪರಿಹರಿಸಬೇಕಾದ ಜನಪ್ರತಿನಿಧಿಗಳೇ ಈ ರೀತಿ ಏಕವಚನದಲ್ಲಿ ಗದರಿಸಿ,…

Read More

ಕೊರಟಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಗೌತಮ ಬುದ್ಧ ಹಾಗೂ ವಿಶ್ವಗುರು ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಕೆ.ಆರ್.ಪೇಟೆ ತಾಲ್ಲೂಕಿನ ದೊಡ್ಡಯಾಚೆನಹಳ್ಳಿಯ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಕೊರಟಗೆರೆ ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆರೋಪಿಯು ತನ್ನ ಸಾಮಾಜಿಕ ಜಾಲತಾಣದ ವೀಡಿಯೊಗಳಲ್ಲಿ ದಲಿತ ಸಮುದಾಯ, ಸಂವಿಧಾನ ಹಾಗೂ ಮೀಸಲಾತಿಯ ಕುರಿತು ಅತ್ಯಂತ ಆಕ್ಷೇಪಾರ್ಹ ಪದಗಳನ್ನು ಬಳಸಿ ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಯತ್ನ ನಡೆಸಿದ್ದಾನೆ ಎಂದು ಹಿರಿಯ ಹೋರಾಟಗಾರ ದಾಡಿ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಮುಖ ಬೇಡಿಕೆಗಳು: ಬುದ್ಧ, ಬಸವ, ಅಂಬೇಡ್ಕರ್ ಕುರಿತು ಅವಹೇಳನ ನಡೆಸಿರುವ ವೇದಮೂರ್ತಿಯನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಆರೋಪಿಗೆ ಕಾನೂನಾತ್ಮಕವಾಗಿ ಜೀವಾವಧಿ ಶಿಕ್ಷೆ ವಿಧಿಸಬೇಕು. ಅವಹೇಳನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲಿಸುವ ವ್ಯಕ್ತಿ…

Read More

ಕೆ.ಆರ್. ಪೇಟೆ: ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಹರಿಬಿಟ್ಟಿದ್ದ ಆರೋಪದ ಮೇರೆಗೆ ವೇದಮೂರ್ತಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಈ ಆಕ್ಷೇಪಾರ್ಹ ಪೋಸ್ಟ್ ಗಳು ಹಾಗೂ ವಿಡಿಯೋಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು. ಸಂವಿಧಾನ ಮತ್ತು ಡಾ. ಅಂಬೇಡ್ಕರ್ ಅವರಂತಹ ಮಹಾನ್ ನಾಯಕರ ಬಗ್ಗೆ ಕೀಳು ಮಟ್ಟದ ಟೀಕೆ ಮಾಡಿರುವುದು ಸಮಾಜದಲ್ಲಿ ಅಶಾಂತಿ ಹಾಗೂ ಅಸಮಾಧಾನ ಮೂಡಿಸಿತ್ತು. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ಪೊಲೀಸರು, ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಬಂಧಿತ ಆರೋಪಿ ವೇದಮೂರ್ತಿಯನ್ನು ವಶಕ್ಕೆ ಪಡೆದು, ಆಕ್ಷೇಪಾರ್ಹ ಮಾಹಿತಿ ಹರಡಿರುವ ಹಿನ್ನೆಲೆ ಕುರಿತು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ದೇಶದ ಪ್ರಜಾಪ್ರಭುತ್ವದ ಮೂಲ ಆಧಾರವೇ ಸಂವಿಧಾನವಾಗಿದ್ದು, ಅದರ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಯಾವುದೇ ಸಮುದಾಯ ಅಥವಾ ಮಹನೀಯರ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ…

Read More

ತುಮಕೂರು: ಪತ್ನಿಯನ್ನು ಮಾಡಿದ ಗಂಡನಿಗೆ ನಗರದ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. ಸಿರಾ ಪಟ್ಟಣದ ಪೇಸ್ಟಾ ಮೊಹಲ್ಲಾ ವಾಸಿಯಾದ ಸೈಯದ್ ಆರಿಫ್ ಅವರ ಮಗಳಾದ ಜೈನಬಿ ಎಂಬುವರನ್ನು ಸಿರಾ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಜಬಿವುಲ್ಲಾ ಎಂಬುವನಿಗೆ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಈತ ಮದುವೆಯಾಗಿ ಹೊನ್ನೇನಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮುಂಗೋಪಿಯಾಗಿದ್ದ. ಮದುವೆಯಾಗಿ ಒಂದು ವರ್ಷದ ನಂತರ ತನ್ನ ಹೆಂಡತಿಯಾದ ಜೈನಬಿ ಅವರಿಗೆ ಸಣ್ಣಪುಟ್ಟ ವಿಚಾರಗಳಿಗಿಲ್ಲಾ ಗಲಾಟಿ ಮಾಡಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ಕೊಟ್ಟು ಬೈಯ್ಯುವುದು, ಹೊಡೆಯುವುದು ಮಾಡುತ್ತಿದ್ದ. ಈ ವಿಚಾರವಾಗಿ ಮೃತಳ ತಂದೆ ತಾಯಿ ಆರೋಪಿಗೆ ಅನೇಕ ಬಾರಿ ಬುದ್ಧಿ ಹೇಳಿದರೂ ಈತ ಕೇಳುತ್ತಿರಲಿಲ್ಲ. ಜೈನಬಿ ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದು, 16.8.2022 ರಂದು ರಾತ್ರಿ 10.30ರ ಸಮಯದಲ್ಲಿ ಹೊನ್ನೇನಹಳ್ಳಿ ಗ್ರಾಮದಲ್ಲಿ ಮೃತ ಜೈನಬಿ ಊಟ ಮಾಡಿ ಹಾಸಿಗೆ ಹಾಕಿಕೊಂಡು ಮಲಗಲು ಹೋದಾಗ ಆರೋಪಿತನಾದ ಆಕೆಯ ಗಂಡ ಆಕೆಯೊಂದಿಗೆ…

Read More

ತುಮಕೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಮಕ್ಕಳಿಗೆ ವಿದ್ಯೆ ಕಲಿಸಿದರೆಷ್ಟೇ ಸಾಲದು, ಅವರನ್ನು ಬುದ್ಧಿವಂತರನ್ನಾಗಿ ಮಾಡುವ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಪ್ರತಿಪಾದಿಸಿದ್ದಾರೆ. ತುಮಕೂರು ಸಿದ್ಧಗಂಗಾಮರದ ಸನಿವಾಸ ವಿದ್ಯಾಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಶಾಲೆಗೆ ಸೇರಿಸುವ ಜವಾಬ್ದಾರಿ ತಂದೆ–ತಾಯಿಯದಾದರೆ, ಶಾಲೆಗೆ ಸೇರಿದ ಮಕ್ಕಳಿಗೆ ವಿದ್ಯೆಯ ಜೊತೆಗೆ, ಚಾರಿತ್ರ್ಯಕ್ಕೆ ಆದ್ಯತೆ ನೀಡಿ, ನೈತಿಕತೆ ಮೌಲ್ಯ ತಿಳಿಸಿ, ಪ್ರಾಯೋಗಿಕ ಶಿಕ್ಷಣದೊಂದಿಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗೆಲ್ಲುವಂತೆ ವಿದ್ಯಾರ್ಥಿಗಳನ್ನು ಬುದ್ಧಿವಂತರನ್ನಾಗಿ ಮಾಡಬೇಕಾದ ಶಿಕ್ಷಕರ ಕರ್ತವ್ಯ ಎಂದರು. ಮಠದಿಂದ ಸ್ವಾಮಿಯಲ್ಲಿ, ಸ್ವಾಮಿಯಲ್ಲೇ ಮಾತ ಎಂದು ಈ ಜಗತ್ತಿಗೆ ತೋರಿಸಿಕೊಟ್ಟವರು ಡಾ. ಶಿವಕುಮಾರಸ್ವಾಮಿಗಳು ಎಂದ ಈಶ್ವರ ಖಂಡ್ರೆ, ಆಧ್ಯಾತ್ಮಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಭದ್ರಬುನಾದಿ ಹಾಕಿದ ಮಹಾಪುರುಷರು ಎಂದರು. ಕೆಲವರು ತಮ್ಮ ತಮ್ಮ ಜೀವಿತ ಕಾಲದಲ್ಲಿ ಕೇವಲ ಬದುಕುತ್ತಾರೆ. ಆದರೆ ಮತ್ತೆ ಕೆಲವರು ತಾವು ಬದುಕಿದ್ದ ಕಾಲವರ್ಣವೇ ಬದಲಾಯಿಸುತ್ತಾರೆ. ಅಂತಹ ಮಹಾಪುರುಷರಲ್ಲಿ ಪರಮಪೂಜ್ಯ ಲಿಂಗೈಕ್ಯ…

Read More

ಮಧುಗಿರಿ: ಪ್ರತಿ ತಿಂಗಳು ಮೊದಲನೇ ಮತ್ತು ಮೂರನೇ ಶನಿವಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಹಶೀಲ್ದಾರ್‌ ನಂದಿನಿ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಶನಿವಾರ ಪ್ರಜಾ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಕಸಬಾ ಹೋಬಳಿಯಲ್ಲಿ ಜನರ ಸಭೆ ನಡೆಸಲಾಗುತ್ತಿದೆ. ನಾಗರಿಕರಿಗೆ ವಿವಿಧ ಇಲಾಖೆಗಳ ಸಮಸ್ಯೆಗಳ ಪರಿಹಾರ ಮುಖ್ಯ ಉದ್ದೇಶವಾಗಿದ್ದು, ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಈ ದಿನ ಸಿಗಲಿದ್ದಾರೆ. ಜನರ ಸಮಸ್ಯೆ ಪರಿಹಾರಕ್ಕೆ ಈ ಕಾರ್ಯಕ್ರಮ ಅನುಕೂಲವಾಗಲಿದೆ ಜನತೆ ನೀಡಿದ ಅರ್ಜಿಗಳ ಸಮಸ್ಯೆಗಳನ್ನು ಐಪಿಆರ್‌ ಎಸ್‌ ಲಾಗಿನ್‌ನಲ್ಲಿ ನೋಂದಾಯಿಸಿ ಸಮಸ್ಯೆ ಪರಿಹಾರಿಸಲು ಈ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ವರೆಗೂ 101 ಅರ್ಜಿಗಳು ಬಂದಿದ್ದು, ಕಂದಾಯ ಇಲಾಖೆಯ ಸಮಸ್ಯೆಗಳಿಗೆ ಹೆಚ್ಚು ಅರ್ಜಿಗಳು ಬಂದಿದೆ. ಖಾತೆ ಖಾತೆ, ಒತ್ತುವರಿ ತೆರವು, ಸಾಗುವಳಿ ಚೀಟಿ, ಜಮೀನು ದುರಸ್ತಿ ಬಗ್ಗೆಯೂ ಅರ್ಜಿಗಳು ಬಂದಿದ್ದು, ಪರಿಶೀಲನೆ ನಡೆಸಿ…

Read More

ಸಿರಾ: ರಾಜ್ಯದ ಪ್ರತಿಯೊಂದು ತಾಲೂಕಿನ ಹೋಬಳಿ ಕೇಂದ್ರಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ವಾರಕ್ಕೊಮ್ಮೆ ಕರೆಯೊಯ್ದು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು. ಅವರು ತಾಲೂಕಿನ ಗೂಡಗೆರೆ ಗ್ರಾಪಂ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದರು. ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ, ಸರ್ಕಾರವೇ ಜನರ ಬಳಿಗೆ ಬಂದಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು. ಗೌಡಗೆರೆ ಗ್ರಾಪಂ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಪಾಲ್ಗೊಂಡರು. ಸಕಾಲಿ, ಜನಸ್ಪಂದನ ಒಟ್ಟುಗೂಡಿಕೆ ಪ್ರಜಾಸೇವಾ ಆಂದೋಲನ: ರಾಜ್ಯ ಸರ್ಕಾರವು ಹಿಂದೆ ಇದ್ದ ಸಕಾಲಿ ಮತ್ತು ಜನಸ್ಪಂದನ ವ್ಯವಸ್ಥೆಗಳನ್ನು ಒಟ್ಟುಗೂಡಿಸಿ, ಸಾರ್ವಜನಿಕ…

Read More

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯನ್ನು ಇಂದಿನಿಂದ ಹೊಸದಾಗಿ ಆರಂಭಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಹೇಳಿದರು. ಕಂದಾಯ ಇಲಾಖೆಯ ಜವಾಬ್ದಾರಿಯನ್ನು ಮುಖ್ಯ ಮಂತ್ರಿಯವರು ನನಗೆ ವಹಿಸಿದ್ದಾರೆ. ದೇಶದಲ್ಲಿ ಹೊಸ–ಹೊಸ ಆವಿಷ್ಕಾರ ಮಾಡುವಾಗ ಕರ್ನಾಟಕ ರಾಜ್ಯವು ಮುಂದಿದೆ. ನಮ್ಮ ರಾಜ್ಯದ ಕಂದಾಯ ಇಲಾಖೆಯಲ್ಲಿ ಆಗಿರುವಂತಹ ದೊಡ್ಡ ಬದಲಾವಣೆಗಳು ದೇಶದಲ್ಲೇ ಬೇರೆಲ್ಲೂ ಆಗಿರಲಿಲ್ಲ. ಜಾರಿಗೆ ತಂದಿರುವ ಹಲವಾರು ಜನಪರ ಯೋಜನೆಗಳಿಂದ ಇಂತಹ ಬದಲಾವಣೆ ಸಾಧ್ಯವಾಗಿದೆ. ಇ ಪೌತಿ ಹಕ್ಕು, ಕಂದಾಯ ಗ್ರಾಮಗಳನ್ನು ಮಾಡಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ ತಿಳಿಸಿದರು. ಪಟ್ಟಣದಲ್ಲಿ ಆಯೋಜಿಸಿದ್ದ ಮೊದಲ ಪ್ರಜಾ ಸೇವಾ ಅಭಿಯಾನ ಜನಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸೆಪ್ಟೆಂಬರ್ 5…

Read More

ತುಮಕೂರು:  ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026ರ (Special Intensive Revision) ಭಾಗವಾಗಿ, ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ (Logical Discrepancy), ‘ನೋ ಮ್ಯಾಪಿಂಗ್’ (No Mapping) ಮತ್ತು ಇತರೆ ಕಾರಣಗಳಿಂದ ನೋಟೀಸ್ ಪಡೆದಿರುವ ಮತದಾರರಿಗೆ ಮಹತ್ವದ ಮಾಹಿತಿಯೊಂದಿದೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ (ಕ್ಷೇತ್ರ ಸಂಖ್ಯೆ: 132) ನೋಟೀಸ್ ಪಡೆದ ಮತದಾರರ ವಿಚಾರಣಾ ಪ್ರಕ್ರಿಯೆಯು ಸೆಪ್ಟೆಂಬರ್ 5ರಿಂದಯೆ ಆಯಾ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಆರಂಭಗೊಂಡಿದೆ. ಪ್ರಮುಖ ವಿವರಗಳು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR 2026). ವಿಚಾರಣೆ ಆರಂಭ: ಸೆಪ್ಟೆಂಬರ್ 5 ರಿಂದ. ವ್ಯಾಪ್ತಿ: 132-ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆ ಕೇಂದ್ರಗಳು. ಚುನಾವಣಾ ಆಯೋಗವು ಸೂಚಿಸಿರುವ ಅಗತ್ಯ ಹಾಗೂ ಸೂಕ್ತ ದಾಖಲೆಗಳೊಂದಿಗೆ ನಿಗದಿತ ವಿಚಾರಣಾ ಕೇಂದ್ರಗಳಿಗೆ ಖುದ್ದಾಗಿ ಹಾಜರಾಗಿ, ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ಪಾಲಿಕೆ ಆಯುಕ್ತೆ ಹಾಗೂ ನಗರ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಕೊರಟಗೆರೆ: ಸರ್ಕಾರದ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಯಾದ ‘ಪ್ರಜಾಸೇವೆ ಅಭಿಯಾನ’ದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸುವ ಘೋಷಣೆ ಮಾಡಲಾಗಿದ್ದರೂ, ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾತ್ರ ಇನ್ನೂ ಅನೇಕ ಸಾರ್ವಜನಿಕ ಸಮಸ್ಯೆಗಳು ಇತ್ಯರ್ಥಗೊಳ್ಳದೆ ಬಾಕಿ ಉಳಿದಿರುವುದು ಜನರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಪ್ರಜಾಸೇವೆ ಅಭಿಯಾನ’ಕ್ಕೆ ಚಾಲನೆ ನೀಡಿದೆ. ಈ ಅಭಿಯಾನದಡಿ ಕಂದಾಯ ಇಲಾಖೆಯ ದಾಖಲೆಗಳು, ಭೂಮಿ ಸಮಸ್ಯೆಗಳು, ಸಾಮಾಜಿಕ ಭದ್ರತಾ ಪಿಂಚಣಿಗಳು, ಪಡಿತರ ಚೀಟಿ ತಿದ್ದುಪಡಿ ಹಾಗೂ ವಿವಿಧ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆದರೆ, ಕೊರಟಗೆರೆ ತಾಲೂಕಿನಲ್ಲಿ ಈ ಅಭಿಯಾನದ ಪರಿಣಾಮಕಾರಿ ಅನುಷ್ಠಾನದ ಕುರಿತು ಸಾರ್ವಜನಿಕರಿಂದ ಭಾರಿ ದೂರುಗಳು ಕೇಳಿಬರುತ್ತಿವೆ. ಸಭೆಗಳಲ್ಲಿ ಮತ್ತು ಅಭಿಯಾನದ ವೇಳೆ ಸಾರ್ವಜನಿಕರು ಸಲ್ಲಿಸಿದ ಹಲವಾರು ಅರ್ಜಿಗಳು ಕೇವಲ ದಾಖಲೆಗಳಿಗೆ ಮಾತ್ರ ಸೀಮಿತವಾಗಿವೆ ಹೊರತು, ತಳಮಟ್ಟದಲ್ಲಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅರ್ಜಿಗಳು…

Read More