Author: Ganesh Tumkuru

ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್ ಹಾವು ಕಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹುಲಸೂರು ತಾಲೂಕಿನಲ್ಲಿ ನಡೆದಿದೆ. ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ನಿವಾಸಿ ಭೀಮ ಮಾಧವರಾವ ಜಾಧವ್ (48) ಮೃತಪಟ್ಟ ದುರದೃಷ್ಟಕರ ವಾಟರ್ಮ್ಯಾನ್. ಸೋಮವಾರ ನಾಗರ ಪಂಚಮಿ ಹಬ್ಬದ ದಿನದಂದು ಗ್ರಾಮದ ಹೊರವಲಯದ ಹಾಲಹಳ್ಳಿ ರಸ್ತೆಯಲ್ಲಿರುವ ಮಹಾದೇವ ಮಂದಿರದ ಸಮೀಪದ ಬೃಹತ್ ನೀರಿನ ಟ್ಯಾಂಕರ್ ಕೆಳಗೆ ನೀರು ಬಂದ್ ಮಾಡಲು ಭೀಮ ಜಾಧವ್ ತೆರಳಿದ್ದರು. ಈ ವೇಳೆ ಟ್ಯಾಂಕರ್ ಕೆಳಗೆ ಅಡಗಿದ್ದ ವಿಷಕಾರಿ ಹಾವು (ನಾಗರಹಾವು) ಅವರ ಕಾಲಿಗೆ ಕಚ್ಚಿದೆ. ಹಾವಿನ ತೀವ್ರ ವಿಷದ ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಗ್ರಾಮಕ್ಕೆ ನೀರು ಪೂರೈಸುವ ಬೃಹತ್ ನೀರಿನ ಟ್ಯಾಂಕರ್ ಕೆಳಭಾಗದಲ್ಲಿ ದಟ್ಟವಾಗಿ ಹುಲ್ಲು ಹಾಗೂ ಮುಳ್ಳಿನ ಕಂಟಿಗಳು ಬೆಳೆದಿದ್ದವು. ಈ ಕುರಿತು ಹುಲ್ಲು–ಗಂಟಿಗಳನ್ನು ಕಟಾವು ಮಾಡಿಸಿ ಜಾಗ ಶುಚಿಗೊಳಿಸುವಂತೆ ಸ್ಥಳೀಯ ಗ್ರಾಮ…

Read More

ಕಲಬುರಗಿ: ಪತಿ–ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಪತಿಯನ್ನೇ ಪತ್ನಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಸೇಡಂ ತಾಲೂಕಿನ ಯಡ್ಡಳ್ಳಿ ಗ್ರಾಮದ ನಿವಾಸಿ ನಾಗೇಂದ್ರ ಮುಧೋಳ (35) ಎಂದು ಗುರುತಿಸಲಾಗಿದೆ. ಹತ್ಯೆ ಆರೋಪದ ಮೇಲೆ ಆತನ ಪತ್ನಿ ಸುಧಾರಾಣಿ ಮುಧೋಳ (30) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಗೇಂದ್ರ ತನ್ನ ಕುಟುಂಬದೊಂದಿಗೆ ಪತ್ನಿಯ ತವರೂರಾದ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮಕ್ಕೆ ಆಗಮಿಸಿ ಕುರಿ ಮೇಯಿಸುವ ಕೆಲಸ ಮಾಡುತ್ತಿದ್ದ. ಮದ್ಯಪಾನದ ಚಟಕ್ಕೆ ಬಿದ್ದಿದ್ದ ಈತ ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಕೂಡ ಜಗಳದ ಹಿನ್ನೆಲೆಯಲ್ಲಿ ಹಲವು ಬಾರಿ ಜೈಲಿಗೂ ಹೋಗಿ ಬಂದಿದ್ದ. ಭಾನುವಾರ ರಾತ್ರಿ ಮತ್ತೆ ಪತಿ-ಪತ್ನಿ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆ ನಾಗೇಂದ್ರ ತನ್ನ ಆರು ಹಾಗೂ ಎಂಟು ವರ್ಷದ ಇಬ್ಬರು ಗಂಡು ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆಕ್ರೋಶಗೊಂಡ ಸುಧಾರಾಣಿ,…

Read More

ಬೀದರ್:  ನಗರದ ಮೋಹನ್ ಮಾರುಕಟ್ಟೆಯಲ್ಲಿರುವ ನಿತುರ್ಕರ್ ಕಾಂಪ್ಲೆಕ್ಸ್‌ ನ ಎರಡನೇ ಮಹಡಿಯಲ್ಲಿ ಭಾನುವಾರ ಕಲಾವಿದ ಸಚಿನ್ ಮನೋಲ್ಕರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಆಯೋಜಿತಗೊಂಡಿದ್ದ ಈ ವೈವಿಧ್ಯಮಯ ಪ್ರದರ್ಶನದಲ್ಲಿ ಸಚಿನ್ ಮನೋಲ್ಕರ್ ಅವರು ರಚಿಸಿದ ಅಪರೂಪದ ಕಲಾಕೃತಿಗಳನ್ನು ಪ್ರದರ್ಶಿಸಲಾಗಿದ್ದು, ಇವು ಸ್ಥಳೀಯ ಕಲಾಸಕ್ತರ ಹಾಗೂ ಸಾರ್ವಜನಿಕರ ವಿಶೇಷ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಶ್ರೀ ಸಿದ್ಧಲಿಂಗೇಶ್ವರ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಹಾಗೂ ಬೆಂಗಳೂರಿನ ಆರ್‌ಜಿಯುಎಚ್‌ಎಸ್ (RGUHS) ಬಿಒಎಸ್ ಸದಸ್ಯ ಡಾ. ರಾಜಕುಮಾರ್ ಎಂ. ಬಿರಾದಾರ ಅವರು ಕಲಾವಿದನ ಪ್ರಯತ್ನಕ್ಕೆ ಶುಭ ಹಾರೈಸಿದರು. ಮತ್ತೋರ್ವ ಅತಿಥಿ, ಬೆಳ್ಳೂರು ಶಿಕ್ಷಣ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸೊಸೈಟಿಯ ಅಧ್ಯಕ್ಷ ದತ್ತಾತ್ರಿ ಬೆಳ್ಳೂರೆ ಅವರು ಮಾತನಾಡಿ, ಚಿತ್ರಕಲೆಯು ಕೇವಲ ಮನರಂಜನೆಯ ಕಲೆಯಾಗಿರದೆ, ನಮ್ಮ ಭಾವನೆ, ಸಂಸ್ಕೃತಿ ಹಾಗೂ ಬದುಕಿನ ಅನುಭವಗಳನ್ನು ಅಭಿವ್ಯಕ್ತಿಸುವ ಜೀವಂತ ಮಾಧ್ಯಮವಾಗಿದೆ ಎಂದು ಬಣ್ಣಿಸಿದರು.…

Read More

ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ ಯೋಜನಾ ವರದಿ (DPR) ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ ಹಂತದ ಪ್ರಕ್ರಿಯೆಗಳಿಗಾಗಿ ರಾಜ್ಯ ಸರ್ಕಾರವು ಡಿಪಿಆರ್ ಸಹಿತ ಕೇಂದ್ರ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದಿದೆ. ಪ್ರಸ್ತಾವಿತ ತುಮಕೂರು ಮೆಟ್ರೋ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗ (Median) ಹಾಗೂ ಮೇಲ್ಭಾಗದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಹೆದ್ದಾರಿಯ ಮೇಲ್ಭಾಗದಲ್ಲಿ ಮೆಟ್ರೋ ಪಿಲ್ಲರ್‌ಗಳನ್ನು ನಿರ್ಮಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅನುಮತಿ ಅಗತ್ಯವಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪತ್ರ ಬರೆದಿದೆ. ಈ ಯೋಜನೆಯು ಕೇಂದ್ರ ಸರ್ಕಾರದ ನೇರ ಹಣಕಾಸಿನ ನೆರವನ್ನು ಅವಲಂಬಿಸದೇ ಸಂಪೂರ್ಣವಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (Public-Private Partnership) ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆಗೆ ಹೂಡಿಕೆ ಮಾಡುವ ಕಂಪನಿಗಳಿಗೆ ನೆಲಮಂಗಲ, ದಾಬಸ್‌ಪೇಟೆ ಹಾಗೂ ತುಮಕೂರು ಭಾಗಗಳ ಮೆಟ್ರೋ ನಿಲ್ದಾಣಗಳು ಮತ್ತು ಹೆದ್ದಾರಿ ಪಕ್ಕದಲ್ಲಿ ವಾಣಿಜ್ಯ (Commercial) ಚಟುವಟಿಕೆಗಳನ್ನು ನಡೆಸಲು ಜಮೀನು ಒದಗಿಸಲು ನಿರ್ಧರಿಸಲಾಗಿದೆ.…

Read More

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಭೀಕರ ಅವಘಡವೊಂದು ಸಂಭವಿಸಿದ್ದು, ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಹಾಗೂ ಅಂಗನವಾಡಿ ಕಾರ್ಯಕರ್ತೆ ಗಾಯಗೊಂಡಿದ್ದಾರೆ. ಮಕ್ಕಳು ಅಂಗನವಾಡಿ ಕೇಂದ್ರದ ಒಳಗೆ ಕುಳಿತು ಎಂದಿನಂತೆ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಛಾವಣಿಯ ಪ್ಲಾಸ್ಟರ್ ಕಳಚಿ ಬಿದ್ದಿದೆ. ಘಟನೆಯಲ್ಲಿ ಶಾನ್ವಿ, ರಿತಿಕಾ, ಜೀವಿಕಾ ಮತ್ತು ದಿಯಾ ಎಂಬ ಮಕ್ಕಳು ಹಾಗೂ ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಗಾಯಗೊಂಡಿದ್ದಾರೆ. ಓರ್ವ ಮಗುವನ್ನು ಒಳರೋಗಿ ವಿಭಾಗಕ್ಕೆ (IPD) ದಾಖಲಿಸಲಾಗಿದ್ದು, ಗಾಯಾಳುಗಳನ್ನೆಲ್ಲಾ ತಕ್ಷಣವೇ ಚಿಕಿತ್ಸೆಗಾಗಿ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಅಂಗನವಾಡಿ ಕಟ್ಟಡವು ಸುಮಾರು 25 ವರ್ಷಗಳಷ್ಟು ಹಳೆಯದಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಹಳೆಯ ಕಟ್ಟಡಗಳ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿಷಯ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು (CDPO) ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ…

Read More

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ ಎಸ್‌ ಎಸ್‌ ನ ಪಾತ್ರವೇನು ಎಂದು ಪ್ರಶ್ನಿಸಿದ್ದಾರೆ. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಪ್ರಾಣಾರ್ಪಣೆ ಮಾಡಿದ ತಮ್ಮ ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ ಅವರು, “ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ 500 ಕಾಂಗ್ರೆಸ್ ಸದಸ್ಯರ ಪಟ್ಟಿಯನ್ನು ನಾನು ನೀಡಬಲ್ಲೆ. ಆರ್‌ಎಸ್‌ಎಸ್ ಅಂತಹ ಕನಿಷ್ಠ 50 ಹೆಸರುಗಳ ಪಟ್ಟಿಯನ್ನಾದರೂ ನೀಡಲಿ” ಎಂದು ಆಗ್ರಹಿಸಿದರು. ಆರ್‌ ಎಸ್‌ ಎಸ್ ನೋಂದಾಯಿತ ಸಂಘಟನೆಯಲ್ಲದಿರುವುದರಿಂದ ಅದನ್ನು ಸುಲಭವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಖರ್ಗೆ ಪ್ರತಿಪಾದಿಸಿದರು. “ಅವರನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಮತ್ತು ಮೋಹನ್ ಭಾಗವತ್ ಹೇಳಿರುವುದು ಸತ್ಯ. ಏಕೆಂದರೆ ಆ ಸಂಘಟನೆ ನೋಂದಣಿಯೇ ಆಗಿಲ್ಲ. ನಿಷೇಧಿಸಬೇಕಾದರೆ ಮೊದಲು ಸಂಘಟನೆ ನೋಂದಣಿಯಾಗಿರಬೇಕಲ್ಲವೇ?” ಎಂದು ಅವರು ಹೇಳಿದರು. ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಸವಾಲೆಸೆದ ಪ್ರಿಯಾಂಕ್…

Read More

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್‌ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಮೂವರ ಶೂಟೌಟ್ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಮೂವರನ್ನು ‘ಹವ್ಯಾಸಿ ಬೇಟೆಗಾರರು’ ಎಂದು ಅರಣ್ಯ ಇಲಾಖೆ ಹೇಳುತ್ತಿದ್ದರೆ, ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಈ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಅರಣ್ಯ ಸಿಬ್ಬಂದಿ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಮೃತ ಆಂಥೋನಿಯ ಪತ್ನಿ ಲೌರ್ಡೆ ಮೇರಿ ಮಾತನಾಡಿ, “ನನ್ನ ಪತಿ ತಮ್ಮ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕಾಡುಪ್ರಾಣಿಗಳಿಂದ ಕಾಪಾಡಲು ಅಲ್ಲಿಯೇ ಮಲಗಿದ್ದರು. ಅವರನ್ನು ಕೃಷಿ ಭೂಮಿಯಿಂದ ಬಲವಂತವಾಗಿ ಕರೆದೊಯ್ದು ಗುಂಡು ಹಾರಿಸಲಾಗಿದೆ. ಅವರು ತಪ್ಪು ಮಾಡಿದ್ದರೂ ಕೊಲ್ಲಲು ಅಧಿಕಾರ ಕೊಟ್ಟವರು ಯಾರು?” ಎಂದು ಪ್ರಶ್ನಿಸಿದ್ದಾರೆ. ಘಟನಾ ಸ್ಥಳದಿಂದ ತಪ್ಪಿಸಿಕೊಂಡಿರುವ ಮಹಿಮಾ ದಾಸ್ ನೀಡಿರುವ ಮಾಹಿತಿಯಂತೆ, ಅವರು ಬೇಟೆಗೆ ಹೋಗಿರಲಿಲ್ಲ; ಕಾಣೆಯಾಗಿದ್ದ ತಮ್ಮ ದನಗಳನ್ನು ಹುಡುಕಿಕೊಂಡು ಅರಣ್ಯ ಪ್ರದೇಶದತ್ತ ತೆರಳಿದ್ದರು. ಆದರೆ ಅರಣ್ಯ ಸಿಬ್ಬಂದಿ ಅವರನ್ನು ಗುರಿಯಾಗಿಸಿಕೊಂಡು…

Read More

ತುಮಕೂರು: ಬೃಹತ್ ಕೈಗಾರಿಕಾ ಪ್ರದೇಶ, ರೈಲ್ವೆ, ಹೆದ್ದಾರಿ ಸಂಪರ್ಕ ಜಾಲ ಹೊಂದಿರುವ ತುಮಕೂರು ಜಿಲ್ಲೆಯಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕೆಂದು ಶೀಘ್ರ ಮುಖ್ಯಮಂತ್ರಿಗಳನ್ನು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಭೇಟಿಯಾಗಿ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ಸ್ವಾತಂತ್ರ್ಯ ದಿನಾಚರಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 18 ಜಿಲ್ಲೆಗಳ ಪ್ರವೇಶದ್ವಾರವಾಗಿ ಮಧ್ಯಕರ್ನಾಟಕ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ ಕೊಂಡಿಯಾಗಿರುವ ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರು ಈ ಸಂಬಂಧ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದು, ಸಿಎಂ ಭೇಟಿಯಾಗಿ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗುವುದು ಎಂದರು. ತುಮಕೂರಿನವರೆಗೆ ಮೆಟ್ರೋ ಸಂಬಂಧ ಡಿಪಿಆರ್ ಸಂಪೂರ್ಣವಾಗಿದ್ದು, ಪಿಪಿಪಿ ಮಾಡೆಲ್‌ನಲ್ಲಿ ಅನುಷ್ಠಾನಗೊಳಿಸಲಾಗುವುದು. ಹೆದ್ದಾರಿ ಮೀಡಿಯೇಷನ್ ಮೇಲೆ ಮೆಟ್ರೋ ಹಳೆಯ ಪಿಲ್ಲರ್ ಹಳಿ ಬರಬೇಕಿರುವುದರಿಂದ ಕೇಂದ್ರದ ಹೆದ್ದಾರಿ ಪ್ರಾಧಿಕಾರ ದ ಅನುಮತಿ ಅಗತ್ಯ. 20 ಸಾವಿರ ಕೋಟಿಗೂ ಅಧಿಕ ಹಣ ಮೆಟ್ರೋಗೆ ವೆಚ್ಚರಾಗಿದ್ದು, ಬಂಡವಾಳ ಹೂಡುವ ಸಂಸ್ಥೆಗಳಿಗೆ…

Read More

ತಿಪಟೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಕಾರ್ಯಕ್ರಮ ಎಂದು ಪರಿಗಣಿಸದೆ, ನಮ್ಮೆಲ್ಲರ ಹಬ್ಬವೆಂದು ಭಾವಿಸಿ ಆಚರಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕುಮಾರ್.ಎಚ್.ಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಸ್ವಾತಂತ್ರ್ಯ ಎಂಬುದು ಕೇವಲ ಮಂತ್ರ, ತಂತ್ರ, ಕುತಂತ್ರದಿಂದ ದೊರೆತದ್ದಲ್ಲ; ಅದು ಹಲವಾರು ಮಹನೀಯರ ತ್ಯಾಗ ಮತ್ತು ಹೋರಾಟದ ಫಲ. ಅವರ ಬಲಿದಾನ ಸಾರ್ಥಕವಾಗಬೇಕೆಂದರೆ, ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಡಾ. ವಿರುಪಾಕ್ಷ.ಜೆ.ಡಿ ಅವರ ನೇತೃತ್ವದಲ್ಲಿ ಎನ್ಸಿಸಿ (NCC) ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ತದನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ದೇಶಪ್ರೇಮ, ರಾಷ್ಟ್ರದ ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಬದುಕುವ ಕುರಿತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…

Read More

ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನಗಳ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಮೂಡಿಬಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಗಮನ ಸೆಳೆದವು. ಶಾಲೆಯ ಮುಖ್ಯಶಿಕ್ಷಕ ಗುರಯ್ಯ ಸ್ವಾಮಿ ಮಾತನಾಡಿ, “ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು. ದೇಶದ ಏಕತೆ, ಶಾಂತಿ ಹಾಗೂ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಓಂಕಾರ್ ಮಾತನಾಡಿ, “ಮಹನೀಯರ ತ್ಯಾಗವನ್ನು ಸ್ಮರಿಸುವ ಮೂಲಕ ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ದೇಶಭಕ್ತಿ ಹಾಗೂ ಉತ್ತಮ ನಾಗರಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ” ಎಂದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಬಾಲಾಜಿ, ಲಕ್ಷ್ಮಣ್, ಗ್ರಾಮಸ್ಥರಾದ ಸಂದೀಪ್ ಪಾಟೀಲ್, ಮಲ್ಲಯ್ಯ…

Read More