Author: Ganesh Tumkuru

ಕೊರಟಗೆರೆ: ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಸರ್ಕಾರ ತರುವುದು ನಮ್ಮ ಮೂಲ ಉದ್ದೇಶ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಹೇಳಿದರು. ಕೊರಟಗೆರೆಯ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಮುಖಂಡರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ನಾನು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದಿದ್ದೆ. ಆದರೆ ಅಲ್ಲಿನ ಉಸಿರುಗಟ್ಟಿಸುವ ವಾತಾವರಣದಿಂದ ಬೇಸತ್ತು, ನನ್ನ ಮಾತೃಪಕ್ಷವಾದ ಜೆಡಿಎಸ್‌ಗೆ ಮರಳಿದ್ದೇನೆ. ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆ. ಹಿಂದೆ 15 ವರ್ಷ ಮಾಜಿ ಸಚಿವ ಸಿ. ಚಿನ್ನಿಗಪ್ಪ ಅವರ ಜೊತೆ ಜೆಡಿಎಸ್‌ನಲ್ಲಿ ಕೆಲಸ ಮಾಡಿದಾಗ ಸಿಕ್ಕ ಸಂತೋಷ ಕಾಂಗ್ರೆಸ್‌ನಲ್ಲಿದ್ದಾಗ ಇರಲಿಲ್ಲ.” — ಪಿ.ಎನ್. ಕೃಷ್ಣಮೂರ್ತಿ, ಮಾಜಿ ಜಿ.ಪಂ. ಸದಸ್ಯ ಕೊರಟಗೆರೆ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಗೆ ಮೀಸಲಾತಿ ಇದ್ದರೆ…

Read More

ತಿಪಟೂರು: ಇಲ್ಲಿನ ಜಿಲ್ಲಾ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ‘ಗ್ರಂಥಪಾಲಕರ ದಿನಾಚರಣೆ’ ಹಾಗೂ ಶಾಲಾ ಮಕ್ಕಳಿಗೆ ಗ್ರಂಥಾಲಯ ಅರಿವು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಾಹಿತಿ ಹಾಗೂ ಮುಖ್ಯ ಶಿಕ್ಷಕ ಎಂ. ಸೋಮಶೇಖರ್ ಅವರು, ಗ್ರಂಥಾಲಯದ ಮಹತ್ವ ಮತ್ತು ಪುಸ್ತಕ ಓದಿನಿಂದ ಲಭಿಸುವ ಜ್ಞಾನದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಓದುಗರಿಗೆ ವಿವರವಾಗಿ ತಿಳಿಸಿಕೊಟ್ಟರು. ಸಮಾಜ ಸೇವಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಟಿ. ಸಿ. ಗೋವಿಂದರಾಜ್ ಅವರು ಮಕ್ಕಳಿಗೆ ಉಪಯುಕ್ತ ಹಿತವಚನಗಳನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಸಾಹಿತಿ ಹಾಗೂ ಶಿಕ್ಷಣ ಇಲಾಖೆಯ ಹಳೇಪಾಳ್ಯ ಸಿಆರ್‌ ಪಿ ಎಚ್. ಕೆ. ದಿವಾಕರ್ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ನಳಂದ ಶಾಲೆಯ ಶಿಕ್ಷಕಿ ಭವಾನಿ ಅವರು ಗ್ರಂಥಾಲಯದಲ್ಲಿ ಲಭ್ಯವಿರುವ ವಿವಿಧ ಮಾದರಿಯ ಪುಸ್ತಕಗಳು…

Read More

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ 16 ವರ್ಷ ವಯೋಮಾನದ ಮಕ್ಕಳಿಗೆ ಚಿತ್ರಕಲೆ ಹಾಗೂ 5 ರಿಂದ 12 ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಪೋಷಕರು ಆಗಸ್ಟ್ 13ರೊಳಗಾಗಿ ಜಿಲ್ಲಾ ಬಾಲಭವನ ಕಚೇರಿ, ಮಹಾತ್ಮ ಗಾಂಧಿ ರಸ್ತೆ, ತುಮಕೂರು ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಚಿತ್ರಕಲೆ ಸ್ಪರ್ಧೆಗೆ 150 ಮಕ್ಕಳು ಮತ್ತು ವೇಷಭೂಷಣ ಸ್ಪರ್ಧೆಗೆ 50 ಮಕ್ಕಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಸರ್ಕಾರಿ ಶಾಲೆ / ಸೌಲಭ್ಯ ವಂಚಿತ / ಗ್ರಾಮೀಣ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ಗುಬ್ಬಿ: ವಿಶ್ವದ ಅತ್ಯಂತ ಹಳೆಯ ಸಮರ ಕಲೆ ಕೇರಳ ಮೂಲದ ಕಲರಿಪಯಟ್ಟು ಕಲೆಯನ್ನು ಆಶ್ರಮದ ಶಾಲಾ ಮಕ್ಕಳಿಗೆ ಕಲಿಸಲು ಚಿದಂಬರ ಪಬ್ಲಿಕ್ ಸ್ಕೂಲ್ ಆ. 17 ರಿಂದ 22 ರವರೆಗೆ ಆರು ದಿನಗಳ ಕಾಲ ಕಲರಿಪಯಟ್ಟು ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶ್ರೀ ಚಿದಂಬರಾಶ್ರಮ ಅಧ್ಯಕ್ಷ ಸಚ್ಚಿದಾನಂದ ಶರ್ಮ ತಿಳಿಸಿದ್ದಾರೆ. ಸಾಂಸ್ಕೃತಿಕ ಪರಂಪರೆಯ ಸಮರ ಕಲೆ ಕಲರಿಪಯಟ್ಟು ಕಲಿತು ದೇಶ ವಿದೇಶದಲ್ಲೂ ಖ್ಯಾತಿ ಪಡೆದ ಸುದರ್ಶನ್ ಪಂಡಿತ್ ಅವರು ನಮ್ಮ ಚಿದಂಬ ರಾಶ್ರಮದ ಹಳೆಯ ವಿದ್ಯಾರ್ಥಿ ಎಂದು ಹೇಳಲು ಹೆಮ್ಮೆ ಎನಿಸಿದೆ. ಇವರ ಕಲೆಯ ಪ್ರಕಾರಗಳನ್ನು ಮಕ್ಕಳಿಗೆ ಕಲಿಸಲು ಇದೇ ತಿಂಗಳ 17 ಬೆಳಿಗ್ಗೆ 10.30 ಕ್ಕೆ ಶಿಬಿರ ಉದ್ಘಾಟನೆ ಆಶ್ರಮದ ಆರ್ಟ್ ಯೋಗ ಧ್ಯಾನ ಮಂದಿರದಲ್ಲಿ ಆಗಲಿದೆ ಎಂದರು. ಸುದರ್ಶನ್ ಪಂಡಿತ್ 2000 ಇಸವಿಯಲ್ಲಿ ಕಲರಿಯ ಗುರುಕುಲಂ ಶ್ರೀ ರಂಜನ್ ಮುಲ್ಲರತ್ ಅವರ ಮಾರ್ಗದರ್ಶನದಲ್ಲಿ ಕಲರಿಪಯಟ್ಟು ಸಮರ ಕಲೆ ಕಲಿಕೆ ಆರಂಭಿಸಿ, ಇಂದು ಕಲರಿ ಸತ್ತಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ 90…

Read More

ಬೀದರ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್‌ ಸಮೀಪದ ಹೈದರಾಬಾದ್‌–ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಆಟೋ (ಟಂಟಂ) ಹಾಗೂ‌ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಬೀದರ್‌ ತಾಲೂಕಿನ ಸಿಂಧೋಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ. ಟಂಟಂ ಚಾಲಕ ದೇವಿದಾಸ ಸೇರಿದಂತೆ ಕೂಲಿ ಕಾರ್ಮಿಕರಾದ ರೇಖಾ, ರೇಷ್ಮಾ, ಕವಿತಾ ಹಾಗೂ ಇತರರು ಸಾವನ್ನಪ್ಪಿದ್ದಾರೆ. ಆಟೋದಲ್ಲಿ ಒಟ್ಟು 11 ಜನ ಕಾರ್ಮಿಕರಿದ್ದರು ಎನ್ನಲಾಗಿದ್ದು, ಮೃತ ಕಾರ್ಮಿಕರು ಪ್ರತಿದಿನ ಕೂಲಿ ಕೆಲಸಕ್ಕೆಂದು ತೆಲಂಗಾಣಕ್ಕೆ ತೆರಳುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಸಂಜೆ ವಾಪಸ್‌ ಊರಿಗೆ ಮರಳುವಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕೆಲ ಕಾರ್ಮಿಕರ ಮೃತದೇಹಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೀದರ್‌ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಬೀದರ್‌ ಹಾಗೂ ತೆಲಂಗಾಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜಹೀರಾಬಾದ್…

Read More

ತುಮಕೂರು:  ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಹಾಗೂ ‘ಅಗ್ನಿಯುಗದ ಹರಿಕಾರ’ ಖುದಿರಾಮ್ ಬೋಸ್ ಅವರ 118ನೇ ಹುತಾತ್ಮ ದಿನವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ ಒ) ನೇತೃತ್ವದಲ್ಲಿ ತುಮಕೂರಿನ ವಿವಿಧ ಶಾಲಾ-ಕಾಲೇಜುಗಳು, ಹಾಸ್ಟೆಲ್ ಹಾಗೂ ಮೈದಾನಗಳಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, “ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದು ಹೋರಾಡಿದ ಖುದಿರಾಮ್ ಬೋಸ್, ತಮ್ಮ 18ನೇ ವಯಸ್ಸಿನಲ್ಲೇ ನೇಣುಗಂಬಕ್ಕೇರಿದರು. ನೇಣಿಗೆ ಹೋಗುವ ಮುನ್ನವೂ ಎದೆಯುಬ್ಬಿಸಿ, ಮುಖದಲ್ಲಿ ಮುಗುಳ್ನಗೆಯೊಂದಿಗೆ ಧೀರತನ ಮೆರೆದ ಅವರ ಬಲಿದಾನ ಕಂಡು ಬಂಗಾಳದ ಜನತೆ ದಿಗ್ಭ್ರಾಂತರಾದರು. ಅಂದಿನಿಂದ ಪ್ರತಿಯೊಬ್ಬ ತಾಯಂದಿರೂ ತಮ್ಮ ಮನೆಯಲ್ಲೂ ಖುದಿರಾಮ್ ಹುಟ್ಟಲಿ ಎಂದು ಬಯಸುವಷ್ಟು ಅವರು ಜನಮಾನಸದಲ್ಲಿ ಸ್ಫೂರ್ತಿಯಾದರು” ಎಂದು ಸ್ಮರಿಸಿದರು. “ಬ್ರಿಟಿಷರ ದೌರ್ಜನ್ಯವನ್ನು ಭಾರತೀಯರು ಎಂದಿಗೂ ಸುಮ್ಮನೆ ಸಹಿಸುವುದಿಲ್ಲ ಎಂಬುದನ್ನು ಪೂರ್ವ ಪ್ರಾಂತ್ಯದಲ್ಲಿ ಮೊದಲ ಬಾರಿಗೆ ಕೆಚ್ಚೆದೆಯಿಂದ ತೋರಿಸಿಕೊಟ್ಟ ಧೀರ ಯೋಧ ಖುದಿರಾಮ್. ಬಂಗಾಳದ ಜನತೆ ಅವರನ್ನು…

Read More

ಸರಗೂರು: ಕ್ಷೇತ್ರದ ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಬಹುತೇಕ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲ್ಲೂಕಿನ ದೇವಲಾಪುರ ಹುಂಡಿ, ಬಾಡಗ, ಹೊಸಕೋಟೆ, ಕಂದಲಿಕೆ ತಿಟ್ಟು, ಮೊಳೆಯೂರು, ನಡಾಡಿ, ಬಂಕವಾಡಿ, ಗದ್ದೆಹಳ್ಳ ಮತ್ತು ಸಾಗರೆ ಗ್ರಾಮಗಳಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸುಮಾರು ರೂ. 3.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೈಸೂರು-ಮಾನಂದವಾಡಿ ರಸ್ತೆ ಅಗಲೀಕರಣ: ಮೈಸೂರು-ಮಾನಂದವಾಡಿ ೪ ಪಥದ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ (ಜನವರಿಯಲ್ಲಿ) ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು. ಜಿಲ್ಲೆಯಲ್ಲೇ ಅತ್ಯಂತ ವಿಶಾಲವಾದ ಹಾಗೂ ಹಿಂದುಳಿದ ತಾಲೂಕಾಗಿದ್ದರೂ, ಕಾಂಗ್ರೆಸ್ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿದೆ. ಮಾಜಿ ಶಾಸಕ ದಿ. ಚಿಕ್ಕಮಾದು ಹಾಗೂ ಮಾಜಿ ಸಂಸದ ದಿ. ಆರ್. ಧ್ರುವನಾರಾಯಣ್ ಅವರು ಕ್ಷೇತ್ರದ ಅಭಿವೃದ್ಧಿಗೆ…

Read More

ಬಳ್ಳಾರಿ:  ಬಳ್ಳಾರಿಯಲ್ಲಿ ನಡೆದ ಶಾಲಾ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಶ್ರೀ ಗವಿಮಠದ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಗೆ ತೀವ್ರ ಮುಜುಗರ ಉಂಟಾದ ಘಟನೆ ಸಂಭವಿಸಿದೆ. ಪ್ರವಚನ ನೀಡುತ್ತಿದ್ದ ವೇಳೆ ವೇದಿಕೆಯಲ್ಲಿ ಉಂಟಾದ ಗದ್ದಲ ಹಾಗೂ ಮೈಕ್ ಕಿರಿಕಿರಿಯಿಂದ ಬೇಸರಗೊಂಡ ಶ್ರೀಗಳು, ತಮ್ಮ ಪ್ರವಚನವನ್ನು ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ್ದಾರೆ. ಬಳ್ಳಾರಿಯಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ವತಿಯಿಂದ ‘ಹೀರೇದ ಸೂಗಮ್ಮ ಶಾಲೆ’ಯ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿಯವರು ಸಭಿಕರನ್ನು ಉದ್ದೇಶಿಸಿ ಪ್ರವಚನ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಕಾರ್ಯಕ್ರಮಕ್ಕೆ ಆಗಮಿಸಿದರು. ಸ್ವಾಮೀಜಿಗಳು ಮಾತನಾಡುತ್ತಿದ್ದಂತೆಯೇ ವೇದಿಕೆಯಲ್ಲಿದ್ದವರು ಮೈಕ್‌ನಲ್ಲಿ ಸಚಿವರ ಆಗಮನವನ್ನು ಘೋಷಿಸಿದರು. ಅದೇ ವೇಳೆ ಸಚಿವರ ಬೆಂಬಲಿಗರ ಕೂಗಾಟ ಹಾಗೂ ವಾದ್ಯಮೇಳದ ಸದ್ದು ಮುಂತಾದ ಗೊಂದಲಗಳು ಉಂಟಾಗಿ ಸ್ವಾಮೀಜಿಯವರ ಪ್ರವಚನಕ್ಕೆ ಭಂಗ ತಂದವು. ಶ್ರೀಗಳ ಅಸಮಾಧಾನ: ಕಾರ್ಯಕ್ರಮದ ಶಿಸ್ತು ತಪ್ಪಿದ್ದರಿಂದ ಹಾಗೂ ವೇದಿಕೆಯಲ್ಲಿ ಉಂಟಾದ ಗದ್ದಲದಿಂದ ತೀವ್ರ ಮುಜುಗರ ಮತ್ತು ಕಿರಿಕಿರಿ…

Read More

ಬೆಂಗಳೂರು: ರಾಜ್ಯ ಸರ್ಕಾರವು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ 10 ಪ್ರಮುಖ ಸಚಿವರಿಗೆ ಬೆಂಗಳೂರು ನಗರದಲ್ಲಿ ಅಧಿಕೃತ ಸರ್ಕಾರಿ ನಿವಾಸ (ಬಂಗಲೆ) ಹಾಗೂ 19 ನೂತನ ಸಚಿವರಿಗೆ ಅಧಿಕೃತ ಸರ್ಕಾರಿ ವಾಹನಗಳನ್ನು (ಕಾರು) ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಈ ಕುರಿತು ಅಧಿಕೃತ ಆದೇಶ ನೀಡಿದ್ದು, ಕುಮಾರ ಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ. ಬೆಂಗಳೂರಿನ ಸದಾಶಿವನಗರ, ಸ್ಯಾಂಕಿ ರಸ್ತೆ ಹಾಗೂ ಜಯಮಹಲ್ ಬಡಾವಣೆ ಸೇರಿದಂತೆ ನಗರದ ಪ್ರಮುಖ ಭಾಗಗಳಲ್ಲಿ ಈ ಸರ್ಕಾರಿ ನಿವಾಸಗಳನ್ನು ಹಂಚಿಕೆ ಮಾಡಲಾಗಿದೆ. ಸಚಿವರಿಗೆ ಹಂಚಿಕೆಯಾದ ಸರ್ಕಾರಿ ನಿವಾಸಗಳ ವಿವರ: ಡಾ. ಜಿ. ಪರಮೇಶ್ವರ (ಉಪಮುಖ್ಯಮಂತ್ರಿಗಳು): ಸದಾಶಿವನಗರ, RMV 2ನೇ ಹಂತ, ಬೆಂಗಳೂರು ಎನ್. ಚೆಲುವರಾಯಸ್ವಾಮಿ: ನಂ. 3, ಕುಮಾರ ಕೃಪಾ ದಕ್ಷಿಣ, ಬೆಂಗಳೂರು ಬಿ. ಝೆಡ್. ಜಮೀರ್ ಅಹಮದ್ ಖಾನ್: ನಂ. 30, ಸ್ಯಾಂಕಿ ರಸ್ತೆ, ಬೆಂಗಳೂರು ಶಿವರಾಜ್ ಎಸ್.…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಅವರನ್ನು ಆಗಸ್ಟ್ 14, 2026 ರಂದು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ವಿಧಾನಸಭೆಯಲ್ಲಿನ ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆಯ ನಿಯಮಗಳ ಉಪ-ನಿಯಮ 7(1) ರ ಅಡಿಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಈ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಸ್ಪೀಕರ್ ಹುದ್ದೆಗೆ ಸ್ಪರ್ಧಿಸುವವರು ಅಥವಾ ಪ್ರಸ್ತಾಪಿಸುವವರು ಆಗಸ್ಟ್ 13 ರ ಮಧ್ಯಾಹ್ನ 12 ಗಂಟೆಯ ಒಳಗಾಗಿ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ನೋಟಿಸ್ ಸಲ್ಲಿಸಬೇಕಾಗಿದೆ. ಈ ನೋಟಿಸ್‌ಗೆ ಇನ್ನೊಬ್ಬ ಸದಸ್ಯರ ಅನುಮೋದನೆ ಅಗತ್ಯವಿದ್ದು, ನಾಮನಿರ್ದೇಶಿತ ಸದಸ್ಯರು ಆಯ್ಕೆಯಾದಲ್ಲಿ ಹುದ್ದೆಯನ್ನು ಸ್ವೀಕರಿಸಲು ಸಿದ್ಧರಿರುವ ಬಗ್ಗೆ ಹೇಳಿಕೆಯನ್ನು ಹೊಂದಿರಬೇಕು. ಪ್ರಸ್ತುತ ಸ್ಪೀಕರ್ ಮತ್ತು ಉಪ ಸ್ಪೀಕರ್ ಹುದ್ದೆಗಳು ಖಾಲಿಯಾಗಿರುವ ಕಾರಣ ಹಿರಿಯ ಕಾಂಗ್ರೆಸ್ ಶಾಸಕ ಟಿ. ಬಿ. ಜಯಚಂದ್ರ ಅವರು ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೂನ್ 3 ರಂದು ಯು. ಟಿ. ಖಾದರ್ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನಂತರ ಸ್ಪೀಕರ್ ಸ್ಥಾನ ತೆರವಾಗಿತ್ತು. ತದನಂತರ ಉಪ ಸ್ಪೀಕರ್ ಆಗಿದ್ದ ರುದ್ರಪ್ಪ…

Read More