Subscribe to Updates
Get the latest creative news from FooBar about art, design and business.
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
- ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
- ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
- ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
- ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ
- ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ
- ನವೆಂಬರ್ 13ರಂದು ಜಗತ್ತು ಅಂತ್ಯವಾಗುತ್ತಾ? 1960ರ ವಿಜ್ಞಾನಿಗಳ ಲೆಕ್ಕಾಚಾರ ಮತ್ತೆ ಚರ್ಚೆಯಲ್ಲಿ!
Author: Ganesh Tumkuru
ಶಿವಮೊಗ್ಗ: ಜಿಲ್ಲೆಯ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಜಿ.ಕೆ. ವಿನಯ್ (15) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದುದನ್ನು ವಿನಯ್ ವೀಕ್ಷಿಸುತ್ತಾ ನಿಂತಿದ್ದ ವೇಳೆ ದಿಢೀರನೆ ನೆಲಕ್ಕೆ ಕುಸಿದುಬಿದ್ದಿದ್ದಾನೆ. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ದಾಖಲಿಸಿದ್ದಾರೆ. ಆದರೆ, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾರ್ಥಿ ವಿನಯ್ ಸಾವಿನ ಕುರಿತು ಪೋಷಕರು ತೀವ್ರ ಅನುಮಾನ ವ್ಯಕ್ತಪಡಿಸಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿ (ಎ-14) ಪ್ರದೋಷ್ ಸಲ್ಲಿಸಿದ್ದ ‘ಮಾಫಿ ಸಾಕ್ಷಿ’ (Approver) ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ (CCH-59) ನ್ಯಾಯಾಲಯ ಸೋಮವಾರ (ಆಗಸ್ಟ್ 10) ಪುರಸ್ಕರಿಸಿದೆ. ಪ್ರಕರಣದಲ್ಲಿ ದರ್ಶನ್ ಆಪ್ತರೇ ಅವರ ವಿರುದ್ಧ ಸಾಕ್ಷಿ ಹೇಳಲು ಮುಂದಾಗಿರುವುದು ಇಡೀ ಪ್ರಕರಣಕ್ಕೆ ದೊಡ್ಡ ತಿರುವು ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತು ಪವಿತ್ರಾ ಗೌಡಗೆ ತೀವ್ರ ಆತಂಕ ಶುರುವಾಗಿದೆ. 11 ಪುಟಗಳ ಅರ್ಜಿಯಲ್ಲಿ ಏನಿದೆ? ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿಯಲ್ಲಿ, ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಜಯನಗರದ ಮೈದಾನದಲ್ಲಿ ನಟ ದರ್ಶನ್ ಪರಿಚಯವಾದ ದಿನದಿಂದ ಹಿಡಿದು, ಕೊಲೆ ಘಟನೆ ಹಾಗೂ ಜೈಲು ಪಾಲಾಗುವವರೆಗಿನ ಪ್ರತಿಯೊಂದು ಘಟನಾವಳಿಯನ್ನು ಎಳೆಎಳೆಯಾಗಿ ನ್ಯಾಯಾಧೀಶರ ಮುಂದೆ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗಲು ಈ ಹಿಂದೆ ಪ್ರಾಸಿಕ್ಯೂಷನ್…
ಬೆಂಗಳೂರು: ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಪ್ರಕ್ರಿಯೆ ಕುರಿತು ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಶೀಘ್ರದಲ್ಲೇ ಖಾತೆ ಹಂಚಿಕೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ದೆಹಲಿಯಿಂದ ಮುಖ್ಯಮಂತ್ರಿಗಳು ಮರಳಿದ ನಂತರ ಶೀಘ್ರದಲ್ಲೇ ನೂತನ ಸಚಿವರ ಖಾತೆಗಳ ಅಧಿಕೃತ ಪಟ್ಟಿಯನ್ನು ಘೋಷಿಸುವ ನಿರೀಕ್ಷೆಯಿದೆ. ಆಗಸ್ಟ್ 13 ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನವೇ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಿಎಂ ನಿರ್ಧರಿಸಿದ್ದಾರೆ. ಮುಂಬರುವ ಅಧಿವೇಶನದಲ್ಲಿ ವಿಷಯಗಳನ್ನು ಗ್ರಹಿಸಿ ಉತ್ತರಿಸುವುದು ಹೊಸ ಸಚಿವರಿಗೆ ಸವಾಲಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ. ಪರಮೇಶ್ವರ್, ನೂತನ ಸಚಿವರೆಲ್ಲರೂ ಶಾಸಕರಾಗಿ ಅನುಭವ ಹೊಂದಿದ ಸಮರ್ಥರಾಗಿದ್ದಾರೆ ಎಂದು ಹೇಳಿದರು. ಆರಂಭದಲ್ಲಿ ಕೆಲ ತಾಂತ್ರಿಕ ತೊಂದರೆಗಳಿರಬಹುದು, ಆದರೆ…
ಬೆಂಗಳೂರು: “ಪಾಕಿಸ್ತಾನಿಯರೆಲ್ಲರೂ ನಮ್ಮ ಶತ್ರುಗಳಲ್ಲ” ಎಂಬ ಆರ್ ಎಸ್ ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ ಎಸ್ ಎಸ್ ಹಾಗೂ ಪಾಕಿಸ್ತಾನದ ನಡುವಿನ ಲಿಂಕ್ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. “ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ” ಎಂದು ಮೋಹನ್ ಭಾಗವತ್ ಹೇಳಿರುವುದು ಎರಡನೇ ಬಾರಿಯಾಗಿದ್ದು, ಆರ್ ಎಸ್ ಎಸ್ ಮುಖಂಡರು ಹಿಂದೆ ಐಎಸ್ ಐ ಹಾಗೂ ಉಗ್ರಗಾಮಿ ಸಂಘಟನೆಗಳೊಂದಿಗೆ ನಡೆಸಿದ್ದರೆನ್ನಲಾದ ರಹಸ್ಯ ಸಭೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಪೂರ್ವನಿಯೋಜಿತ ಎಂಬ ಸಂಶಯವನ್ನು ಹುಟ್ಟುಹಾಕಿವೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪುಲ್ವಾಮಾ ದಾಳಿಯ ತನಿಖೆಯ ಬಗ್ಗೆ ಇನ್ನೂ ತುಟಿ ಬಿಚ್ಚದಿರಲು ಆರ್ ಎಸ್ ಎಸ್ ಕಾರಣ ಎಂಬುದು ಈಗ ಬಟಾಬಯಲಾಗಿದೆ ಎಂದು ಅವರು ಹೇಳಿದ್ದಾರೆ. ಚುನಾವಣಾ ಸಮಯ ಬಂದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಬಿಂಬಿಸಿ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುವುದು, ಅಧಿಕಾರದಲ್ಲಿದ್ದಾಗ ರಾಜತಾಂತ್ರಿಕ ಹಾಗೂ ರಹಸ್ಯ…
ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಕೋಳಿ ಸಾಕಾಣಿಕೆ ರೈತರ ಸಮಾಲೋಚನಾ ಸಭೆಯು ಬೆಳ್ತಂಗಡಿಯಲ್ಲಿ ಯಶಸ್ವಿಯಾಗಿ ಜರುಗಿತು. ಒಕ್ಕೂಟದ ಅಧ್ಯಕ್ಷರಾದ ಶ್ರೀ ಸಯ್ಯದ್ ಹಸನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಿ.ಕೆ. ಅವರು ಎಲ್ಲರನ್ನೂ ಸ್ವಾಗತಿಸಿದರು. ಅಧ್ಯಕ್ಷರು ಒಕ್ಕೂಟದ ಮುಂದಿನ ಕಾರ್ಯ ಯೋಜನೆಗಳನ್ನು ವಿವರಿಸಿದ ಬಳಿಕ ನಡೆದ ಮುಕ್ತ ಚರ್ಚೆಯಲ್ಲಿ, ಕೋಳಿ ಸಾಕಾಣಿಕೆ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳು ಹಾಗೂ ಕಂಪನಿಗಳ ಧೋರಣೆಯ ಕುರಿತು ಸುದೀರ್ಘವಾಗಿ ಚರ್ಚಿಸಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಒಕ್ಕೂಟದ ಕಾರ್ಯಚಟುವಟಿಕೆಗಳನ್ನು ಹೆಚ್ಚು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸೂಕ್ತ ಸ್ಥಳದಲ್ಲಿ ಸ್ವಂತ ಕಚೇರಿಯನ್ನು ಪ್ರಾರಂಭಿಸಲು ತೀರ್ಮಾನಿಸಲಾಯಿತು. ಹಾಗೆಯೇ ಎಲ್ಲಾ ಕಂಪನಿಗಳು ಕನಿಷ್ಠ ಜಿ.ಸಿ. ದರವನ್ನು 10 ರೂಪಾಯಿಗಳಿಗೆ ಏರಿಕೆ ಮಾಡುವಂತೆ ಆಗ್ರಹಿಸಲು ನಿರ್ಧರಿಸಲಾಯಿತು. ಕೋಳಿ ಲಿಫ್ಟಿಂಗ್ ಗೆ ಕಂಪನಿಗಳು ನೀಡುವ ಲೇಬರ್ ದರ ತೀರಾ ಕಡಿಮೆಯಿರುವುದರಿಂದ ರೈತರೇ ಸ್ವಂತ…
ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಂತ ಮಹತ್ವದ್ದಾಗಿದೆ ಎಂದು ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಶೇಖರ ತಿಳಿಸಿದರು. ತಾಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಟಕೆರೆ ಭೋವಿ ಕಾಲೋನಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸೋಮವಾರ ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗುವ ಇಂತಹ ಜಾಗೃತಿ ಹಾಗೂ ಮಾತ್ರೆ ವಿತರಣಾ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ದೈಹಿಕ ಬೆಳವಣಿಗೆಯ ಕುಂಠಿತದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳು ಕಿವಿಮಾತು ಹೇಳಿದರು. ಆರೋಗ್ಯವೇ ಶೈಕ್ಷಣಿಕ ಪ್ರಗತಿಗೆ ಆಧಾರ: ಕಾರ್ಯಕ್ರಮದಲ್ಲಿ ಭಾಗವಹಿಸಿ…
ತಿಪಟೂರು: ತಾಲೂಕಿನ ಸಾರ್ಥವಳ್ಳಿ ವಲಯದ ಸಾರ್ಥವಳ್ಳಿ ನಿವಾಸಿಯಾದ ಗಂಗಾಧರ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಳೆದ ನಾಲ್ಕು ವರ್ಷಗಳಿಂದ ಪ್ರತಿ ತಿಂಗಳು 1,000 ರೂ. ಗಳಂತೆ ಮಾಸಾಶನ ತಲುಪುತ್ತಿದ್ದು, ಅವರ ಕುಟುಂಬಕ್ಕೆ ಯೋಜನೆ ದೊಡ್ಡ ಆಸರೆಯಾಗಿದೆ. ಇದರ ಜೊತೆಗೆ, ಗಂಗಾಧರ್ ಅವರ ಮಕ್ಕಳಾದ ಲಕ್ಷ್ಮಿ ಮತ್ತು ಹರೀಶ್ ಅವರಿಗೆ ಯೋಜನೆಯ ‘ವಾತ್ಸಲ್ಯ ವಿದ್ಯಾನಿಧಿ’ ಕಾರ್ಯಕ್ರಮದಡಿ ಅಗತ್ಯ ಶಿಕ್ಷಣ ಸಾಮಗ್ರಿಗಳಾದ ನೋಟ್ಬುಕ್, ಬ್ಯಾಗ್, ರೈನ್ಕೋಟ್, ಚಪ್ಪಲಿ ಹಾಗೂ ಬಟ್ಟೆಗಳನ್ನು ವಿತರಿಸಲಾಯಿತು. ಈ ಸಾಮಗ್ರಿಗಳನ್ನು ತುಮಕೂರು-1 ಜಿಲ್ಲೆಯ ಮಾನ್ಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, “ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಇಬ್ಬರೂ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿ” ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ಉದಯ್, ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಮಕ್ಕಳ ತಾಯಿ ಚಂದ್ರಕಲಾ,…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪಂಚತಾರ ಹಾಗೂ ಐಷಾರಾಮಿ ಹೋಟೆಲ್ ಗಳ ಮೇಲೆ ಸಮರ ಸಾರಿದೆ. ಕಾರ್ಯಾಚರಣೆಯ ಮೂರನೇ ದಿನವಾದ ಭಾನುವಾರ ರಾತ್ರಿ ಯುಬಿ ಸಿಟಿ (UB City), ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿರುವ ಪ್ರಸಿದ್ಧ ಹೋಟೆಲ್ ಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಒಟ್ಟು 132 ಕೆ.ಜಿ. ಕಳಪೆ ಆಹಾರ ಪದಾರ್ಥಗಳು ಹಾಗೂ 15 ಲೀಟರ್ ಬಳಸಿದ ಅಡುಗೆ ಎಣ್ಣೆಯನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 15 ಅಧಿಕಾರಿಗಳಿದ್ದ ತಂಡವು ಯುಬಿ ಸಿಟಿಯಲ್ಲಿರುವ ಐದು ಪ್ರಮುಖ ಹೋಟೆಲ್‌ಗಳ ಅಡುಗೆಮನೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ. ಸ್ಕೈ ಹೋಟೆಲ್ (Sky Hotel): ವರದಿಗಳ ಪ್ರಕಾರ, ಇಲ್ಲಿ 45 ಕೆ.ಜಿ. ಕೊಳೆತ ಕೋಳಿ ಹಾಗೂ ದನದ ಮಾಂಸ (ಗೋಮಾಂಸ), 6 ಕೆ.ಜಿ. ವೆಜಿಟೇಬಲ್ ಕಟ್ಲೆಟ್ ಹಾಗೂ 15 ಲೀಟರ್ ಮರುಬಳಕೆಯ ಅಪಾಯಕಾರಿ ಅಡುಗೆ ಎಣ್ಣೆಯನ್ನು ಜಪ್ತಿ ಮಾಡಲಾಗಿದೆ. ಕೊಳೆತ ಮಾಂಸ ಮತ್ತು ಅವಧಿ ಮೀರಿದ ಆಹಾರ ಪತ್ತೆಯಾದ…
ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ನವಿಲು ಮತ್ತು ಚಿರತೆ ಎರಡೂ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕುಡಿಯುವ ನೀರಿನ ಪಂಪ್‌ಸೆಟ್‌ಗೆ ಸಂಬಂಧಿಸಿದ ವಿದ್ಯುತ್ ಪರಿವರ್ತಕದ (ಟ್ರಾನ್ಸ್‌ಫಾರ್ಮರ್) ಮೇಲೇರಿದ್ದ ನವಿಲೊಂದು ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿತ್ತು. ಈ ವೇಳೆ ಮೃತ ನವಿಲನ್ನು ಬೇಟೆಯಾಡಿ ತಿನ್ನುವ ಉದ್ದೇಶದಿಂದ ಟ್ರಾನ್ಸ್‌ಫಾರ್ಮರ್ ಮೇಲೇರಿದ ಚಿರತೆಗೂ ವಿದ್ಯುತ್ ಹರಿದು, ಅದು ಸಹ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತಪಟ್ಟ ನವಿಲು ಹಾಗೂ ಚಿರತೆಯ ಶವಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಭೀಕರ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದರೂ, ಚಾಲಕ ಮತ್ತು ನಿರ್ವಾಹಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಸರಕು ಲೋಡ್ ಮಾಡಿಕೊಂಡು ಸಾಗುತ್ತಿದ್ದ 10 ವೀಲ್ ಲಾರಿ, ಕಡೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಕಣಿವೆ ಕ್ರಾಸ್ ಬಳಿ ತಲುಪುತ್ತಿದ್ದಂತೆ ಬ್ರೇಕ್ ಫೇಲ್ ಆಗಿದೆ. ಪರಿಣಾಮವಾಗಿ ಚಾಲಕನಿಗೆ ಲಾರಿಯ ನಿಯಂತ್ರಣ ತಪ್ಪಿದೆ. ವೇಗವಾಗಿ ಚಲಿಸಿದ ಲಾರಿಯು ರಸ್ತೆ ಪಕ್ಕದಲ್ಲಿದ್ದ ತಡೆ ಬೇಲಿಯನ್ನು ಮುರಿದುಕೊಂಡು, ಮರಕ್ಕೆ ಡಿಕ್ಕಿ ಹೊಡೆದು ನೇರವಾಗಿ 100 ಅಡಿ ಆಳದ ಪ್ರಪಾತಕ್ಕೆ ಹಾರಿ ಬಿದ್ದಿದೆ. ಪ್ರಪಾತಕ್ಕೆ ಬಿದ್ದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಶಬ್ದ ಕೇಳುತ್ತಿದ್ದಂತೆ ವಿಷಯ ತಿಳಿದ ನೂರಾರು ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಕ್ಕೆ ನೆರವಾದರು. ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದರೂ, ಚಾಲಕ…