Author: Ganesh Tumkuru

ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಗೆ ಸೇರಿದ ಪಳವಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಿಂದ ಓಡಿ ಹೋಗಿದ್ದ 3 ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿಕ್ಷಕರ ಕಿರುಕುಳ ಮತ್ತು ಹಲ್ಲೆಯಿಂದ ಬೇಸತ್ತ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಈ ಮೂವರು ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ವಸತಿ ನಿಲಯದಲ್ಲಿದ್ದ ಭೂಸೂರು ತಾಂಡದ ವಿರುಪಾಕ್ಷ, ಅಪ್ಪಾಜಿಹಳ್ಳಿಯ ವಿಷ್ಣುವರ್ಧನ ಹಾಗೂ ಪಾವುಗಡ ಪಟ್ಟಣದ ಹರ್ಷವರ್ಧನ ಎಂಬುವರು ಮಂಗಳವಾರ ಬೆಳಗ್ಗೆ ಉಪಹಾರ ಸೇವಿಸಿದ ಬಳಿಕ ಪ್ರಾರ್ಥನೆಗೆ ಹಾಜರಾಗದೆ ವಸತಿ ನಿಲಯದಲ್ಲೇ ಉಳಿದುಕೊಂಡಿದ್ದರು.  ನಂತರ ಶಾಲೆಯಿಂದ ಹೊರಹೋಗಿ ನಾಪತ್ತೆಯಾಗಿದ್ದರು. ವಿದ್ಯಾರ್ಥಿಗಳ ಸ್ನೇಹಿತರು ನೀಡಿರುವ ಮಾಹಿತಿ ಪ್ರಕಾರ ವಸತಿ ಶಾಲೆಯ ಪ್ರಾಂಶುಪಾಲರಾದ ಲತಾ ಅವರು ಸಂಜೆ ವ್ಯಾಸಂಗದ ವೇಳೆಯಲ್ಲಿ ಎಲ್ಲಾ ಮಕ್ಕಳೂ ನೈಟ್ ಡ್ರೆಸ್ ಕಡ್ಡಾಯವಾಗಿ ಧರಿಸಬೇಕೆಂದು ಸೂಚಿಸಿದ್ದರು. ಕೆಲ ಮಕ್ಕಳ ಬಳಿ ನೈಟ್ ಡ್ರೆಸ್ ಇಲ್ಲದ ಕಾರಣ ಧರಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಕೋಪಗೊಂಡ ಪ್ರಾಂಶುಪಾಲರಾದ ಲತಾ ಅವರು ಸೋಮವಾರ ರಾತ್ರಿ ಡ್ರೈಪ್ ಪೈಪ್‌ ನಿಂದ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ…

Read More

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿರುವ ಹೇಮಾವತಿ ನಾಲೆ ಕಾಮಗಾರಿಯ ವಿಳಂಬ ಧೋರಣೆ ಹಾಗೂ ಅಧಿಕಾರಿಗಳ ನೆಪಮಾತ್ರದ ಭರವಸೆಗಳ ವಿರುದ್ಧ ಆಕ್ರೋಶಗೊಂಡ ರೈತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ, ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದರು. ತಾಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ನೂರಾರು ರೈತರು, ಹೇಮಾವತಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನೆಹರು ಸರ್ಕಲ್‌ನಿಂದ ಆರಂಭಗೊಂಡ ಬೃಹತ್ ರ್‍ಯಾಲಿಗೆ ದನ-ಕರುಗಳು, ಎತ್ತಿನಗಾಡಿಗಳು ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಸಾಲು ಸಾಲಾಗಿ ಹೆಜ್ಜೆ ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳ ಉದ್ದಕ್ಕೂ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶದ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿ ಮುಂಭಾಗ ಜಮಾಯಿಸಿ ಧರಣಿ ಕುಳಿತರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೇಮಾವತಿ ಇಲಾಖೆಯ ಇಂಜಿನಿಯರ್ ಪ್ರಭಾಕರ್, ಇನ್ನೂ 5 ದಿನಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಿ ಕೊಡಲಾಗುವುದು ಎಂದು ಮನವಿ ಮಾಡಲು ಯತ್ನಿಸಿದರು. ಆದರೆ ಇಷ್ಟು ದಿನಗಳ ಕಾಲ ಪದೇ ಪದೇ ಸುಳ್ಳು ಆಶ್ವಾಸನೆ ನೀಡಿ…

Read More

ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು. ದುರ್ಬಲ ವರ್ಗದ ಜನರಿಗೆ ತ್ವರಿತ, ಉಚಿತ ಹಾಗೂ ಸುಲಭವಾಗಿ ನ್ಯಾಯ ತಲುಪಿಸಲು ಕಾನೂನು ಸೇವಾ ಪ್ರಾಧಿಕಾರ ಸದಾ ಸಿದ್ಧವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಎಚ್.ಡಿ. ಕೋಟೆಯ ಅಪರ ಸಿವಿಲ್ ಹಾಗೂ ಜೆಎಂಎಫ್‌ ಸಿ ನ್ಯಾಯಾಧೀಶರಾದ ಸುಷ್ಮಾ ಎಂ. ತಿಳಿಸಿದರು. ಸರಗೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ (ಎಚ್.ಡಿ. ಕೋಟೆ), ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಮಾನವ ಕಳ್ಳಸಾಗಾಣಿಕೆ ವಿರೋಧಿ ದಿನ” ಹಾಗೂ “ಜನರಿಗಾಗಿ – ತ್ವರಿತ, ಉಚಿತ ಮತ್ತು ಸುಲಭ ನ್ಯಾಯ” ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಇತ್ತೀಚಿನ ದಿನಗಳಲ್ಲಿ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ಉತ್ತಮ ಜೀವನ ಶೈಲಿಯ ಸುಳ್ಳು ಆಮಿಷಗಳನ್ನು ಒಡ್ಡಿ…

Read More

ಔರಾದ್ (ಬೀದರ್):  ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲೂ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರಿಶೀಲಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಅಥವಾ ತೊಂದರೆಯಾಗದಂತೆ ಆದ್ಯತೆ ನೀಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಗ್ರಾಮಗಳ ಪರಿಸ್ಥಿತಿಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖೆಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, “ಗ್ರಾಮೀಣ…

Read More

ಬೀದರ್ / ಔರಾದ್: ನೆರೆಯ ರಾಜ್ಯಗಳಿಂದ ಗಡಿ ಚೆಕ್‌ ಪೋಸ್ಟ್‌ ಗಳ ಮೂಲಕ ನಡೆಯುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇರಿಸಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವೆ ಅವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ. ಬುಧವಾರ ಔರಾದ್ ತಾಲೂಕಿನ ‘ಬಾರ್ಡರ್ ತಾಂಡಾ’ ಚೆಕ್‌ ಪೋಸ್ಟ್‌ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸ್ಥಳದಲ್ಲಿದ್ದ ಭದ್ರತಾ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಪ್ರಮುಖ ಸೂಚನೆಗಳನ್ನು ನೀಡಿದರು. ನೆರೆ ರಾಜ್ಯಗಳಿಂದ ಕಾನೂನುಬಾಹಿರ ವಸ್ತುಗಳ ರವಾನೆ ಅಥವಾ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯಲು ಗಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸದಾ ಜಾಗರೂಕರಾಗಿರಬೇಕು ಹಾಗೂ ವಾಹನಗಳ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಅವರು ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ಪಿಎಸ್‌ಐ ದಿನೇಶ ಎಂ.ಟಿ., ಶರಣಪ್ಪ ಹುಣಸೆ, ಸುಭಾಷ ಲಕ್ಕೆ, ದತ್ತು ನರೋಟೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಂಭೀರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಪೋಷಕರು ಹಾಗೂ ಸ್ಥಳೀಯ ಮುಖಂಡರು ಆರೋಪಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಮಕ್ಕಳು ಶಾಲೆಯಿಂದ ಕಾಣೆಯಾಗಿದ್ದರೂ, ಬೆಳಿಗ್ಗೆ 11 ಗಂಟೆಯವರೆಗೂ ಪೋಷಕರಿಗೆ ಯಾವುದೇ ಮಾಹಿತಿ ನೀಡದೆ ಪ್ರಾಂಶುಪಾಲರು ಉಡಾಫೆ ತೋರಿದ್ದಾರೆ. “ಮಕ್ಕಳು ಶಾಲೆಯ ಕಾಂಪೌಂಡ್ ಗೋಡೆ ಹತ್ತಿ ಹೊರಹೋಗಿದ್ದಾರೆ” ಎಂದು ಪ್ರಾಂಶುಪಾಲರು ಸಮರ್ಥಿಸಿಕೊಂಡಿದ್ದರೂ, ಶಾಲಾ ಆವರಣದಲ್ಲಿ ಗೋಡೆ ಹತ್ತಿ ಹೋಗಲು ಸಾಧ್ಯವೇ ಇಲ್ಲ, ಮಕ್ಕಳು ಮುಖ್ಯ ಗೇಟ್ ನಿಂದಲೇ ಹೊರಗೆ ಹೋಗಿದ್ದಾರೆ ಎಂದು ಪೋಷಕರು ಖಂಡಿಸಿದ್ದಾರೆ. ಮಕ್ಕಳು ವಸತಿ ನಿಲಯದಿಂದ ಹೊರಹೋಗಲು ಕಾರಣವೇನು ಎಂಬುದನ್ನು ಪರಿಶೀಲಿಸುವ ಹಾಗೂ ಮಾಹಿತಿ ಪಡೆಯುವ ಕೆಲಸಕ್ಕೆ ಯಾವುದೇ ಅಧಿಕಾರಿಗಳು ಮುಂದಾಗಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಬೇಕಿದ್ದ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿಗಳು (ಇಓ)…

Read More

ಹೊನ್ನವಳ್ಳಿ: ತಿಪಟೂರು ತಾಲೂಕು ಹೊನ್ನವಳ್ಳಿಯಲ್ಲಿ ಗೃಹ ಬಳಕೆ ಸಿಲಿಂಡರ್‌ ಗಳನ್ನು ಬಳಸುತ್ತಿದ್ದ ಕೋಳಿ ಅಂಗಡಿ, ಬೇಕರಿ, ಹೋಟೆಲ್, ಅಂಗಡಿಗಳು, ಟೀ ಸ್ಟಾಲ್‌ ಗಳ ಮೇಲೆ ದಾಳಿನಡೆಸಿದ ತಿಪಟೂರು ತಾಲೂಕು ಅಧಿಕಾರಿಗಳು ತಾಲೂಕಿನ ದಂಡಾಧಿಕಾರಿಗಳ ಮಾರ್ಗದರ್ಶನದಂತೆ ಮುಸ್ಸಂಜೆ ಸಮಯದಲ್ಲಿ ದಾಳಿ ನಡೆಸಲಾಗಿದೆ. ಹೋಬಳಿಯ ವ್ಯಾಪ್ತಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ 14.2 ಕೆ.ಜಿ ಗೃಹ ಉಪಯೋಗಿ ಸಿಲಿಂಡರ್‌ ಗಳನ್ನು ಕೋಳಿ ಅಂಗಡಿ, ಬೇಕರಿ, ಹೋಟೆಲ್‌ ಗಳು, ಟೀ ಸ್ಟಾಲ್ ನವರು ಉಪಯೋಗಿಸುವುದು ಕಂಡುಬಂದಿದ್ದು, ಈ ಬಗ್ಗೆ ತಾಲೂಕು ಆಡಳಿತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಜು.29ರ (ಬುಧವಾರ) ವಶಕ್ಕೆ ಪಡೆದುಕೊಂಡಿರುತ್ತಾರೆ. ಸಂಬಂಧಪಟ್ಟವರ ಮೇಲೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ಮೋಹನ್ ಕುಮಾರ್ ತಿಳಿಸಿದ್ದಾರೆ. ತಾಲೂಕು ಆಡಳಿತದ ವತಿಯಿಂದ ಉತ್ತಮ ಕಾರ್ಯ ಕೈಗೊಂಡಿದ್ದರ ಬಗ್ಗೆ ಜನಗಳು ಪ್ರಶಂಸೆ ವ್ಯಕ್ತಪಡಿಸುತ್ತಿದ್ದು, ಆದರೆ ಗ್ಯಾಸ್ ಸಿಲಿಂಡರ್‌ ಗಳಿಗೆ ಹೆಚ್ಚಿನ ದರವನ್ನು ಪಡೆಯುತ್ತಿರುವ ಬಗ್ಗೆ ಸಹ ಸಾರ್ವಜನಿಕರು ದೂರು ನೀಡಿದ್ದರು. ಕೂಡಲೇ ಬಿಲ್‌ ನಲ್ಲಿ ನಮೂದಾಗುವ ದರಕ್ಕಿಂತ…

Read More

ಮಧುಗಿರಿ: ಎಷ್ಟೇ ಬರಗಾಲ ಬಂದರೂ ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಯಿಂದಾಗಿ ಊಟಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮಾಜಿ ಸಚಿವ ಶಾಸಕ ಕೆ.ಎನ್. ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಅವರು ಎಂ.ಎನ್.ಕೆ ಸಮುದಾಯ ಭವನದಲ್ಲಿ ಬುಧವಾರ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನ್ ಸೃಜನ್ ಅಭಿಯಾನದಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ ಎಸ್‌ ಐ ಆರ್ ಮತದಾರರ ಪಟ್ಟಿ ಪರಿಷ್ಕರಣೆ ಶೇ. 80 ರಷ್ಟು ಪೂರ್ಣಗೊಂಡಿದೆ. ಬೇರೆ ಕಡೆಯಿಂದ ಮದುವೆಯಾಗಿ ಬಂದಿರುವವರು 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂಬ ನಿಯಮವಿದ್ದು, ಅವರ ಮಾವನ ಮತದಾರರ ಪಟ್ಟಿ ಆಧಾರದ ಮೇಲೆ ಎಸ್‌ ಐ ಆರ್‌ ಗೆ ಸೇರಿಸಬೇಕು ಎಂದು ಒತ್ತಾಯಿಸಿದ ಅವರು, ಒಂದೊಂದು ಮತವೂ ಅಮೂಲ್ಯ. ಬಾಕಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿ. ಯಾರೂ ಎಸ್‌ ಐ ಆರ್ ಪ್ರಕ್ರಿಯೆಯಲ್ಲಿ ಇನ್ನೂ ನೋಂದಣಿ ಮಾಡಿಕೊಂಡಿರುವುದಿಲ್ಲ ಅಂತಹವರ ಮನವೊಲಿಸಿ ಮತ ನಷ್ಟವಾಗದ ರೀತಿ ಕ್ರಮ ವಹಿಸಿ. ಮುಂದೆ ಪುರಸಭೆ, ಗ್ರಾ.ಪಂ, ಜಿಪಂ ಚುನಾವಣೆ ಬರಲಿದ್ದು, ಎಲ್ಲಾ…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಮುಖಂಡರಾದ ಸ್ವದೇಶಿ ವಿಶ್ವನಾಥ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಮಂಜೇಶ್, ತಾಲೂಕು ಅಧ್ಯಕ್ಷ ಕಟವೇಲ್ ರಂಗನಾಥ್, ಜಿಲ್ಲಾ ವಾದ್ಯಗಾರರ ಸಂಘದ ಅಧ್ಯಕ್ಷ ಗಂಗಾಧರ್, ಸತ್ಯನಾರಾಯಣ್, ಬಿಸ್ಟೆಕ್ಸ್ ರಾಮರಾಜು, ಸೀತಾರಾಮಯ್ಯ ಸೇರಿದಂತೆ ಸಮುದಾಯದ ಮುಖಂಡರು ಗಳ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, 12ನೇ ಶತಮಾನದ ವಚನ ಚಳವಳಿಯ ನೇತೃತ್ವ ವಹಿಸಿದ್ದ ಹಲವು ಮಹನೀಯರು ಜಯಂತಿಗಳನ್ನು ಸರ್ಕಾರ ಆಚರಿಸುತ್ತಿದ್ದು, ಅವರಲ್ಲಿ ಬಸವಣ್ಣನವರ ಬಲಗೈ ಬಂಟನಂತಿದ್ದ ಶಿವಶರಣ ಹಡಪದ ಅಪ್ಪಣ್ಣನವರು ಒಬ್ಬರು. ಯಾರನ್ನು…

Read More

ತುಮಕೂರು/ಮಧುಗಿರಿ: ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮಹತ್ವದ ಹೆಜ್ಜೆಯಾಗಿ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯ ಸಮೀಪವಿರುವ ಮೊರಾರ್ಜಿ ವಸತಿ ಶಾಲೆಗೆ ಪ.ಪೂ ವಿಜ್ಞಾನ ವಿಭಾಗ ಮಂಜೂರಾಗಿದ್ದು, ಹತ್ತನೇ ತರಗತಿವರೆಗೆ ಮಾತ್ರ ಇದ್ದ ವಸತಿ ಶಾಲೆ ಇದೀಗ ವಿಜ್ಞಾನ ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿದೆ. ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಹಾಗೂ ಎಂಎಲ್ಸಿ ಆರ್.ರಾಜೇಂದ್ರ ಅವರ ಪ್ರಯತ್ನದಿಂದ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಸುತ್ತಮುತ್ತಲ ಗ್ರಾಮೀಣ ವಿದ್ಯಾರ್ಥಿಗಳಿಗೆ ತಮ್ಮ ನೆಲೆ ಸಮೀಪವೇ ವಿಜ್ಞಾನ ನಿಕಾಯವನ್ನು ಅಭ್ಯಾಸಿಸುವ ಮಹತ್ವದ ಅವಕಾಶ ದೊರೆತಂತಾಗಿದೆ. 2013ರಲ್ಲೂ ಶಾಸಕರಾಗಿದ್ದ ಕೆ.ಎನ್.ರಾಜಣ್ಣ ಅವರ ಪ್ರಯತ್ನದಿಂದಲೇ ಮಂಜೂರಾಗಿದ್ದ 10 ಎಕರೆ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಕೇವಲ ಪ್ರೌಢಶಾಲಾ ವಿಭಾಗ ಮಾತ್ರ ಈವರೆಗೆ ಕಾರ್ಯನಿರ್ವಹಿಸುತ್ತಿತ್ತು. ಪ್ರೌಢಶಾಲೆಗೆ ದೊಡ್ಡೇರಿ ಹೋಬಳಿ ಸೇರಿದಂತೆ ತಾಲೂಕಿನ ವಿವಿಧೆಡೆಯ ವಿದ್ಯಾರ್ಥಿಗಳು ಆಗಮಿಸಿ ಅಭ್ಯಾಸಮಾಡುವ ಅವಕಾಶ ದೊರೆತಿತ್ತು. ವಸತಿ ಶಾಲೆಗೆ ದೊರೆತ ಉತ್ತಮ ಸ್ಪಂದನೆ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶವೂ ದಾಖಲಿಸಿದ್ದು, ಇಲ್ಲಿಯೇ ವಿಜ್ಞಾನ ಕಾಲೇಜು ಆರಂಭಿಸಿದರೆ ದೊಡ್ಡೇರಿ ಹೋಬಳಿಯಲ್ಲಿ…

Read More