Author: Ganesh Tumkuru

ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ್ ಶಾಸಕರಾದ ಪ್ರಭು ಚವ್ಹಾಣ ಕರೆ ನೀಡಿದರು. ಔರಾದ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ‘ಕನ್ನಡ ಜಂಗಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರ ಕುಂದುಕೊರತೆಗಳು, ಶಿಕ್ಷಣ, ನೀರಾವರಿ, ಕೃಷಿ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಮಾಧ್ಯಮಗಳಿಂದ ಆಗಬೇಕಿದ್ದು, ತಾಲೂಕಿನ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಅಲ್ಲದೆ, ತಾಲೂಕಿನಲ್ಲಿ ಪತ್ರಕರ್ತರ ಅನುಕೂಲಕ್ಕಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ದೊರೆತರೆ, ಭವ್ಯ ಕಟ್ಟಡ ನಿರ್ಮಿಸಲು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿ, ಪತ್ರಿಕೋದ್ಯಮವು…

Read More

ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಡಿಸಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸುವ ಅವಕಾಶವಿದೆ. ಪ್ರಸ್ತುತ ಸಾಲಿನಲ್ಲಿ ಎಲ್ ನಿನೋದಿಂದ ಮಳೆ ಕೊರತೆಯಿದ್ದು, ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ವಿಮಾ ಕಂತು ಪಾವತಿಸಿ ಭಾಗವಹಿಸಬಹುದು. ಈ…

Read More

ತುಮಕೂರು: ಜಿಲ್ಲೆಯ ಕ್ರೈಸ್ ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ವಿಷಯದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಬಿ.ಎಡ್. ಶಿಕ್ಷಣ ಪಡೆದಿರಬೇಕು. ಗಣಕ ವಿಜ್ಞಾನ ವಿಷಯದ ಹುದ್ದೆಗೆ ಇಂಜಿನಿಯರಿಂಗ್, ಎಂ.ಸಿ.ಎ. ಅಥವಾ ಎಂ.ಎಸ್ಸಿ. ಕಂಪ್ಯೂಟರ್ ವಿಜ್ಞಾನ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಭೇಟಿ ನೀಡಿ ಜುಲೈ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳನ್ನು ಡೆಮೋ ತರಗತಿಗೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರು ಜುಲೈ 31ರಂದು ನಡೆಯುವ ಡೆಮೋ ತರಗತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ಯಾತ್ಸಂದ್ರ, ಮೈದಾಲ ರಸ್ತೆ, ಬಸವಪಟ್ಟಣ, ತುಮಕೂರು, ದೂ.ವಾ. ಸಂ. 0816-2278014ನ್ನು…

Read More

ಸರಗೂರು: 12ನೇ ಶತಮಾನದ ಆದ್ಯ ವಚನಕಾರ, ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೂ ಪೂರಕವಾಗಿದ್ದು, ಪ್ರತಿಯೊಬ್ಬರೂ ಅವರ ವಿಚಾರಧಾರೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮೋಹನಕುಮಾರಿ ಕರೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾಗಿದ್ದ ಹಡಪದ ಅಪ್ಪಣ್ಣನವರು ತಮ್ಮ 200ಕ್ಕೂ ಹೆಚ್ಚು ವಚನಗಳ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದವರು. ಸಮಾನತೆ, ಶ್ರಮ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಮಾಜ ಸುಧಾರಕರಾದ ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಮಾನವ ಬದುಕು ಹಸನಾಗುತ್ತದೆ ಎಂದು ತಹಶೀಲ್ದಾರ್ ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಮುಖಂಡರು ತಾಲೂಕು ಮಟ್ಟದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಕೊರತೆ ಇರುವ ಬಗ್ಗೆ ತಹಸೀಲ್ದಾರ್ ಅವರ ಗಮನಕ್ಕೆ ತಂದರು.…

Read More

ಬೀದರ್ / ಔರಾದ್: ತಾಲೂಕಿನ ಸಂತಪೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ, ಸುಲಭವಾಗಿ ‘ಇ-ಸ್ವತ್ತು’ ವಿತರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ‘ನನ್ನ ಸ್ವತ್ತು ನನ್ನ ಹಕ್ಕು’ ವಿಶೇಷ ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಕಿರಣ ಪಾಟೀಲ್ ಅವರು ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿಯೊಬ್ಬ ಮನೆ ಮಾಲೀಕರು ತಮ್ಮ ಆಸ್ತಿಯ ಸಂಪೂರ್ಣ ದಾಖಲೆಗಳನ್ನು ಪಂಚಾಯತಿಗೆ ಸಲ್ಲಿಸಿ, ಡಿಜಿಟಲೀಕೃತ ಇ–ಸ್ವತ್ತು ಖಾತೆಯನ್ನು ಪಡೆದುಕೊಳ್ಳಬೇಕು,” ಎಂದು ಮನವಿ ಮಾಡಿದರು. ಅಭಿಯಾನದ ಮೊದಲ ದಿನವೇ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಒಟ್ಟು 47 ಅರ್ಜಿಗಳು ಸ್ವೀಕಾರಗೊಂಡಿವೆ. ಇವುಗಳಲ್ಲಿ 9 ಇ-ಸ್ವತ್ತು ದಾಖಲೆಗಳನ್ನು ಸ್ಥಳದಲ್ಲೇ ವಿತರಿಸಲಾಗಿದ್ದು, ಉಳಿದ ಅರ್ಜಿಗಳ ಪರಿಶೀಲನೆ ಹಾಗೂ ಪ್ರಕ್ರಿಯೆ ಪ್ರಗತಿಯಲ್ಲಿದೆ. ಗ್ರಾಮಸ್ಥರು ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಅಧಿಕಾರಿಗಳು ಕೋರಿದ್ದಾರೆ. ಮನೆ–ಮನೆಗೆ ತೆರಳಿ ಜಾಗೃತಿ: ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಮಾತನಾಡಿ, “ಈ ಮಹತ್ವಾಕಾಂಕ್ಷಿ ಅಭಿಯಾನದ…

Read More

ಕೊರಟಗೆರೆ: ಯುವಜನತೆಯನ್ನು ಮಾದಕ ವ್ಯಸನದಂತಹ ಮಾರಕ ಅಭ್ಯಾಸಗಳಿಂದ ದೂರವಿಟ್ಟು, “ಡ್ರಗ್ಸ್ ಮುಕ್ತ ಕರ್ನಾಟಕ” ನಿರ್ಮಿಸುವ ಉದ್ದೇಶದಿಂದ ಕೊರಟಗೆರೆಯ ಎಂ.ಜಿ. ಪ್ಯಾಲೇಸ್ ನಲ್ಲಿ ಸೋಮವಾರ ಬೃಹತ್ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ, ಕೊರಟಗೆರೆ ಪೊಲೀಸ್ ಇಲಾಖೆ ಹಾಗೂ ರಾಘವೇಂದ್ರ ಇಂಟರ್ನ್ಯಾಷನಲ್ ಶಾಲೆಯ ಜಂಟಿ ಸಹಯೋಗದಲ್ಲಿ ಈ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಪಿಯು ಕಾಲೇಜಿನ ನೂರಾರು ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯದರ್ಶಿನಿ ಪಿಯು ಕಾಲೇಜಿನ ಪ್ರಾಂಶುಪಾಲ ರುದ್ರೇಶ್, ವಿದ್ಯಾರ್ಥಿಗಳು ಯಾವುದೇ ದುಷ್ಟ ಆಮಿಷಗಳಿಗೆ ಒಳಗಾಗದೆ ಶಿಕ್ಷಣದತ್ತ ಸಂಪೂರ್ಣ ಗಮನ ಹರಿಸಬೇಕು ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ ನಿರಂತರ…

Read More

ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಕೋಟೆ ತಿಮ್ಮಣ್ಣ ಅವರು ಪಟ್ಟಣದ ನಾಗರಿಕರಿಗೆ ಪ್ರಕಟಿಸಿದ್ದಾರೆ. ಪಟ್ಟಣದ ಗ್ರಾಮ ದೇವತಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೋಟೆ ತಿಮ್ಮಣ್ಣ ಅವರ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಲೆಕ್ಕಪತ್ರವನ್ನು ಮಂಡಿಸಿ, ಸಾರ್ವಜನಿಕರ ಮಾಹಿತಿಗಾಗಿ ಬಹಿರಂಗಪಡಿಸಲಾಯಿತು. 2026ನೇ ಸಾಲಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ದೇಣಿಗೆ ರೂಪದಲ್ಲಿ ನೀಡಿರುವ ಹಣ ಮತ್ತು ದೇವಾಲಯದ ಹುಂಡಿಯಿಂದ ಒಟ್ಟು 7,30,932 ರೂಪಾಯಿ ಸಂಗ್ರಹವಾಗಿತ್ತು. ಈ ಪೈಕಿ ಜಾತ್ರಾ ಮಹೋತ್ಸವದ ಒಟ್ಟು ವೆಚ್ಚಕ್ಕಾಗಿ 6,12,000 ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಉಳಿದಂತೆ 1,18,932 ರೂಪಾಯಿಗಳಷ್ಟು ಹಣ ಉಳಿತಾಯವಾಗಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಜಾತ್ರಾ ಮಹೋತ್ಸವವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಯಾವುದೇ ರೀತಿಯ ಲೋಪ ಅಥವಾ ತೊಂದರೆಯಾಗದಂತೆ ನಿರ್ವಹಿಸಲಾಗಿದೆ. ಆಗಮಿಸಿದ ಭಕ್ತರಿಗೆ…

Read More

ಬೀದರ್: ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆಯ ತೀವ್ರ ಕೊರತೆ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಕ್ಷಣವೇ ಗಂಭೀರವಾಗಿ ಪರಿಗಣಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ನೆರವಿಗೆ ಧಾವಿಸಬೇಕು ಎಂದು ಭಾಲ್ಕಿ ತಾಲೂಕು ವಕೀಲರ ಸಂಘ ಒತ್ತಾಯಿಸಿದೆ. ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ ರಾಚೋಟೆ ಅವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ವಕೀಲರು, ತಹಸೀಲ್ದಾರ್ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು. “ಸಮಾಜದ ಕಷ್ಟಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ. ಮಳೆಯಿಲ್ಲದೆ ಬೆಳೆ ಕಳೆದುಕೊಂಡ ಅನ್ನದಾತ ದಿಕ್ಕು ತೋಚದಂತಾಗಿದ್ದಾನೆ. ರೈತರ ಕಣ್ಣೀರು ಒರೆಸದಿದ್ದರೆ ಸಮಾಜಕ್ಕೆ ಉಳಿಗಾಲವಿಲ್ಲ. ಸರ್ಕಾರ ವಿಳಂಬ ಮಾಡದೆ ಭಾಲ್ಕಿ ತಾಲೂಕು ಸೇರಿದಂತೆ ಸಂಪೂರ್ಣ ಜಿಲ್ಲೆಯನ್ನು ಬರಗಾಲ ಎಂದು ಘೋಷಿಸಬೇಕು. ರೈತರ ಹಕ್ಕಿಗಾಗಿ ಬೀದಿಗಿಳಿದು ಹೋರಾಡಲು ವಕೀಲರ ಸಂಘ ಸದಾ ಸಿದ್ಧವಿದೆ.” — ಮಹೇಶ ರಾಚೋಟೆ, ಅಧ್ಯಕ್ಷರು, ಭಾಲ್ಕಿ…

Read More

ಔರಾದ್‌ (ಬೀದರ್): ಸರ್ಕಾರಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳಿಗೆ ನೆರವಾಗುವುದು ಅತ್ಯಂತ ಶ್ಲಾಘನೀಯ ಕಾರ್ಯ. ಬಡವರಿಗೆ ಸಹಾಯ ಮಾಡುವುದು ಎಂದರೆ ದೇವರಿಗೆ ಸಾಲ ಕೊಟ್ಟಂತೆ ಎಂದು ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಇಮ್ಯಾನುವೆಲ್ (ಬಂಟಿ) ದರ್ಬಾರೆ ಹೇಳಿದರು. ಪಟ್ಟಣದ ಹರಿಜನವಾಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿನಿ ಕುಮಾರಿ ಛಾಯಾ ಅಶೋಕ ತಾರೆ ಅವರು ತಮ್ಮ ಬೌದ್ಧವಾಸಿ ತಂದೆ-ತಾಯಿ ತೇಜಮ್ಮ ತಾರೆ ಹಾಗೂ ಅಶೋಕ ತಾರೆ ಅವರ ಪುಣ್ಯನುಮೋದನೆ ಅಂಗವಾಗಿ ಶಾಲಾ ಮಕ್ಕಳಿಗೆ ನೋಟ್‌ಬುಕ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳ ಇಡೀ ವರ್ಷದ ವಿದ್ಯಾಭ್ಯಾಸಕ್ಕೆ ಬೇಕಾಗುವ ನೋಟ್‌ಬುಕ್, ಡಿಕ್ಷನರಿ, ಅಂಕಲಿಪಿ, ಪೆನ್ಸಿಲ್, ಸ್ಕೇಲ್, ಶಾರ್ಪ್‌ನರ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸುತ್ತಾ ಬರಲಾಗುತ್ತಿದೆ. ಮಕ್ಕಳಲ್ಲಿ ಶಿಸ್ತು ಬೆಳೆಯಬೇಕು, ಜೀವನದಲ್ಲಿ ಉನ್ನತ ಮಟ್ಟಕ್ಕೆ ತಲುಪಲು ಶಿಸ್ತು ಅತ್ಯಂತ ಮುಖ್ಯ ಎಂದು ಉಡುಪಿಯ ನಕ್ಸಲ್ ನಿಗ್ರಹ ದಳದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಅನಿಲ್ ತಾರೆ…

Read More

ತುಮಕೂರು: ನೀಟ್ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ದೇಶಾದ್ಯಂತ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ನಡೆದ ಐತಿಹಾಸಿಕ ಹೋರಾಟಕ್ಕೆ ದೊರೆತ ಜಯದ ಹಿನ್ನೆಲೆಯಲ್ಲಿ, ತುಮಕೂರು ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದ ಎದುರು ಬೃಹತ್ ವಿಜಯೋತ್ಸವವನ್ನು ಆಚರಿಸಲಾಯಿತು. ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಸಭೆಯನ್ನು ಉದ್ದೇಶಿಸಿ ಮಾತನಾಡಿದ AIMSS ಜಿಲ್ಲಾ ಕಾರ್ಯದರ್ಶಿ ರತ್ನಮ್ಮ, “ಈ ಹೋರಾಟವು ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು, ಮಹಿಳೆಯರು ಹಾಗೂ ಶಿಕ್ಷಣಪ್ರೇಮಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ. ಅನ್ಯಾಯದ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಂಘಟಿತವಾಗಿ ಹೋರಾಡಿದಾಗ ಮಾತ್ರ ಅಧಿಕಾರಿಗಳು ಹಾಗೂ ಸರ್ಕಾರ ಜನರ ಧ್ವನಿಯನ್ನು ಆಲಿಸಲು ಸಾಧ್ಯ ಎಂಬುದನ್ನು ಈ ಹೋರಾಟ ಮತ್ತೊಮ್ಮೆ ಸಾಬೀತುಪಡಿಸಿದೆ. ಇಂತಹ ಪ್ರಜಾಸತ್ತಾತ್ಮಕ ಹೋರಾಟಗಳು ಮುಂದೆಯೂ ಮುಂದುವರೆಯಬೇಕು” ಎಂದರು. ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ AIDSO ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ,…

Read More