Subscribe to Updates
Get the latest creative news from FooBar about art, design and business.
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
- ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
- ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
- ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
- ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ
- ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ
- ನವೆಂಬರ್ 13ರಂದು ಜಗತ್ತು ಅಂತ್ಯವಾಗುತ್ತಾ? 1960ರ ವಿಜ್ಞಾನಿಗಳ ಲೆಕ್ಕಾಚಾರ ಮತ್ತೆ ಚರ್ಚೆಯಲ್ಲಿ!
Author: Ganesh Tumkuru
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2 ಕೋಟಿ ರೂಪಾಯಿಯಂತೆ ಒಟ್ಟು 800 ಕೋಟಿ ರೂಪಾಯಿ ಲಂಚ ಪಡೆಯಲಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರಲು ಪ್ರಕರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಕಾಲೇಜುಗಳಲ್ಲಿ ಸಾಧಾರಣ ವಿದ್ಯಾರ್ಥಿಗಳಾಗಿದ್ದವರು ಹಣ ನೀಡಿದ್ದರಿಂದ KPSC ಪರೀಕ್ಷೆಯಲ್ಲಿ 400 ಅಂಕ ಪಡೆದಿದ್ದಾರೆ. ಅದೇ ಪ್ರತಿಭಾವಂತ/ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ (350 ರವರೆಗೆ) ನೀಡಲಾಗಿದೆ. ಪಶುವೈದ್ಯಾಧಿಕಾರಿ ಹುದ್ದೆಗೆ 1 ರಿಂದ 2 ಕೋಟಿ ರೂ. ವಸೂಲಿ ಮಾಡಿರುವ ಬಗ್ಗೆ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಇದರಲ್ಲಿ ಐಎಎಸ್ (IAS) ಅಧಿಕಾರಿಯೊಬ್ಬರ ಹೆಸರು ಪ್ರಸ್ತಾಪವಾಗಿದ್ದು, ಸರ್ಕಾರದ ಸಚಿವರಿಗೂ ಹಣ ತಲುಪಿದೆಯೇ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. “ಲಂಚ ಪಡೆದವರೇ ತನಿಖೆ…
ಹಾವೇರಿ: ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಕೊಲೆ ಬೆದರಿಕೆಯೊಡ್ಡಿದ ಗಂಭೀರ ಆರೋಪದಡಿ ದಂಪತಿ ವಿರುದ್ಧ ಹಾವೇರಿ ಸಿಇಎನ್ (CEN) ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹಾವೇರಿಯ ಬಸವೇಶ್ವರ ನಗರದ ನಿವಾಸಿ ಸಚಿನ್ ದಾನಪ್ಪನವರ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸುಪ್ರಿಯಾ ಸಚಿನ್ ದಾನಪ್ಪನವರ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಜುಲೈ 12ರ ರಾತ್ರಿ ಸಚಿನ್ ಸಂತ್ರಸ್ತೆ ಮಹಿಳೆಗೆ ಕರೆ ಮಾಡಿ, ತನ್ನ ಲೈಂಗಿಕ ಬೇಡಿಕೆಯನ್ನು ಪೂರೈಸದಿದ್ದರೆ ಆಕೆಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಶ್ಲೀಲ ಫೋಟೋ ರವಾನೆ: ದೂರುದಾರಳ ಪತಿಗೆ ಫೋನ್ ಪೇ (PhonePe) ಮೂಲಕ ಅಶ್ಲೀಲ ಫೋಟೋ ಕಳುಹಿಸಿ ವಿಕೃತಿ ಮೆರೆದಿದ್ದ ಎಂಬ ಆರೋಪವೂ ಕೇಳಿಬಂದಿದೆ. ಮಹಿಳೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಲ್ಲದೆ, ಆಕೆಯ ಕುಟುಂಬದ ಮೇಲೆ ಕೊಲೆ ಬೆದರಿಕೆ…
ಬೆಂಗಳೂರು: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ, ಅವರನ್ನು ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಮನವೊಲಿಸಲು ಪಕ್ಷದ ನಾಯಕರು ಪ್ರಯತ್ನಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು “ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ, ಪಕ್ಷಕ್ಕಾಗಿ ದುಡಿಯುವುದನ್ನು ಮತ್ತು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ಮುಂದುವರಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ, ಅವರನ್ನು ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನಾವೆಲ್ಲರೂ ಮನವೊಲಿಸುತ್ತೇವೆ ಎಂದು ಶಿವಲಿಂಗೇಗೌಡ ಮಾಧ್ಯಮಗಳಿಗೆ ತಿಳಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋರಿದರೆ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. — ಅಶೋಕ್ ಪಟ್ಟಣ್, ಶಾಸಕರು ಸಿದ್ದರಾಮಯ್ಯ ಅವರು ಇನ್ನು…
ಸರಗೂರು: ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆಯ ವಿವಿಧ ಜಿಲ್ಲಾ ಹಾಗೂ ರಾಜ್ಯ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ನೇಮಕಾತಿಯನ್ನು ಪ್ರಕಟಿಸಲಾಗಿದ್ದು, ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರಾಜ್ಯಾಧ್ಯಕ್ಷ ಸುರೇಶ್ ಕುಮಾರಬೀಡು ಹಾಗೂ ಕಾರ್ಯಾಧ್ಯಕ್ಷ ದ್ಯಾವಪ್ಪ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮಹತ್ವದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ರಾಜ್ಯ ಉಪಾಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ಮಾತನಾಡಿದ ಎಂ. ದಾಸಪ್ಪ ಆಗತ್ತೂರು, “ನನ್ನ ಮೇಲೆ ಭರವಸೆಯಿಟ್ಟು ಈ ಪ್ರಮುಖ ಜವಾಬ್ದಾರಿಯನ್ನು ಹಸ್ತಾಂತರಿಸಿದ ರಾಜ್ಯಾಧ್ಯಕ್ಷ ಸುರೇಶ್ ಕುಮಾರಬೀಡು, ಕಾರ್ಯಾಧ್ಯಕ್ಷ ದ್ಯಾವಪ್ಪ ನಾಯಕ ಹಾಗೂ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ತಿಳಿಸಿದರು. ಮುಂದುವರಿದು ಮಾತನಾಡಿದ ಅವರು, ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಮಾಜದ ಸರ್ವಾಂಗೀಣ ಹಿತರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ನಗರದ ಹಾಸ್ಟೆಲ್, ಮೈದಾನ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ನೀಟ್ ಹಗರಹಣ ವಿರುದ್ಧ ಸುದೀರ್ಘಕಾಲ ನಡೆದ, ವಿದ್ಯಾರ್ಥಿ ಹೋರಾಟದ ಐತಿಹಾಸಿಕ ವಿಜಯವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸಿದ ಬೃಹತ್ ಹೋರಾಟದ ಫಲವಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಆಗ್ರಹಿಸಿದ್ದರು! ಈ ಐತಿಹಾಸಿಕ ವಿಜಯವನ್ನು ದೇಶದಾದ್ಯಂತ ವಿದ್ಯಾರ್ಥಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ, ಸಚಿವರ ರಾಜೀನಾಮೆಯ ಮಾರನೇ ದಿನವೇ ಕೇಂದ್ರ ಸರ್ಕಾರವು ಸುಧಾರಣೆಯ ಹೆಸರಿನಲ್ಲಿ ಮತ್ತೊಂದು ಹೊಸ ತಂತ್ರವನ್ನು ಹೆಣೆದಿದೆ. ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರವು ಟಾಸ್ಕ್ ಫೋರ್ಸ್ ಒಂದನ್ನು ರಚಿಸಿದ್ದು, ದಕ್ಷಿಣ ಭಾರತದ ಕಾರ್ಪೊರೇಟ್ ದೈತ್ಯ ನಂದನ್ ನೀಲಖೇಣಿ ಅವರನ್ನು ಇದರ ಅಧ್ಯಕ್ಷರನ್ನಾಗಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ವಿದ್ಯಾರ್ಥಿ ಸಮುದಾಯಕ್ಕೆ ಮತ್ತೆ…
ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ತಾಲೂಕು ಅಧ್ಯಕ್ಷ ಗೌತಮ್ ಪಿ. ಮೇತ್ರೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಭಾಗಗಳಲ್ಲಿ ಅಕ್ರಮ ಸಾರಾಯಿ ಹಾವಳಿ ಮಿತಿಮೀರಿದ್ದು, ಸಾರ್ವಜನಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಅಕ್ರಮ ಮದ್ಯದ ಹಾವಳಿಯಿಂದಾಗಿ ಹದಿಹರೆಯದ ಯುವಕರು ಮದ್ಯವ್ಯಸನಕ್ಕೆ ತಳ್ಳಲ್ಪಡುತ್ತಿದ್ದು, ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಹಾಗೂ ಆರ್ಥಿಕ ಸಂಕಷ್ಟ: ಅಕ್ರಮ ಮದ್ಯ ಮಾರಾಟದಿಂದ ಗ್ರಾಮಗಳಲ್ಲಿ ಶಾಂತಿ-ಸುವ್ಯವಸ್ಥೆ ಹದಗೆಡುತ್ತಿದೆ. ಬಡ ಕುಟುಂಬಗಳು ಸಾಲದ ಸುಳಿಗೆ ಸಿಲುಕಿ ಆರ್ಥಿಕವಾಗಿ ನಲುಗುತ್ತಿದ್ದು, ಕೆಲ ಕುಟುಂಬಗಳು ಜೀವನೋಪಾಯಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವನ್ನು ಕೇಳುವವರೇ ಇಲ್ಲದಂತಾಗಿದೆ. ಅಕ್ರಮ ಮದ್ಯ ಮಾರಾಟಗಾರರ…
ಕೂಡ್ಲಿಗಿ (ವಿಜಯನಗರ): “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ ಕಾಟೇರ ರಮೇಶ್ ಕರೆ ನೀಡಿದರು. ಜುಲೈ 26ರಂದು ಪಟ್ಟಣದ ಬಿಸಿಎಂ ಬಾಲಕಿಯರ ಹಾಸ್ಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕಾರ್ಗಿಲ್ ವಿಜಯ ದಿವಸ’ ಕಾರ್ಯಕ್ರಮದಲ್ಲಿ ಅವರು ಮುಖ್ಯ ವಕ್ತಾರರಾಗಿ ಭಾಗವಹಿಸಿ ಮಾತನಾಡಿದರು. “ನಮ್ಮೆಲ್ಲರಿಗೂ ಒಂದೇ ದೇವರು, ಅದುವೇ ನಮ್ಮ ದೇಶ. ದೇಶ ಸೇವೆಯಲ್ಲಿಯೇ ನಿಜವಾದ ದೇವರ ಸೇವೆಯಿದೆ. ಸೈನಿಕನಾಗುವುದು ಒಂದೇ ದೇಶಸೇವೆಯಲ್ಲ; ಸಾಮಾಜಿಕ ಸೇವೆ, ಜನಪರ ಕಾರ್ಯಗಳು ಹಾಗೂ ಸರ್ಕಾರಿ ಹುದ್ದೆಯಲ್ಲಿದ್ದು ನಿಷ್ಠೆ-ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವುದೂ ಕೂಡ ದೇಶಸೇವೆಯೇ ಆಗಿದೆ. ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ, ದೇಶಕ್ಕಾಗಿ ನಾವೇನು ಕೊಡುಗೆ ನೀಡಿದ್ದೇವೆ ಎಂಬುದು ಮುಖ್ಯ” ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು ಹಾಗೂ ಗಣ್ಯರು ಸೇರಿ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಗೈದರು. ನಂತರ ಉರಿಯುವ ಮೇಣದಬತ್ತಿಗಳನ್ನು ಹಿಡಿದು ಕೆಲಕಾಲ ಮೌನಾಚರಣೆ ಮಾಡುವ ಮೂಲಕ, ಯುದ್ಧದಲ್ಲಿ ವೀರಮರಣವನ್ನಪ್ಪಿದ ವೀರ ಯೋಧರ…
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಹಂಚಿಕೊಂಡರು. ಆದಾಯ ಮಿತಿ ಹೆಚ್ಚಳ: ಆಡಳಿತಾತ್ಮಕ ಸುಧಾರಣಾ ಆಯೋಗದ ಶಿಫಾರಸಿನಂತೆ ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಪಡೆಯುವ ವಾರ್ಷಿಕ ಆದಾಯದ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಪ್ರಕ್ರಿಯೆ ನಡೆಯುತ್ತಿದೆ. ಯಾವ ಕಾರ್ಡ್‌ಗಳೂ ರದ್ದಾಗಲ್ಲ: ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಚೀಟಿಗಳ ಪರಿಶೀಲನೆ ನಡೆಯುತ್ತಿದ್ದು, ಅರ್ಹರ ಕಾರ್ಡ್ ರದ್ದುಪಡಿಸುವುದಿಲ್ಲ. ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ಎಪಿಎಲ್ (APL) ವರ್ಗಕ್ಕೆ ಬದಲಾಯಿಸಲಾಗುತ್ತಿದೆ ಎಂದರು. ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 10…
ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬರ ನಿರ್ವಹಣೆ ವೈಫಲ್ಯ, ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ, ಪಡಿತರ ಅಕ್ಕಿ ಕಳ್ಳಸಾಗಣೆ ಹಾಗೂ ಬೆಲೆ ಏರಿಕೆಯಂತಹ ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಜಂಟಿಯಾಗಿ ತೊಳೆಯಲು ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು ಎಂದರು. ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಕಾರಣಕ್ಕೆ ಈವರೆಗೆ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಚರ್ಚಿಸಿ, ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲು ತಂತ್ರ ರೂಪಿಸಲಾಗುವುದು ಎಂದರು. ಕೆಪಿಎಸ್ ಸಿ ಅಕ್ರಮ ಆರೋಪ: ಕೆಪಿಎಸ್ ಸಿ ನಡೆಸಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಆಯೋಗದಲ್ಲಿ ಸುಧಾರಣೆ ತರುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ ಎಂದು ವಿಜಯೇಂದ್ರ ಕಿಡಿಕಾರಿದರು. ಕಾಂಗ್ರೆಸ್…
ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ ನಿವಾಸಿಯಾಗಿದ್ದ ಮಲ್ಲ ಅಲಿಯಾಸ್ ವೀರಣ್ಣ (42) ಕೊಲೆಯಾದ ದುರದೃಷ್ಟಕರ. ಈತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ರಾತ್ರಿ ಸುಮಾರು 8:30ರ ವೇಳೆಗೆ ಬೆಳಗುಂಬ ಸಮೀಪದ ಗರುಡ ಕೆಫೆ ಮುಂಭಾಗ ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ಮಲ್ಲನ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದೆ. ಆತನ ಮನೆ ಸಮೀಪವೇ ವಿಕೃತವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ, ಗುರುತೇ ಸಿಗದಂತೆ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಮಲ್ಲ 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಗಡ್ಡ ರಾಜು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯಾಗಿದ್ದು, ಆ ಬಳಿಕ ಆತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿತ್ತು. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ…