Author: Ganesh Tumkuru

ಅರಕಲಗೂಡು: ತಾಲ್ಲೂಕಿನ ಕೊಣನೂರು ಹೋಬಳಿಯ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ದುರಂತವೊಂದರಲ್ಲಿ ರೈತರಿಗೆ ಸೇರಿದ ತಂಬಾಕು ಬ್ಯಾರಲ್ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ವರದಿಯಾಗಿದೆ. ಗ್ರಾಮದ ಪುಟ್ಟೇಗೌಡ ಎಂಬುವರಿಗೆ ಸೇರಿದ ತಂಬಾಕು ಬ್ಯಾರಲ್ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮವಾಗಿ ಬ್ಯಾರಲ್ ನಲ್ಲಿದ್ದ ತಂಬಾಕು ಹಾಗೂ ಇಡೀ ಕಟ್ಟಡ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಕುಟುಂಬಕ್ಕೆ ಭಾರಿ ನಷ್ಟವುಂಟಾಗಿದೆ. ತಿಳಿದು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಹೆಚ್.ಪಿ. ಶ್ರೀಧರ್ ಗೌಡ ಅವರು ಹಾನಿಗೊಳಗಾದ ಸ್ಥಳವನ್ನು ಪರಿಶೀಲಿಸಿದರು. ಅಗ್ನಿ ಅವಘಡದಿಂದ ಕಂಗಾಲಾಗಿರುವ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಧೈರ್ಯತುಂಬಿ, ಸರ್ಕಾರದ ವತಿಯಿಂದ ಸಿಗಬೇಕಾದ ಸೂಕ್ತ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ವರದಿ: ಮಂಜು ಶ್ರವಣೂರು, ಹೊಳೆನರಸೀಪುರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಹೊಳೆನರಸೀಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಬೆಂಗಳೂರು) ಇದರ ವತಿಯಿಂದ ಹೊಳೆನರಸೀಪುರ ತಾಲ್ಲೂಕು ಪ್ರಾಥಮಿಕ ಶಾಲಾ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎನ್. ಭೋಗೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಎಸ್.ಕೆ. ಮಲ್ಲರಾಜೇಗೌಡ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರನ್ನು ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯಲ್ಲಿ ವಿಶೇಷವಾಗಿ ಸನ್ಮಾನಿಸಿ, ಹಾರೈಕೆಗಳನ್ನು ಕೋರಲಾಯಿತು. ಈ ಸನ್ಮಾನ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ವರದಿ: ಮಂಜು ಶ್ರವಣೂರು, ಹೊಳೆನರಸೀಪುರ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ವಾಸವಾಗಿದ್ದ ಮಂದಗೆರೆ ಬೈರನಾಯಕ (ಅಂದಾಜು 50 ವರ್ಷ) ಅವರು ರೈಲಿಗೆ ಸಿಲುಕಿ ದುರ್ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 02ರ ಮಧ್ಯರಾತ್ರಿ ಹಾಸನದಿಂದ ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಬೈರನಾಯಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು–ಬಳಗವನ್ನು ಅಗಲಿದ್ದಾರೆ. ಕುಟುಂಬದ ಯಜಮಾನನ ಹಠಾತ್ ಅಗಲಿಕೆಯಿಂದ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವರದಿ: ಮಂಜು ಶ್ರವಣೂರು, ಹೊಳೆನರಸೀಪುರ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ಸರಗೂರು: ತಾಲ್ಲೂಕಿನ ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಪಾಟೀಲ್ ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಗುರುವಾರ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ ನೂತನ ಪದಾಧಿಕಾರಿಗಳ ವಿವರ: ಗೌರವಾಧ್ಯಕ್ಷರು: ಗೋಪಾಲಕೃಷ್ಣ ಅಧ್ಯಕ್ಷರು: ರಾಜೇಶ್ ಉಪಾಧ್ಯಕ್ಷರು: ಪಾಟೀಲ್ ಕಾರ್ಯದರ್ಶಿ: ಮಹೇಶ್ ಖಜಾಂಚಿ: ಶ್ರೀಕಾಂತ್ ನಿಂಗಪ್ಪ ನಿರ್ದೇಶಕರು: ಲೋಕೇಶ್, ಕುಮಾರ್, ಮಿಥುನ್, ಪ್ರಕಾಶ್, ನಾಗೇಶ್ ಹಾಗೂ ರವಿನಂದನ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ ಮಾತನಾಡಿ, ಸಂಘದ ಸದಸ್ಯರ ಎಲ್ಲ ರೀತಿಯ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದರು. ವಾಹನ ಚಾಲಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಚಾಲಕರಿಗೆ ಎದುರಾಗುವ ಕಷ್ಟ-ಕಾರ್ಪಣ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು, ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬ ಸದಸ್ಯರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು…

Read More

ಬೀದರ್: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ತಿಳಿಸಿದರು. ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ–ಜಿ ರಾಮ್ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿಯನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು. ಗ್ರಾಮೀಣ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾರೂ ವಲಸೆ ಹೋಗಬೇಡಿ, ನಿಮ್ಮೂರಲ್ಲೇ ಕೆಲಸ ಮಾಡಿ. ವಿಬಿ–ಜಿ ರಾಮ್ಜಿ ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಪ್ರಸ್ತುತ ದಿನಕ್ಕೆ ರೂ. 382 ಕೂಲಿ ನೀಡಲಾಗುತ್ತಿದ್ದು, 125 ದಿನಗಳ ಉದ್ಯೋಗ ಪಡೆದ ಕುಟುಂಬವು ಗರಿಷ್ಠ ರೂ. 47,750 ವರೆಗೆ ಕೂಲಿ ಪಡೆಯಬಹುದಾಗಿದೆ ಎಂದು ವಿವರಿಸಿದರು. ಇದೇ ವೇಳೆ ಕಂದಗೂಳ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ, ಜಲ ಜೀವನ್ ಮಿಷನ್ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮಸ್ಥರಿಗೆ…

Read More

ಬೀದರ್: ಶ್ರೀಶೈಲಂನ ಅಕ್ಕ ಮಹಾದೇವಿ ಚೈತನ್ಯ ಪೀಠದಲ್ಲಿ ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಜಾನಸನ್ ಘೋಡೆ ಅವರನ್ನು ಪೀಠದ ಅಧಿಪತಿ ಮಾತೆ ಕರುಣಾದೇವಿ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಈ ವೇಳೆ ಜಾನಸನ್ ಘೋಡೆ ಅವರ ಸಾಮಾಜಿಕ ಕಾರ್ಯಗಳನ್ನು ಅವರು ವಿಶೇಷವಾಗಿ ಶ್ಲಾಘಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಜಾನಸನ್ ಘೋಡೆ ಅವರು ಜ್ಯೋತಿರ್ಲಿಂಗದ ದರ್ಶನ ಪಡೆದು ಧನ್ಯತಾ ಭಾವ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಬೇಮಳಖೇಡ ಮಠದ ಪೀಠಾಧಿಪತಿ ಡಾ.ರಾಜಶೇಖರ ಶಿವಾಚಾರ್ಯ, ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಯುವ ಉದ್ಯಮಿ ಸಂಗಮೇಶ ಪಟೇಲ್ ಹಾಗೂ ಪ್ರಮುಖ ಮುಖಂಡರಾದ ಧಮ್ಮದೀಪ, ವಿಕಾಸ ನಾಸಿಗಾರ್, ರಾಕೇಶ್ ದಂಡೆ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ಬೆಂಗಳೂರು: ಕರ್ನಾಟಕ ಹೈಕೋರ್ಟ್​​ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ತಮ್ಮ ವೇಗವಾದ ಹಾಗೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವಿಲೇವಾರಿಯಿಂದ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಸೆಪ್ಟೆಂಬರ್ 02 ರಂದು ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿ ಹೈಕೋರ್ಟ್ ಕಲಾಪದಲ್ಲಿ ಹೊಸ ಇತಿಹಾಸ ಹಾಗೂ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಾಮಾನ್ಯವಾಗಿ ಹೈಕೋರ್ಟ್ ಕಲಾಪಗಳು ನಿಗದಿತ ವೇಳೆಗೆ ಮುಕ್ತಾಯಗೊಳ್ಳುತ್ತವೆ. ಆದರೆ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿರುವ ಪೀಠವು ಸೆಪ್ಟೆಂಬರ್ 2ರಂದು ರಾತ್ರಿ 8:30 ಗಂಟೆಯವರೆಗೂ ಅರ್ಜಿಗಳ ವಿಚಾರಣೆ ನಡೆಸಿ ಅಚ್ಚರಿ ಮೂಡಿಸಿತು. 555 ಪ್ರಕರಣಗಳ ವಿಚಾರಣೆ: ಒಂದೇ ದಿನದಲ್ಲಿ ಒಟ್ಟು 555 ರಿಟ್ ಮತ್ತು ಕ್ರಿಮಿನಲ್ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಲಾಗಿದ್ದು, ಅದರಲ್ಲಿ ಒಟ್ಟು 85 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ತುರ್ತು ಅರ್ಜಿಗಳ ವಿಲೇವಾರಿ: ಬೆಳಗಿನ ಕಲಾಪದಲ್ಲಿ ನಿಗದಿತವಾಗಿದ್ದ 318 ಅರ್ಜಿಗಳ ವಿಚಾರಣೆ ಮುಗಿಸಿದ ಬಳಿಕ, ತುರ್ತು ವಿಚಾರಣೆಗೆ ಕೋರಿದ್ದ 240ಕ್ಕೂ ಹೆಚ್ಚು ಮೆಮೊಗಳನ್ನು ಸ್ವೀಕರಿಸಲಾಗಿತ್ತು. ಮಧ್ಯಾಹ್ನ 2:30ಕ್ಕೆ ಆರಂಭವಾದ ಕಲಾಪದಲ್ಲಿ ಈ ತುರ್ತು…

Read More

ತಿಪಟೂರು: ನೈತಿಕ ರಾಜಕಾರಣ ಕುಸಿಯುತ್ತಿರುವ ಕಾಲಘಟ್ಟದಲ್ಲಿ ಬಿ.ಸಿ.ನಾಗೇಶ್ ಆದರ್ಶ ರಾಜಕಾರಣ ನಡೆಸಿದ್ದಾರೆ. ಪ್ರಾಮಾಣಿಕತೆ, ಸಿದ್ಧಾಂತ ಮತ್ತು ಹಿಂದುತ್ವದ ಆಧಾರದ ಮೇಲೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದು, ಅವರ ಕುಟುಂಬಕ್ಕೆ ರಾಜಕೀಯವಾಗಿ ಶಕ್ತಿ ತುಂಬುವುದರ ಜೊತೆಗೆ, ಮಾನ್ಯತೆ ನೀಡುವುದು ಪಕ್ಷದ ಜವಾಬ್ದಾರಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ನಗರದ ಗುರುಕುಲ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಬಿ.ಸಿ.ನಾಗೇಶ್ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ನೈತಿಕ ರಾಜಕಾರಣ ಕುಸಿಯುತ್ತಿದೆ. ಧರ್ಮ ಹಾಗೂ ನೈತಿಕತೆಯ ರಕ್ಷಣೆಗಾಗಿ ನಾನು ಸಹ ಪ್ರತಿರೋಧ ಮಾಡಿದ್ದೇನೆ. ನಮಗೆ ಧರ್ಮರಕ್ಷಣೆ ಮುಖ್ಯ. ಬಿ.ಸಿ. ನಾಗೇಶ್ ಅವರೊಂದಿಗೆ ನಾನು ಅತಿ ಪ್ರೀಯ ಒಡನಾಟ ಹೊಂದಿದ್ದೆ. ಸರಳತೆಯ ಜೀವನ ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಆದರ್ಶಮಯ ರಾಜಕೀಯ ಜೀವನವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.  ಬಿ.ಸಿ.ನಾಗೇಶ್ ವೈಚಾರಿಕ ರಾಜಕಾರಣ ಪಾಲಿಸುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ನೈತಿಕ ಮೌಲ್ಯ ತುಂಬುವ ಕೆಲಸ ಮಾಡಿದ್ದರು. ವೈಚಾರಿಕ…

Read More

ಕುಣಿಗಲ್: ಕ್ರೀಡೆ ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿಯಾಗಿದ್ದು, ಯುವ ಕ್ರೀಡಾಪಟುಗಳನ್ನು ಒಗೂಡಿಸುವ ಆಟವಾಗಿದೆ. ಹಾಗಾಗಿ ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಬೇಕೆಂದು ತಹಶೀಲ್ದಾರ್ ಎನ್.ಆರ್.ಕರಿಯಾನಾಯ್ಕ್ ತಿಳಿಸಿದರು. ಅವರು ಮಂಗಳವಾರ ಪಟ್ಟಣದ ಜೆಕೆಬಿಎಂಎಸ್ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಅರವಿಂದ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು. ಪ್ರತಿಯೊಬ್ಬರು ಕ್ರೀಡೆಯಲ್ಲಿ ಉತ್ತಮ ತರಬೇತಿ ಹೊಂದಿ ತಾಲ್ಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತರಬೇಕು. ಹಾಗಾಗಿ ಶಿಕ್ಷಣಾಭ್ಯಾಸದ ಜೊತೆಗೆ ಕ್ರೀಡೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಧ್ವಜವಂದನೆ ಸ್ವೀಕರಿಸಿ ಮಾತನಾಡಿದ, ಕುಣಿಗಲ್ ವೃತ್ತ ನಿರೀಕ್ಷಕ ಮಾಧ್ಯಾನಾಯ್ಕ್ ತಾಲ್ಲೂಕು ಕ್ರೀಡೆ, ಸಾಂಸ್ಕೃತಿಕ ಮತ್ತು ವಿದ್ಯಾಭ್ಯಾಸಕ್ಕೆ ಅತ್ಯಂತ ಹೆಚ್ಚಿನ ಮಹತ್ವವನ್ನು ನೀಡುತ್ತಿರುವುದು ವಿಶೇಷವಾಗಿದೆ. ಯಾರು ಗೆಲ್ಲುತ್ತಾರೆ ಎನ್ನುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಯಲ್ಲಿ…

Read More

ತುಮಕೂರು: ನಗರಪಾಲಿಕೆ ವ್ಯಾಪ್ತಿಯ ಸ್ಲಂ ಜನರ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್, ದಿನಾಂಕ:14-8-2026 ರಂದು ಸ್ಲಂ ಸಮಿತಿ 11 ಬೇಡಿಕೆಗಳ ಕುಂದು ಕೊರತೆಯನ್ನು ನನ್ನ ಗಮನಕ್ಕೆ ಸಲ್ಲಿಸಿದ್ದು ಅದರಂತೆ ಇದುವರೆಗೂ 36 ಸ್ಲಂಗಳಲ್ಲಿ ಹಕ್ಕುಪತ್ರ ಸಂಬಂಧ ಸಮೀಕ್ಷೆ ಕೈಗೊಂಡಿದ್ದು ಸ್ಥಳೀಯ ಸಂಸ್ಥೆಗಳ ಸ್ವಾಧೀನದಲ್ಲಿರುವ ಕೊಳಚೆ ಪ್ರದೇಶಗಳಲ್ಲಿ 1250 ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ, 140 ಫಲಾನುಭವಿಗಳಿಗೆ ಇದುವರೆಗೂ ಹಕ್ಕುಪತ್ರ ವಿತರಿಸಲಾಗಿದೆ. ಬಾಕಿ ಉಳಿದಿರುವ 110 ಫಲಾನುಭವಿಗಳಿಗೆ ಡಿಸೆಂಬರ್ ಮೊದಲ ವಾರದಲ್ಲಿ ಹಕ್ಕುಪತ್ರ ನೀಡಲು ಅಗತ್ಯವಾದ ಕ್ರಮವಹಿಸಲು ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಹಾಗೂ ಸ್ಲಂ ಬೋರ್ಡ್ ಇಂಜಿನಿಯರ್ ಕ್ರಮವಹಿಸಬೇಕು ಎಂದರು. ಸಭೆಯಲ್ಲಿ ಸ್ಲಂ ಜನರಿಗೆ ಹೊನ್ನೇನಹಳ್ಳಿ ಸರ್ವೆ ನಂ, 44 ರಲ್ಲಿ ನಿರ್ಮಾಣವಾಗುತ್ತಿರುವ 192 ವಸತಿ ಸಮುಚ್ಚಯಗಳಿಗೆ ಪಿಎಂವಿಎ ವಸತಿ ಯೋಜನೆಯ ಗ್ರಿಡ್ ಲೈನ್ ನಂತೆ ಆಯ್ಕೆ ಮಾಡಬೇಕು. ಭಾರತಿ ನಗರ ಎಸ್.ಎನ್ ಪಾಳ್ಯ ಸ್ಲಂಗಳಿಗೆ ಮಳೆ ಹಾನಿಯಿಂದ ರಕ್ಷಿಸಲು ತಡೆಗೋಡೆ ನಿರ್ಮಿಸಲು ಪಾಲಿಕೆ…

Read More