ಬೆಂಗಳೂರು: ಮನೆಯ ಕಿಟಕಿಯಲ್ಲಿಟ್ಟಿದ್ದ ಕೀ ಮೂಲಕ ಬಾಗಿಲು ತೆಗೆದು ಹಣ—ಆಭರಣ ಕಳವು ಮಾಡಿಕೊಂಡು ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 8 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ, ಹಣ ವಶಪಡಿಸಿಕೊಳ್ಳಲಾಗಿದೆ.
ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿ ಬ್ಯಾಟರಾಯನದೊಡ್ಡಿ ಗ್ರಾಮದ ಕಾರ್ತಿಕ್ ಕುಮಾರ್ ಅಲಿಯಾಸ್ ಟ್ಯಾಟು ಕಾರ್ತಿಕ್(25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ವೃಷಭಾವತಿ ನಗರದ 12ನೇ ಮುಖ್ಯರಸ್ತೆ ನಿವಾಸಿ ಪ್ರೇಮನಾಥ ಎಂಬುವರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಹೋಗಲು ಆಟೋ ಬುಕ್ ಮಾಡಿದ್ದು, ಮನೆ ಬಳಿ ಬಂದ ಆಟೋದಲ್ಲಿ ಡ್ರಾಪ್ ಪಡೆಯುವ ವೇಳೆ ಮನೆಗೆ ಬೀಗ ಹಾಕಿ ಕೀಯನ್ನು ಕಿಟಕಿ ಬಳಿ ಇಡುವುದನ್ನು ಆಟೋ ಚಾಲಕ ಗಮನಿಸಿದ್ದಾನೆ. ನಂತರ ಇವರನ್ನು ಸ್ಯಾಟ್ಲೈಟ್ ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದಾನೆ.
ಬಳಿಕ ವಾಪಸ್ ಇವರ ಮನೆ ಬಳಿ ಬಂದು ಕಿಟಕಿಯಲ್ಲಿದ್ದ ಕೀ ಬಳಸಿ ಮನೆ ಬೀಗ ತೆಗೆದು ಬೀರುವಿನಲ್ಲಿದ್ದ 138 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿಯ ಸಾಮಾಗ್ರಿ ಹಾಗೂ 1.7 ಲಕ್ಷ ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx