ಬೆಳಗಾವಿ : ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿರುವ ಅವೈಜ್ಞಾನಿಕ ರಸ್ತೆ ಹಂಪ್ಸ್ ಗಳನ್ನು ಎಲ್ಲರ ಸಹಕಾರದೊಂದಿಗೆ ತೆಗೆಸಲು ಕ್ರಮ ವಹಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.
ವಿಧಾನ ಮಂಡಳದಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಹಂಪ್ಸ್ ಗಳನ್ನು ಹಾಕಲಾಗಿದ್ದು ಅವುಗಳಿಗೆ ಬಣ್ಣ ಬಳಿಯುವುದಾಗಲಿ, ಸೂಚನಾ ಫಲಕವಾಗಲಿ ಇಲ್ಲದಿರುವದರಿಂದ ಅಪಘಾತಗಳಿಗೆ ಕಾರಣವಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಅನೇಕ ಗ್ರಾಮಗಳಲ್ಲಿ ಗ್ರಾಮಸ್ಥರ ಒತ್ತಾಯದಿಂದ ರಸ್ತೆಗಳನ್ನು ಹಂಪ್ಸ್ ಗಳನ್ನು ಹಾಕಲಾಗಿರುತ್ತದೆ.
ಎಷ್ಟೋ ಕಡೆ ಶಾಸಕರ ಒತ್ತಾಯದಿಂದಲೂ ರಸ್ತೆ ಹಂಪ್ಸ್ ಗಳನ್ನು ಹಾಕಲಾಗುತ್ತಿದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡಿ ಅವುಗಳನ್ನು ತೆಗೆಯಿಸಲು ಪ್ರಯತ್ನಿಸಲಾಗುವುದು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


