nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಸಂರಕ್ಷಿಸಿ: ಬಿ.ವಿ.ಅಶ್ವಿಜ
    ತುಮಕೂರು November 22, 2024

    ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಸಂರಕ್ಷಿಸಿ: ಬಿ.ವಿ.ಅಶ್ವಿಜ

    By adminNovember 22, 2024No Comments2 Mins Read
    vanamahithsava

    ತುಮಕೂರು: ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದರು.

    ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಹಾಗೂ ತುಮಕೂರು ವಿಜ್ಞಾನ ಕೇಂದ್ರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ “ವನ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಮಾಲಿನ್ಯದಿಂದ ಜೀವ ಸಂಕುಲಗಳಿಗೆ ಹಾನಿ ಉಂಟಾಗುತ್ತಿದ್ದು, ಪ್ಲಾಸ್ಟಿಕ್ ಬದಲಿಗೆ ಜೈವಿಕ ವಸ್ತುಗಳನ್ನು ಬಳಸಬೇಕೆಂದು ಕರೆ ನೀಡಿದರು.


    Provided by
    Provided by

    ಅರಣ್ಯ ನಾಶದಿಂದ ಪರಿಸರ ಅಸಮತೋಲನ ಉಂಟಾಗಿ ಚಂಡಮಾರುತ, ಭೂಕಂಪ, ಅತೀವೃಷ್ಠಿ, ಅನಾವೃಷ್ಠಿಗೆ ಕಾರಣವಾಗಿ ಜೀವಸಂಕುಲಗಳು ಅಳಿವಿನಂಚಿಗೆ ತಲುಪುತ್ತಿವೆ. ಮನುಷ್ಯನು ತನ್ನ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡುತ್ತಿದ್ದಾನೆ. ಉತ್ತಮ ಪರಿಸರ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಶುದ್ಧ ನೀರು, ಗಾಳಿ, ಆಹಾರ ದೊರೆಯುವಂತೆ ಮಾಡಬೇಕೆಂದು ತಿಳಿಸಿದರು.

    ಸಾರ್ವಜನಿಕರು ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿಕಸ–ಒಣಕಸವನ್ನು ಬೇರ್ಪಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ದಿನನಿತ್ಯ ಚಟುವಟಿಕೆಗಳಲ್ಲಿ ಪ್ಲಾಸ್ಟಿಕ್ ಬಳಸದೇ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ರೂಪಿಸಲು ಮುಂದಾಗಬೇಕು ಎಂದರು.

    ಸಾಮಾಜಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ದೇವರಾಜ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಮರ ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದರಲ್ಲದೆ, ಕನ್ನಡ ನಾಡು–ನುಡಿ ಉಳಿಸಿ ಬೆಳೆಸಬೇಕು. ಇಂಗ್ಲಿಷ್ ವ್ಯಾಮೋಹದಿಂದ ಹೊರಬಂದು ಶುದ್ಧ ಕನ್ನಡವನ್ನೇ ಬಳಸಬೇಕು ಎಂದು ತಿಳಿಸಿದರು.

    ಬೆಂಗಳೂರಿನ ಕರ್ನಾಟಕ ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದ ದಿಕ್ಸೂಚಿ ಭಾಷಣಕಾರ ಡಾ.ಕೆ.ಆರ್. ಶ್ರೀಹರ್ಷ ಮಾತನಾಡಿ, ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ ವಿಷಯದ ಬಗ್ಗೆ ತಿಳಿಸಿದರು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಪರಿಸರ ಅಧಿಕಾರಿ ಬಿ.ಸಿ.ಶಿವಮೂರ್ತಿ ಮಾತನಾಡುತ್ತಾ, ಅತಿಯಾದ ಕೈಗಾರಿಕೆ ಮತ್ತು ಗಣಿಗಾರಿಕೆಯಿಂದ ಪರಿಸರ ಮಲಿನವಾಗುತ್ತಿದೆ. ಜಿಲ್ಲೆಯ ಕೈಗಾರೀಕರಣದಿಂದ ಪರಿಸರದ ಮೇಲೆ ದುಷ್ಪರಿಣಾಮಗಳುಂಟಾಗುತ್ತಿದೆ. ಪರಿಸರವನ್ನು ಸಂರಕ್ಷಿಸಲು ಅರಣ್ಯ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

    ವಿಶ್ವಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಸಿ ನೆಡುವ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

    ದಾವಣಗೆರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ವಲಯ ಕಚೇರಿ ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಪ್ರೇರಕ ಭಾಷಣಕಾರ ಡಾ.ಪೃಥ್ವಿರಾಜ್ ಎಸ್. ಲಕ್ಕಿ, ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ ಹಾಗೂ ಉಪಾಧ್ಯಕ್ಷ ಸಿ.ಯತಿರಾಜ್, ಟಿ.ಡಿ.ಸಿ.ಸಿ.ಐ. ಅಧ್ಯಕ್ಷ ಟಿ.ಜೆ. ಗಿರೀಶ್, ವಿ.ಐ.ಎ. ಅಧ್ಯಕ್ಷ ಡಾ.ಸಿ.ವಿ. ಹರೀಶ್, ಬೆಳಗಾವಿ ಡಿ.ಸಿ.ಪಿ.(ಸಿ.ಎ.ಆರ್.) ಸಿದ್ದನಗೌಡ ವೈ. ಪಾಟೀಲ್, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.