ತಿಪಟೂರು: ತಾಲ್ಲೂಕು ನೊಣವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಒಬ್ಬ ಕಿಡಿಗೇಡಿ ಆರೋಪ ಮಾಡಿದ್ದು, ಆತ ದಾಖಲೆ ಸಮೇತ ಅವ್ಯವಹಾರ ಸಾಬೀತುಪಡಿಸಿದರೆ ನಾನು ಈ ಕೂಡಲೇ ರಾಜೀನಾಮೆ ನೀಡುತ್ತೇನೆಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಸವಾಲೆಸೆದಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಮಾತನಾಡಿದ ಅವರು, 15ನೇ ಹಣಕಾಸು ಯೋಜನೆ ಅಡಿ ಎನ್ ಆರ್ ಇ ಜಿ ಇಂದ 10 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ಮತ್ತು ಉಳಿದ ಹಣದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲು ಜಿಲ್ಲಾ ಪಂಚಾಯಿತಿಗೆ ಅನುಮೋದನೆ ನೀಡಲಾಗಿದ್ದು, ಆದರೆ ಇನ್ನು ಪ್ರಾರಂಭವೇ ಆಗಿರದ ಶಾಲಾ ಕಾಂಪೌಂಡ್ ಕಾಮಗಾರಿ ಕಳಪೆ ಎಂದು ನೊಣವಿನಕೆರೆ ಗ್ರಾಮದ ಕಿಡಿಗೋಡಿ ಒಬ್ಬ ಆರೋಪ ಮಾಡಿರೋದು ಸತ್ಯಕ್ಕೆ ದೂರವಾದುದು ಎಂದು ಅವರು ಸ್ಪಷ್ಟಪಡಿಸಿದರು.
ಗ್ರಾಮ ಪಂಚಾಯತಿಗೆ ಸೇರಿದ ಗ್ರಾಮಗಳಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಸರಬರಾಜು ಮಾಡಲಾಗುತ್ತಿದ್ದರೂ, ಇದು ಅಕ್ರಮ ಎಂದು ಆರೋಪ ಮಾಡಲಾಗಿದೆ ಎಂದು ಅವರು ಹೇಳಿದರು.
ಈ ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ವಸಂತಮ್ಮ, ಗೀತಾ, ಪುಷ್ಪಾವತಿ ಸದಸ್ಯರಾದ ರವಿಕುಮಾರ್ ಭಾಗವಹಿಸಿದ್ದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy