ಸೈಬರ್ ವಂಚನೆ ಪ್ರಕರಣಗಳ ವಿರುದ್ಧ ಅರಿವು ಮೂಡಿಸುವುದರಿಂದ ಸೈಬರ್ ಅಪರಾಧ ಪ್ರಕರಣ ತಡೆಗಟ್ಟಲು ಸಾಧ್ಯವಿದೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಸಲಹೆ ನೀಡಿದರು.
ಕೆಂಗೇರಿಯ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಎರಡು ದಿನ ನಡೆದ ಸೈಬರ್ ಭದ್ರತೆ ಕುರಿತ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಸಿಟಿ ಸಿಇಒ ಹರಿ ಬಾಲಚಂದ್ರನ್, ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಡಿ. ಅಶ್ವಿನ್ ಗೌಡ ಇದ್ದರು.


