ತುಮಕೂರು: ಕೇಂದ್ರ ಪುರಸ್ಕೃತ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿಚಾರಗೋಷ್ಠಿ/ಕಾರ್ಯಾಗಾರ, ದೌರ್ಜನ್ಯ ಪ್ರತಿಬಂಧ ಕಾಯ್ದೆ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರ ಜಮೀನು ಪರಭಾರೆ ನಿಷೇಧ ಅಧಿನಿಯಮ(PTCL Act)ಗಳ ಬಗ್ಗೆ ಸಾರ್ವಜನಿಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರಿಗೆ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲು ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಸಂಘ ಸಂಸ್ಥೆಗಳು ಜಿಲ್ಲಾ ವ್ಯಾಪ್ತಿಯಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ನಡೆಯುವ ಗ್ರಾಮ/ಪಂಚಾಯಿತಿ ಕೇಂದ್ರ ಸ್ಥಾನ/ಹೋಬಳಿ ಕೇಂದ್ರ ಸ್ಥಾನ/ತಾಲ್ಲೂಕು ಕೇಂದ್ರ ಸ್ಥಾನ/ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಬೀದಿ ನಾಟಕದ ಮೂಲಕ ಪರಿಣಾಮಕಾರಿಯಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಅರ್ಜಿ ಸಲ್ಲಿಸುವ ಸಂಘ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಅರ್ಜಿಯನ್ನು ಸೆಪ್ಟೆಂಬರ್ 10ರೊಳಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಜಿಲ್ಲೆ, ಇವರಿಗೆ ಸಲ್ಲಿಸಬಹುದಾಗಿದೆ.
ಆಸಕ್ತ ಸಂಘ ಸಂಸ್ಥೆಗಳು ಅರ್ಜಿಯೊಂದಿಗೆ ಸಂಘ/ಸಂಸ್ಥೆಯ ನೋಂದಣಿ ಪ್ರಮಾಣ ಪತ್ರ ಮತ್ತು ನವೀಕರಣ ಪ್ರಮಾಣ ಪತ್ರ; 3 ವರ್ಷಗಳ ಆಡಿಟ್ ವರದಿ; ಸಂಘ/ಸಂಸ್ಥೆಯು ಪ.ಜಾತಿ ಮತ್ತು ಪ.ವರ್ಗದ ಅಭಿವೃದ್ಧಿಗಾಗಿ 5 ವರ್ಷ ಸೇವೆ ಸಲ್ಲಿಸಿರುವ ಬಗ್ಗೆ ದೃಢೀಕೃತ ದಾಖಲೆ; ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ದಾಖಲೆಗಳು, ಛಾಯಾಚಿತ್ರ, ಪತ್ರಿಕಾ ವರದಿ; ಸಂಸ್ಥೆಯು ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989ರ ಅನುಷ್ಟಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ದಾಖಲೆಗಳು, ಪ್ರಕಟಣೆಗಳು, ಕರ ಪತ್ರ, ಭಿತ್ತಿ ಪತ್ರ ಮತ್ತಿತರ ದಾಖಲೆಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆಯು ನೋಂದಣಿಗೊಂಡಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು. ಸ್ವಯಂ ಸೇವಾ ಸಂಸ್ಥೆಯು ಪ.ಜಾತಿ ಮತ್ತು ಪ.ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು. ಸಂಸ್ಥೆ/ಸಂಘವು ಪ್ರತಿ ವರ್ಷ ಆಡಿಟ್ ಮಾಡಿಸಿರಬೇಕು. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸುವ ಅನುಭವವನ್ನು ಹೊಂದಿರತಕ್ಕದ್ದು. ಪ.ಜಾತಿ ಮತ್ತು ಪ.ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಜಿಲ್ಲೆಯ ಸಂಸ್ಥೆ/ಸಂಘಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2278132ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q