ಐಪಿಎಸ್ ಅಧಿಕಾರಿ ಡಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಸದ್ಯಕ್ಕಂತೂ ಮುಗಿಯೋ ಲಕ್ಷಣ ಕಾಣುತ್ತಿಲ್ಲ. ಸರ್ಕಾರವು ಇಬ್ಬರು ಅಧಿಕಾರಿಗಳಿಗೂ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಬಾರದೆಂದು ತಾಕೀತು ಮಾಡಿತ್ತು. ಇದರ ನಡುವೆಯೇ ಡಿ.ರೂಪಾ ಅವರು ರೋಹಿಣಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡುತ್ತಿರುವ ಆಡಿಯೋವೊಂದು ವೈರಲ್ ಆಗಿದೆ.
ಆಡಿಯೋದಲ್ಲಿ ಡಿ ರೂಪಾ ಅವರು ರೋಹಿಣಿ ಸಿಂಧೂರಿಯವರನ್ನು ಹಿಗ್ಗಾಮುಗ್ಗ ಬೈಯುತ್ತಿರುವ ಮತ್ತು ತಮ್ಮ ಸಂಸಾರದ ವಿಷಯಗಳನ್ನು ಎತ್ತಿ ಮಾತನಾಡಿದ್ದಾರೆ.
ಆಯಮ್ಮನ ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಡಿ.ರೂಪಾ ಗಂಗರಾಜು ಜತೆ ಸಂಭಾಷಣೆ ವೇಳೆ ಆರೋಪ ಮಾಡಿದ್ದಾರೆ. ಸದ್ಯ ಈ ಆಡಿಯೋ ಈಗ ವೈರಲ್ ಆಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


