ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇನ್ನೂ ಆರು ತಿಂಗಳು ಕಳೆದಿಲ್ಲ. ಆದ್ರೆ ಅದಾಗಲೇ ದೇವಸ್ಥಾನ ಮೇಲ್ಛಾವಣಿ ಸೋರುತ್ತಿದೆಯಂತೆ. ಹೀಗಂತ ದೇಗುಲದ ಅರ್ಚಕ ಸತ್ಯೇಂದ್ರ ದಾಸ್ ಅವರೇ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಸದ್ಯ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ರಾಮಮಂದಿರದ ಛಾವಣಿ ಸೋರುತ್ತಿದೆ ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಹೇಳಿಕೆ ನೀಡಿದ್ದಾರೆ.
ಗರ್ಭಗುಡಿಯ ಛಾವಣಿ ಮೂಲಕ ನೀರು ಒಳಗೆ ಬಂದಿದೆ.
ಸುಸಜ್ಜಿತವಾಗಿಯೇ ದೇಗುಲ ಕಟ್ಟಿದ್ದರೂ ನೀರು ಸೋರುತ್ತಿದೆ ಎಂದು ಅರ್ಚಕರು ಹೇಳಿದ್ದಾರೆ. ಇನ್ನು ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ದೇಗುಲ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ, ಇನ್ನೂ ಮಂದಿರದ ಕಾಮಗಾರಿ ಮುಗಿದಿಲ್ಲ. ಕಾಮಗಾರಿ ನಡೆಯುತ್ತಿರುವಾಗ ಸೋರುವುದು ಸಹಜ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ರಾಮಲಲ್ಲಾ ವಿಗ್ರಹದ ಮುಂಭಾಗದಲ್ಲಿ ಅರ್ಚಕರು ಕುಳಿತುಕೊಳ್ಳುವ ಸ್ಥಳದಲ್ಲಿ ಮಳೆ ನೀರು ಸೋರುತ್ತಿದೆ ಎಂದು ತಿಳಿದುಬಂದಿದೆ.. ಎಂಜಿನಿಯರ್‌ಗಳು ಇದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA