ಶಿವಮೊಗ್ಗ: ತುಂಗಾ ನದಿಯಲ್ಲಿ ಸ್ನಾನ ಮಾಡಿ ವಾಪಸ್ ಬರುವಷ್ಟರಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರ ಬೈಕ್ ಕಳವು ಆಗಿರುವ ಘಟನೆ ವಾದಿ ಎ ಹುದಾ ತುಂಗಾ ನದಿ ಸೇತುವೆ ಸಮೀಪ ನಡೆದಿದೆ.
ಶಿವಮೊಗ್ಗದ ಶುಭಮಂಗಳ ಸಮುದಾಯ ಭವನ ಸಮೀಪದ ನಿವಾಸಿ ಗೋಪಿ ಅವರ ಬೈಕ್ ಕಳವು ಮಾಡಲಾಗಿದೆ. ಬೆಳಗಿನ ಜಾವ ತುಂಗಾ ನದಿಯಲ್ಲಿ ಸ್ನಾನ ಮಾಡಿ ವಾಪಸ್ ಬರುವ ವೇಳೆಗೆ ಬೈಕ್ ಕಳವು ಮಾಡಲಾಗಿದೆ.
ಶಬರಿಮಲೆ ಯಾತ್ರೆಗೆ ಹೋಗುವ ಸಲುವಾಗಿ ಮಾಲೆ ಹಾಕಿಕೊಂಡಿರುವ ಗೋಪಿ ಸೀಗೆ ಹಟ್ಟಿಯ ಅಂತರಘಟ್ಟಮ್ಮ ದೇವಸ್ಥಾನದಲ್ಲಿ ರಾತ್ರಿ ವೇಳೆ ತಂಗುತ್ತಿದ್ದರು. ಬೆಳಗ್ಗೆ ತುಂಗಾ ನದಿಗೆ ಸ್ನಾನಕ್ಕೆ ಹೋಗುತ್ತಿದ್ದರು. ಘಟನೆ ಸಂಬಂಧ ತುಂಗಾ ನಗರ ಠಾಣೆಗೆ ಗೋಪಿ ದೂರು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx