ಸರಗೂರು: ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳು ಬುಧವಾರದಂದು ಬೆಳಿಗ್ಗೆಯಿಂದ ವಿವಿಧ ರೀತಿಯ ಪೂಜೆ ಕಾರ್ಯಕ್ರಮ ನಡೆಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆಯನ್ನು ಮಾಡಲಾಯಿತು. ಬಳಿಕ ಮಧ್ಯಾಹ್ನ ಸಮಯದಲ್ಲಿ ಕೆರೆಯಿಂದ ಸತ್ತಿಗೆ ಮುಖಾಂತರ ಪೂರ್ಣ ಕುಂಭ ಕಳಸವನ್ನು ಹೊತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ನಡೆಸಲಾಯಿತು.
ಚಿಕ್ಕಬರಗಿ ಹೆಡಿಯಾಲ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಿಕೊಂಡು ಉದ್ದಕ್ಕೂ ನಗಾರಿ ತಮಟೆ ಕಲಾತಂಡಗಳೊಡನೆ ಸಾಗಿ ವರದರಾಜ ಸ್ವಾಮಿ ದೇವಾಲಯ ಬಳಿ ತಲುಪಿತ್ತು . ನಂತರ ವಿಶೇಷ ಪೂಜೆ ಮತ್ತು ಭಜನೆ ಹಾಗೂ ದೀಪಾರಾಧನೆ ನಡೆಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಯಜಮಾನರು ಮತ್ತು ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಮುಖಂಡರು ಯುವಕರು ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


