ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಲಕ್ಕವ್ವನಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವು ಸಹ ಅಯ್ಯಪ್ಪ ಸ್ವಾಮಿಯ ಭಕ್ತರಿಂದ ಮಂಡಳ ಪೂಜೆ ಪ್ರಯುಕ್ತವಾಗಿ ಅಯ್ಯಪ್ಪಸ್ವಾಮಿ ಭಕ್ತಾಧಿಗಳಿಂದ ವಿಶೇಷ ಪೂಜೆ ನಡೆಯಿತು.
ಮಂಡಳ ಪೂಜೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಡಿ.ಸುಧಾಕರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಭಕ್ತ ಮಂಡಳಿ ವತಿಯಿಂದ ದೇವಸ್ಥಾನದ ಗುರು ಸ್ವಾಮಿಗಳಾದ ಶ್ರೀ ಸದಾನಂದ ಸ್ವಾಮೀಜಿ ಯವರು ಮಾಜಿ ಶಾಸಕರು ಹಾಗೂ ಸಚಿವರಾಗಿದ್ದ ಡಿ.ಸುಧಾಕರ್ ರವರಿಗೆ ಶಾಲು ಹೊದಿಸಿ, ಸನ್ಮಾನಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ , ಜ್ಞಾನೇಶ್ ಕುಮಾರ್ , ಶಿವಕುಮಾರ್, ಮಧು, ಲಕ್ಷ್ಮಿಕಾಂತ್ , ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಅಧ್ಯಕ್ಷೆ ಶಂಶದ್ ಉನ್ನಿಸಾ, ಸಾದತ್ ಉಲ್ಲಾ ಹಾಗೂ ತರಕಾರಿ ಚಂದ್ರಶೇಖರ್ ಬಾಬು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಹಾಗೂ ಅಯ್ಯಪ್ಪಸ್ವಾಮಿಯ ಭಕ್ತರು ಉಪಸ್ಥಿತರಿದ್ದರು.
ವರದಿ: ಮುರುಳೀಧರನ್ ಆರ್., ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy