ತಿಪಟೂರು: ನಿರಂತರ ಗೊಂದಲಮಯ ನಿರ್ಧಾರಗಳ ಮೂಲಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ಕಾರಣವಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡಲೇ ರಾಜೀನಾಮೆ ನೀಡಬೇಕೆಂದು ತಿಪಟೂರಿನ ಕಾಂಗ್ರೆಸ್ ಮುಖಂಡ ಶಶಿಧರ್ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮಕ್ಕಳ ಶಿಕ್ಷಣದ ಹಕ್ಕುಗಳನ್ನು ಇಂದಿನ ಸರ್ಕಾರ ದ ಜನ ವಿರೋಧಿ ನೀತಿ ಕಿತ್ತುಕೊಳ್ಳುತ್ತಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಹದಗೆಡಿಸುವಲ್ಲಿ ಪ್ರಮುಖ ಪಾತ್ರಧಾರಿ ಬಿ.ಸಿ.ನಾಗೇಶ್ ತಿಪಟೂರು ಮರ್ಯಾದೆ ಕಳೆಯದೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಶಶಿಧರ್ ಆಗ್ರಹಿಸಿದರು.
ಇತ್ತೀಚೆಗಷ್ಟೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶುಲ್ಕ ವಸೂಲಿಗೆ ಸುತ್ತೋಲೆ ಹೊರಡಿಸಿದ್ದು, ಮಕ್ಕಳಿಗೆ ಕೊಡುತ್ತಿದ್ದ ಸೈಕಲ್ ಗಳನ್ನು ನಿಲ್ಲಿಸಿದ್ದು, ಬಿ.ಸಿ.ನಾಗೇಶ್ ಸಚಿವರಾದ ನಂತರ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಒಟ್ಟಾರೆ ಹೇಳುವುದಾದರೆ ತಿಪಟೂರಿನ ಮಾನ ಮರ್ಯಾದೆ ಕಳೆಯದೆ ಕೂಡಲೇ ರಾಜೀನಾಮೆ ಕೊಡಬೇಕೆಂದು ಅಗ್ರಹಿಸಿದರು.
ವರದಿ: ಆನಂದ್, ತಿಪಟೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz