ಕಳೆದ 5 ವರ್ಷದ ಹಿಂದೆ ಬಿಜೆಪಿ ಸೇರಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಾನಸಭಾ ಚುನಾವಣೆ ಹತ್ತಿರವಿರುವಾಗ ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ್ದಾರೆ. ಅಲ್ಲದೆ ವರಿಷ್ಠರಿಗೆ ತಿಳಿಸಿ ನಿವೃತ್ತಿ ಘೋಷಿಸುವ ಅವಶ್ಯಕತೆ ಇಲ್ಲ, ಅವರೇನೂ ಪಿಂಚಣಿ ಕೊಡಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಾಗಿದ್ದ ಕೃಷ್ಣ, ಬಿಜೆಪಿ ಸೇರಿದ್ದ ಬೆನ್ನಲ್ಲೇ ಅವರನ್ನು ರಾಷ್ಟ್ರಪತಿ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದರೆ ಅವರು ಬಿಜೆಪಿಯಲ್ಲಿ ಯಾವುದೇ ಹುದ್ದೆ ಅಲಂಕರಿಸಲಿಲ್ಲ.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೀಗ 90 ವರ್ಷ, ವಯಸ್ಸಿನ ಬಗ್ಗೆ ನಮಗೆ ಅರಿವು ಇರಬೇಕು. 90ರಲ್ಲಿ 50 ವರ್ಷದ ರೀತಿ ನಟನೆ ಮಾಡಲು ಆಗುವುದಿಲ್ಲ. ಅದಕ್ಕಾಗಿ ಕ್ರಮೇಣವಾಗಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಎಸ್ಎಂ ಕೃಷ್ಣ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


