ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ. ಬೈಕ್ಗೆ ಬಿಎಂಟಿಎಸ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್ ನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


