ಆಂಧ್ರಪ್ರದೇಶದ ಚಿತ್ತೂರು ಮೂಲದ ಬಿ ಟೆಕ್ ಪದವೀಧರ ಸೈಬರ್ ಹ್ಯಾಕರ್ ನನ್ನು ಬಂಧಿಸಿ, ಸುಮಾರು ಐದು ಕೋಟಿ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಆಂಧ್ರಪ್ರದೇಶ ಮೂಲದ ಲಕ್ಷ್ಮೀಪತಿ ಎಂಬಾತನನ್ನು ಬೆಂಗಳೂರು ಆಗ್ನೇಯ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನಿಂದ 4.16 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ, 11 ಲಕ್ಷ ನಗದು, 7 ಬೈಕ್ ಜಪ್ತಿ ಮಾಡಲಾಗಿದೆ.


