ತುಮಕೂರು: ಮಹಾನಗರ ಪಾಲಿಕೆಯಲ್ಲಿ ಬಹುಪಾಲು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದ ಆಯುಕ್ತರಾದ ಬಿ.ವಿ.ಅಶ್ವಿಜ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಿದ್ದ ಅಶ್ವಿಜರನ್ನು ವರ್ಷ ತುಂಬುವುದರಲ್ಲೇ ವರ್ಗಾವಣೆ ಮಾಡಲಾಗಿದೆ.
ಅಶ್ವಿಜ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ಡಾ.ಜಗದೀಶ್ ಕೆ.ನಾಯಕ್‌ರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಶ್ವಿಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಜು.25, 2023ರಂದು ಪಾಲಿಕೆ ಆಯುಕ್ತರನ್ನಾಗಿ 2019ನೇ ಬ್ಯಾಚ್ ಐಎಎಸ್ ಅಧಿಕಾರಿ ಬಿ.ವಿ.ಅಶ್ವಿಜರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು.
ಪುಟ್ ಪಾತ್ ಅಭಿಯಾನಕ್ಕೆ ಚಾಲನೆ ನೀಡಿದ್ದ ಅಶ್ವಿಜ ಅಕ್ರಮವಾಗಿ ಪುಟ್ ಪಾತ್ ಒತ್ತುವರಿದಾರರಿಗೆ ಸಿಂಹಸ್ವಪ್ನರಾಗಿದ್ದರು ಎಂದೇ ಹೇಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA