ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಕ್ಕೆ ಯಾರಿಗೂ ಅಸಮಾಧಾನವಿಲ್ಲ. ಭಿನ್ನಾಭಿಪ್ರಾಯ ಇದ್ದರೆ ಎಲ್ಲರೂ ಮಾತನಾಡಿ ಸರಿ ಮಾಡುತ್ತೇವೆ.
ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ನಾವು ಎಲ್ಲರೂ ಸೇರಿ ಸರಿ ಮಾಡುತ್ತೇವೆ. ಬಿ.ವೈ. ವಿಜಯೇಂದ್ರ ಎಲ್ಲರನ್ನೂ ಭೇಟಿಯಾಗುತ್ತಿದ್ದಾರೆ. ಪಕ್ಷದ ಮೇಲೆ ಜನರಿಗೆ ನೀರಿಕ್ಷೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.


