ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಡೆಯುತ್ತಿರೋ ಹೋರಾಟ ಹಿನ್ನಲೆಯಲ್ಲಿ ಅಲ್ಲದೆ ಹೋರಾಟಗಾರರ ವಿರುದ್ದ ಎಫ್ ಐ ಆರ್ ದಾಖಲಾದ ಬೆನ್ನಲ್ಲೆ ಬಿ.ವೈ.ವಿಜಯೇಂದ್ರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಗುಬ್ಬಿ ತಾಲೂಕಿನ ಸುಂಕಾಪುರ ಬಳಿ ನಡೆಯುತ್ತಿದ್ದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಸುಂಕಾಪುರ ಗ್ರಾಮಕ್ಕೆ ಭೇಟಿ ನೀಡಿದ ವಿಜಯೇಂದ್ರ ಸಂಪೂರ್ಣ ಮಾಹಿತಿ ಪಡೆದರು.
ಈ ವೇಳೆ ಸಿ.ಟಿ ರವಿ, ಛಲವಾದಿ ನಾರಾಯಣ ಸ್ವಾಮಿ, ಶಾಸಕರಾದ ಸುರೇಶ್ ಗೌಡ, ಜಿಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.
ಕಳೆದ 31 ರಂದು ಇದೇ ಸುಂಕಾಪುರದಲ್ಲಿ ಸಾವಿರಾರು ಜನ ಹೋರಾಟ ನಡೆಸಿದ್ರು. ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಹೋರಾಟ ನಡೆಸಿದ್ರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW