ಚಳ್ಳಕೆರೆ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಚಂದ್ರಪ್ಪ ಮಾತನಾಡಿ, ಮೂಢನಂಬಿಕೆಗಳನ್ನು ತೊಡೆದುಹಾಕಿ ಬಾಬಾಸಾಹೇಬರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ನಿಮ್ಮ ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರೆ ನೀಡಿದರು.
ದಲಿತರಿಗೆ, ಅಸ್ಪೃಶ್ಯರಿಗೆ , ಶೋಷಿತರಿಗೆ ದೌರ್ಜನ್ಯ , ಅತ್ಯಾಚಾರಗಳು ನಡೆದರೆ, ಅಂತಹ ಸಂದರ್ಭದಲ್ಲಿ ಸಮುದಾದ ಪರವಾಗಿ ನಿಂತು ಪ್ರತಿಯೊಬ್ಬರೂ ನ್ಯಾಯಕೊಡಿಸುವ ಕೆಲಸ ಮಾಡಬೇಕು ಎಂದು ನೂತನ ಪದಾಧಿಕಾರಿಗಳಿಗೆ ತಿಳಿಸಿದರು.
ಹಿರಿಯ ದಲಿತ ಮುಖಂಡರಾದ ವಿಜಯಕುಮಾರ್ ಅವರು ನೂತನ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿ, ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬಾರದಂತೆ, ತಾಯಿ ಹೃದಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಚಳ್ಳಕೆರೆ ತಾಲೂಕು ಅಧ್ಯಕ್ಷರು ಮಾತನಾಡಿ, ನಮ್ಮ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಆರ್ ಕೋದಂಡರಾಮ್ ಅವರು ಬಹಳ ಒಳ್ಳೆಯ ಹೋರಾಟಗಾರರು ಇಂತಹ ರಾಜ್ಯ ಅಧ್ಯಕ್ಷರು ಸಿಕ್ಕಿರುವುದು ನಮ್ಮ ಭಾಗ್ಯ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ರಾಮಚಂದ್ರ ಕೆ ., ಚಳ್ಳಕೆರೆ ತಾಲೂಕು ಅಧ್ಯಕ್ಷರಾದ ವಿನೋದ್ ಕುಮಾರ್, ಚನ್ನಗಿರಿ ತಾಲ್ಲೂಕು ಗೌರವಾಧ್ಯಕ್ಷರಾದ ಬಸವರಾಜ್, ಹಿರಿಯೂರು ತಾಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಜಿಲ್ಲಾ ಕಾರ್ಯದರ್ಶಿಗಳಾದ ಹನುಮಂತು, ಚಂದ್ರಕಾಂತ್, ನಾಗರಾಜ್ ಕುಮಾರ್, ಶಿವು, ಸುರೇಶ್, ಬಿ ಇ ಮಾರಣ್ಣ, ತಿಪ್ಪೇಸ್ವಾಮಿ, ಗುರುಸ್ವಾಮಿ, ತಿಪ್ಪೇಸ್ವಾಮಿ, ಚಂದ್ರು, ಹೆಗ್ಗೆರೆ, ಪ್ರಸನ್ನ, ಪ್ರವೀಣ ಮತ್ತು ಬುಡ್ನ ಹಟ್ಟಿ ಮತ್ತಿತರರು ಇದ್ದರು.
ವರದಿ: ಮುರುಳಿಧರನ್ ಆರ್., ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz