ಎಚ್.ಡಿ. ಕೋಟೆ: ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ 115ನೇ ಹುಟ್ಟುಹಬ್ಬ ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಬು ಜಗಜೀವನ ರಾಂ ವಿಚಾರ ವೇದಿಕೆಯ ಅಧ್ಯಕ್ಷ ಪಿ.ನಾಗರಾಜು ತಿಳಿಸಿದರು.
ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಟ್ಟಣದ ಕೃಷ್ಣಾಪುರ ಬಾಪೂಜಿ ವೃತ್ತದಿಂದ ಅಂಬೇಡ್ಕರ್ ಭವನದ ವರೆಗೆ ಮೆರವಣಿಗೆ ಮೂಲಕ ತಾಲ್ಲೂಕಿನ ವಿವಿಧ ಗ್ರಾಮ ಗಳಿಂದ ವಾಹನಗಳು ಭಾಗವಹಿಸಲಿವೆ. ಸತ್ತಿಗೆ, ತಮಟೆ, ನಗಾಕಿ, ನಂದಿಕಂಬ, ಮಂಗಳ ವಾದ್ಯ ಸಮೇತವಾಗಿ ಮೆರವಣಿಗೆ ನಡೆಯಲಿದೆ ಎಂದರು.
ಅಂಬೇಡ್ಕರ್ ಭವನದ ಮುಂಭಾಗದ ಆವರಣದಲ್ಲಿ ಬಾಬು ಜಗಜೀವನರಾಮ್ ಮತ್ತು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುವುದು ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಡಪ ಸಿಂಹಾಸನ ಕೋಡಿಹಳ್ಳಿ ಆದಿಜಾಂಭವ ಮಹಾಸಂಸ್ಥಾನಮಠದ ಸಡಕ್ಷರ ಮುನಿ ದೇಶಿಕೇಂದ್ರಸ್ವಾಮೀಜಿ, ಹರಳಯ್ಯ ಮಠದ ಗುರುರುದ್ರಪ್ಪ ಹರಳಯ್ಯ ಸ್ವಾಮೀಜಿ, ಮಾಜಿ ಕೇಂದ್ರ ಸಚಿವ ರಾದ ಕೆ.ಎಚ್. ಮುನಿಯಪ್ಪ, ಶಾಸಕ ಅನಿಲ್ ಚಿಕ್ಕಮಾದು, ಸಂಸದರಾದ ಶ್ರೀನಿವಾಸಪ್ರಸಾದ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ಮಾಜಿ ಸಂಸದ ಆರ್. ಧ್ರುವನಾರಾಯಣ, ವಿಧಾನಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5