ಹಿರಿಯೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಹಿರಿಯೂರಿನಲ್ಲಿ ಎಪ್ರಿಲ್ 5ರ ಗುರುವಾರದಂದು ಡಾ.ಬಾಬುಜಗಜೀವನ್ ರಾಮ್ ರವರ ಜಯಂತೋತ್ಸವ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಾರ್ಯಕ್ರಮವನ್ನು ನಮ್ಮ ಹಿರಿಯೂರು ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ. ಡಾ.ಬಾಬುಜಗಜೀವನ್ ರಾಮ್ ರವರ ಜಯಂತೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಡಿ.ಸುಧಾಕರ್ ಮಾತನಾಡಿದರು.
ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರ್ಯಕ್ರಮವನ್ನು ಕೊಟ್ಟರೂ ಅದನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಾರೆ ಎಂಬ ಅಪಾರ ನಂಬಿಕೆಯಿಂದ ನಮ್ಮ ತಾಲ್ಲೂಕಿನಲ್ಲಿ ಡಾ.ಬಾಬುಜಗಜೀವನ್ ರಾಮ್ ರವರ ಜಯಂತೋತ್ಸವ ನಡೆಸಲು ಡಿ.ಕೆ.ಶಿವಕುಮಾರ್ ರವರು ಆದೇಶ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಅಧ್ಯಕ್ಷರು ನಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸಬೇಕಿದೆ ಎಂದು ಡಿ.ಸುಧಾಕರ್ ಪಕ್ಷದ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್, ನಗರಸಭೆ ಅಧ್ಯಕ್ಷರಾದ ಶಂಷುನ್ನಿಸಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಜಯ್ ಕುಮಾರ್, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಮಾಜಿ ಜಿ.ಪಂ.ಸದಸ್ಯ ನಾಗೇಂದ್ರನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ , ಅಮೃತೇಶ್ವರ ಸ್ವಾಮಿ, ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರ ನಾಯ್ಕ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಚರಾದ ಡಾ.ಸುಜಾತ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್. ಗೌರಿ ಮುರುಳಿಧರನ್ ಹಿರಿಯೂರು, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ, ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರು ಹಾಗೂ ಪತ್ರಿಕಾ ಸಂಘದ ಅಧ್ಯಕ್ಷರು ಹಾಗೂ ಎಸ್.ಸಿ.ಘಟಕದ ಅಧ್ಯಕ್ಷರಾದ ಜಿ.ಎಲ್.ಮೂರ್ತಿ , ಗಿಡ್ಡೋಬನಹಳ್ಳಿ ಅಶೋಕ್, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹನುಮಂತ, ಧನುಶ್, ಗಿರೀಶ್, ಜ್ಞಾನೇಶ್, ಕಾರ್ಮಿಕ ವಿಭಾಗದ ಶಿವಕುಮಾರ್ ವಿ. ಗಾಂಧಿನಗರದ ಮಹಂತೇಶ್, ಕೋಳಿ ಪ್ರಭುಯಾದವ್, ಕೃಷ್ಣಪೂಜಾರ್ , ಐಮಂಗಲ ಹೋಬಳಿಯ ಐಮಂಗಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕಲ್ಲಹಟ್ಟಿ ಹರೀಶ್, ಬಾಳೆಕಾಯಿ ಮಂಡಿ ಗೀತಾ ಸುಬ್ರಮಣಿ, ಹಿರಿಯೂರು ನಗರದ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರುಗಳು, ಹಾಗೂ ಹಿರಿಯೂರು ತಾಲ್ಲೂಕಿನ 33 ಗ್ರಾಮ ಪಂಚಾಯತಿಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು,ಉಪಾಧ್ಯಕ್ಷರು , ಸದಸ್ಯರುಗಳು, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ ರಾಮಚಂದ್ರಪ್ಪ, ಶಿವರಂಜನಿ, ಮೊದಲಮರಿಯಾ, ಮಮತ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್ ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5