ಎಚ್.ಡಿ.ಕೋಟೆ: ರಾಜ್ಯದಲ್ಲಿಯೇ ಬಹುಬೇಗ ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿ ಪಡೆದಿರುವ ಕಬಿನಿ ಜಲಾಶಯಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು ನಾಳೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಸೇರಿದಂತೆ ಸ್ವಾಗತ ಕಮಾನು ಗೇಟುಗಳು ಸೇರಿದಂತೆ ಕಟ್ಟಡಗಳಿಗೆ ಸುಣ್ಣಬಳಿಯುವ ಕಾರ್ಯ ಭರದಿಂದ ಸಾಗಿದೆ.
84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದ ಉಗಮ ಸ್ಥಾನ ಹಾಗೂ ಕೇರಳದ ವಯನಾಡು ಹಾಗೂ ಜಲಾನಯನ ಪ್ರದೇಶದಲ್ಲಿ ಈ ವರ್ಷ ಅಬ್ಬರದ ಮಳೆಯಾಗಿ ಜಲಾಶಯ ಬಹುಬೇಗ ಭರ್ತಿಯಾಗಿ ಪ್ರವಾಹದ ಭೀತಿ ಎದುರಾಗಿತ್ತು.
ಈ ಹಿಂದೆ 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದ ಸಿದ್ದರಾಮಯ್ಯ ಜಲಾಶಯದ ಅಭಿವೃದ್ಧಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಎರಡನೇ ಬಾರಿ ಸಿಎಂ ಆದ ನಂತರ
ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕ್ಷೇತ್ರದ ಜನತೆಯಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಜಲಾಶಯದ ಮುಂಭಾಗ ಕೆಆರ್ ಎಸ್ ಮಾದರಿಯಲ್ಲಿ ಬೃಂದಾವನ ನಿರ್ಮಾಣ ಮಾಡುವುದು, ಈ ಭಾಗದ ರಸ್ತೆಗಳ ಅಭಿವೃದ್ಧಿ, ಪ್ರವಾಸೋದ್ಯಮ ಬಲ ಪಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಕೈಗೊಳ್ಳುವುದು ಸೇರಿದಂತೆ ಜಲಾಶಯದ ಹಿನ್ನೀರಿನ ಮುಳುಗಡೆ ಗ್ರಾಮಗಳಿಗೆ ಪುನರ್ವಸತಿ ಸೇರಿದಂತೆ ಜನತೆ ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಶಾಸಕ ಅನಿಲ್ ಚಿಕ್ಕಮಾದು ಕಬಿನಿ ಜಲಾಶಯಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪೂರ್ವ ಸಿದ್ಧತೆ ಬಗ್ಗೆ ವೀಕ್ಷಣೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA