ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಜನಸಾಮಾನ್ಯರು ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮತ್ತೊಂದೆಡೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಕಟ್ಟಡ ಸಾಮಾಗ್ರಿಗಳು ದುಬಾರಿಯಾಗಿದ್ದು, ಪ್ರಶ್ನೆ ಮಾಡುವ ಜನರ ಮೇಲೆ ದಬ್ಬಾಳಿಕೆ, ದೌರ್ಜನ್ಯವನ್ನು ಸರ್ಕಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್ ಆರೋಪಿಸಿದರು.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಲ್ಕೆರೆ, ಮಂಟಪ, ಹೊಸರೋಡ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಗಂಧದನಾಡು ಜನಪರವೇದಿಕೆ. ಆರ್.ಕೆ.ರಮೇಶ್ ಅಭಿಮಾನಿಗಳ ಬಳಗ, ವಿಜಯ ಶ್ರೀ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಪೌರಕಾರ್ಮಿಕರಿಗೆ ಸೀರೆ ವಿತರಣೆ ಮಾಡಿ ಮಾತನಾಡಿದ ಅವರು ಕೋವಿಡ್ ನಂತರ ಜನಸಾಮಾನ್ಯರ ಬದುಕು ದುಸ್ಥರವಾಗಿದ್ದು.
ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಬಡವರು ಜೀವನ ಸಾಗಿಸಲು ಪರದಾಡುತ್ತಿದ್ದು. ಅವರ ಕಷ್ಟಕ್ಕೆ ಸ್ಪಂದಿಸದೆ ಗಾಯದ ಮೇಲೆ ಬರೆ ಎಳೆಯುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಹಾಗಾಗಿ ಈ ಸರ್ಕಾರವನ್ನು ಕಿತ್ತೊಗೆಯಲು ಜನರು ಮುಂದಾಗಿದ್ದಾರೆ ಎಂದು ಹೇಳಿದರು.
ಜಿ.ಪಂ.ಮಾಜಿ ಸದಸ್ಯ ಪಾರಿಜಾತ ದೊರೆಸ್ವಾಮಿ, ಮುಖಂಡರಾದ ಅನಿಲ್‌ರೆಡ್ಡಿ, ರವಿ, ಗಂಧದನಾಡು ಜನಪರ ವೇದಿಕೆಯ ಸತೀಶ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶೇಖರ್‌ರೆಡ್ಡಿ, ವಾರ್ಡ್ ಅದ್ಯಕ್ಷ ಬಾಬುರೆಡ್ಡಿ, ರೂಪ, ಬ್ಲಾಕ್ ಮಹಿಳಾ ಕಾಂಗ್ರೆಸ್‌ಅಧ್ಯಕ್ಷೆ ರಾಜಮ್ಮ, ಗ್ರಾ.ಪಂ.ಮಾಜಿ ಅಧ್ಯಕ್ಷ ನವೀನ್‌ಕುಮಾರ್, ಸದಸ್ಯರಾದ ಸವಿತಸಲ್ಲಾಪುರಿ, ಶಾಂತಕೃಷ್ಣಪ್ಪ, ನಾಗವೇಣಿಕಾಂತರಾಜು, ಶ್ರೀನಿವಾಸ್ ಉಪಸ್ಥಿತರಿದ್ದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB