ಸರಗೂರು: ಕಾಂಗ್ರೆಸ್ ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಸರಗೂರು ಬ್ಲಾಕ್ ತಾಲೂಕು ಅಧ್ಯಕ್ಷರಾಗಿ ಬಡಗಲಪುರ ಗಂಗಾಧರ್ ಆಯ್ಕೆಯಾಗಿದ್ದಾರೆ .
ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಬಡಗಲಪುರ ಗಂಗಾಧರ್ ರವರನ್ನು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶನಿವಾರದಂದು ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಆದೇಶ ಮೇರೆಗೆ ತಮ್ಮನ್ನು ನೇಮಕ ಮಾಡಲಾಗಿದ್ದು, ಅದರಂತೆ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ರವಿ ಪಿ. ಮಾನವಿನಹಳ್ಳಿ ಹಾಗೂ ಪಕ್ಷದ ಮುಖಂಡರು ಸಮಿತಿಯ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ನೂತನ ಪ್ರಚಾರ ಸಮಿತಿ ಅಧ್ಯಕ್ಷ ಆಯ್ಕೆ ಹಿನ್ನೆಲೆಯಲ್ಲಿ ಬಡಗಲಪುರ ಗಂಗಾಧರ್ ರವರು ಮಾತನಾಡಿ, ನಾವು ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ತಾಲೂಕಿನ ಶಾಸಕರಾದ ಅನೀಲ್ ಚಿಕ್ಕಮಾದು ನಮ್ಮಂತ ಕಾರ್ಯಕರ್ತರಿಗೆ ಸ್ಥಾನ ಮಾನ ಸಿಗಲಿ ಎಂದು ನಮ್ಮನ್ನು ಗುರುತಿಸಿ ಪಕ್ಷದಲ್ಲಿ ಸೇವೆ ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದರು
ಪಕ್ಷದ ನಿಲುವು ಹಾಗೂ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಚಾರ ಸಮಿತಿ ಕೆಲಸ. ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿ ತಳಮಟ್ಟದಿಂದ ಪಕ್ಷ ಬಲಪಡಿಸಬೇಕು ಎಂದು ಹೇಳಿದರು.
ಬೂತ್ ಮಟ್ಟದಿಂದ ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು. ಸಾಮಾಜಿಕ ಜಾಲತಾಣ ಸೇರಿ ಗ್ರಾಮಾಂತರ ಮಟ್ಟದಲ್ಲಿ ರಾಜ್ಯ ಸರ್ಕಾರದ ಯೋಜನೆ, ಸಂವಿಧಾನ ಬಗ್ಗೆ ಅರಿವು ಮೂಡಿಸಬೇಕು. ಮುಂಬರುವ ಎಲ್ಲಾ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದ ಕಾರ್ಯಕರ್ತರಿಗೆ ಸ್ಥಾನ ಮಾನ ನೀಡಿದ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಶಿವರಾಜು, ಮುಖಂಡರಾದ ರವಿ, ರಾಜೇಶ್, ರಮೇಶ್,ಕೆಂಪಸಿದ್ದ, ಮಹದೇವಸ್ವಾಮಿ,ಪಪಾರಾಜ್ ಇತ್ತರರು ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


