ಔರಾದ್/ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮಕ್ಕೆ ಸೋಮವಾರ ಮುಂಜಾನೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವವಿಠ್ಠಲರಾವ್ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿ ಜಾರಿಯಲ್ಲಿರುವ ಜಲ್ ಜೀವನ್ ಮಿಷನ್ (ಜೆ.ಜೆ.ಎಂ) ಯೋಜನೆಯ ಕುಡಿಯುವ ನೀರಿನ ಕಾಮಗಾರಿಗಳು ಹಾಗೂ ಇತರ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿದ ಅವರು, ಕಾಮಗಾರಿಯ ಗುಣಮಟ್ಟ ಮತ್ತು ಪ್ರಗತಿಯ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸಮಸ್ಯೆಗಳಿಗೆ ತಕ್ಷಣದ ಸ್ಪಂದನೆ:
ಪರಿಶೀಲನೆ ವೇಳೆ ಗ್ರಾಮಸ್ಥರು ತಮ್ಮ ಊರಿನಲ್ಲಿ ಎದುರಿಸುತ್ತಿರುವ ಹಲವು ಮೂಲಸೌಕರ್ಯ ಸಮಸ್ಯೆಗಳನ್ನು ಸಿಇಒ ಅವರ ಗಮನಕ್ಕೆ ತಂದರು. ಗ್ರಾಮಸ್ಥರ ಕುಂದುಕೊರತೆಗಳನ್ನು ತಾಳ್ಮೆಯಿಂದ ಆಲಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಔರಾದ್ ತಾಲೂಕು ಪಂಚಾಯತ್ ಇಒ ಕಿರಣ್ ಪಾಟೀಲ್, ತಾ.ಪಂ. ಸಹಾಯಕ ನಿರ್ದೇಶಕ (ಎ.ಡಿ) ಶಿವಕುಮಾರ ಘಾಟೆ, ಟಿಸಿ ಆನಂದ್, ಕಿರಿಯ ಎಂಜಿನಿಯರ್ (ಜೆ.ಇ) ಶರಣಪ್ಪ ಸೇರಿದಂತೆ ಗ್ರಾಮದ ಪ್ರಮುಖ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
