nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    ರಾಜ್ಯ ಸುದ್ದಿ February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    By adminFebruary 20, 2026No Comments1 Min Read
    bagalakote

    ಬಾಗಲಕೋಟೆ: ನಗರದಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮುಖ್ಯ ಆರೋಪಿ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಿದ್ಧಾರ್ಥ್ ಗೋಯೆಲ್, “ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಘಟನೆಯ ಮುಖ್ಯ ಆರೋಪಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಏಳು ಮಂದಿ ಸೇರಿದ್ದಾರೆ,” ಎಂದು ತಿಳಿಸಿದರು.

    ಗುರುವಾರ ಸಾಯಂಕಾಲ ಶಿವಾಜಿ ಜಯಂತಿ ನಿಮಿತ್ತ ಹಳೆಯ ನಗರದ ಕಿಲ್ಲಾ ಓಣಿಯಲ್ಲಿ ಮೆರವಣಿಗೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೆರವಣಿಗೆಯು ಮಸೀದಿಯ ಮುಂಭಾಗ ಸಾಗುತ್ತಿದ್ದ ವೇಳೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ಬಿದ್ದಿದ್ದು, ಎಸ್‌ಪಿ ಸಿದ್ಧಾರ್ಥ್ ಗೋಯೆಲ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

    ಘಟನೆಯ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಬಾಗಲಕೋಟೆಯ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ (ಹಳೆಯ ಸೆಕ್ಷನ್ 144) ಫೆಬ್ರವರಿ 24ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಮಾರಕಾಸ್ತ್ರಗಳನ್ನು ಹೊರುವುದು ಮತ್ತು ಪೂರ್ವಾನುಮತಿ ಇಲ್ಲದೆ ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

    ತರಕಾರಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ ಹಾಗೂ ಇತರೆ ಹಿಂಸಾಚಾರದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವಿಡಿಯೋ ತುಣುಕುಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಘಟನೆಯಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.