ಗುಬ್ಬಿ: ದೇಶದಲ್ಲಿ ಶೇ. 3ರಷ್ಟಿರುವ ಜನರು ಅಧಿಕಾರ ಹಿಡಿದು ಶೇ. 87ರಷ್ಟಿರುವ ಬಹುಸಂಖ್ಯಾತರ ಮೇಲೆ ಅಧಿಕಾರ ಚಲಾಯಿಸುತ್ತಿರುವುದು ವಿಪರ್ಯಾಸ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕಿ ಅಕ್ಷತಾ ವಿಷಾದಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಯಲ್ಲಿ ಫಲಾಪೇಕ್ಷೆ ಇಲ್ಲದೆ ಪಾಲ್ಗೊಂಡಾಗ ಮಾತ್ರ ಹೋರಾಟಗಳು ಯಶಸ್ವಿಯಾಗಲು ಸಾಧ್ಯ. ತನ್ನ ಜ್ಞಾನದಿಂದಲೇ ಉನ್ನತ ಸ್ಥಾನ ಪಡೆದ ಅಂಬೇಡ್ಕರ್ ಅವರು ಮನುವಾದಿ ವ್ಯವಸ್ಥೆ ವಿರುದ್ಧ ಶೋಷಿತರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ಹೋರಾಟದ ಪ್ರತಿಫಲ ಅನುಭವಿಸುತ್ತಿರುವ ಪರಿಶಿಷ್ಟರು ಅವರ ಚಿಂತನೆಗಳನ್ನು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿದರು.
ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಉತ್ತಮವಾದ ಸಂವಿಧಾನ ನೀಡಿದ್ದಾರೆ. ಇಂಥ ಮಹಾನ್ ವ್ಯಕ್ತಿಗಳನ್ನು ಕೆಲವೇ ಸಮುದಾಯಕ್ಕೆ ಸೀಮಿತಗೊಳಿಸುವುದು ತರವಲ್ಲ. ಅವರ ಆದರ್ಶ, ಚಿಂತನೆಗಳು ನಮಗೆ ಮಾರ್ಗದರ್ಶಕವಾಗಿವೆ ಎಂದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದರಾಜು, ಮುಖಂಡ ಕೊಟ್ಟ ಶಂಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರಾದ ಮಹಮ್ಮದ್ ಸಾಧಿಕ್, ಶೌಕತ್ ಅಲಿ, ಮಮತಾ, ಮುಖಂಡರಾದ ನರಸಿಂಹಮೂರ್ತಿ, ಜಗನ್ನಾಥ್, ಮಂಜುನಾಥ್, ಸಲೀಂ ಪಾಷಾ, ಗುರುರೇಣುಕಾರಾಧ್ಯ, ಪ್ರಸನ್ನಕುಮಾರ್, ರೈತ ಸಂಘದ ವೆಂಕಟೇಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಮ್ಮ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5