ತುರುವೇಕರೆ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನ ಸವಾರರಿಗೂ ತೀವ್ರ ತರಹದ ಗಾಯಗಳಾದ ಘಟನೆ ಮಾಯಸಂದ್ರ ಹೋಬಳಿಯ ಟಿ.ಬಿ.ಕ್ರಾಸ್ ಬಳಿಯ ಜೇವರ್ಗಿ,ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಎರಡೂ ಬೈಕ್ ಗಳು ಕೂಡ ಜಖಂಗೊಂಡಿದ್ದು, ಬೈಕ್ ಸವಾರರಿಗೂ ತೀವ್ರ ಗಾಯಗಳಾಗಿವೆ. ಗಾಯಾಳು ಬೈಕ್ ಸವಾರರನ್ನು ಸಮೀಪದ ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಈ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಪಘಾತ ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700