ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪೌಲ್ ಅವರ ತನಿಖೆ ನಡೆಸುತ್ತಿದ್ದು, ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ನೀಡಿದೆ.
545 ಪಿಎಸ್ ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ನಡೆದಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.


