nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್ ಮೇಲೆ ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ: ಎಂ.ಪಿ. ನಟೇಶ್ ಕುಮಾರ್
    ತುರುವೇಕೆರೆ March 12, 2022

    ಬಜೆಟ್ ಮೇಲೆ ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ: ಎಂ.ಪಿ. ನಟೇಶ್ ಕುಮಾರ್

    By adminMarch 12, 2022No Comments2 Mins Read
    thuruvecare

    Provided by
    Provided by

    ತುರುವೇಕೆರೆ: ಬಜೆಟ್ ಮೇಲಿನ ವಿಕಲಚೇತನ ನಿರೀಕ್ಷೆ ಹುಸಿಯಾಗಿದೆ. ವಿಕಲಚೇತನರ ಜನಸಂಖ್ಯೆ ಅನುಗುಣವಾಗಿ ವಿಕಲಚೇತನರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕೆಂದು ಶ್ರೀವಿವೇಕಾನಂದ ಅಂಗವಿಕಲರ ಸಂಘದ ಕಾರ್ಯದರ್ಶಿ ಎಂ.ಪಿ. ನಟೇಶ್ ಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾದ ಬಸವರಾಜ ಎಸ್.ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಕಲಚೇತನರಿಗೆ ಅನೇಕ ನಿರೀಕ್ಷೆಗಳಿದ್ದವು.

    ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಕಲಚೇತನರ ಬಗ್ಗೆ ಒಲವು ತೋರಿ, ಅನೇಕ ಭರವಸೆಗಳೊಂದಿಗೆ ನಿರೀಕ್ಷೆಯಲ್ಲಿದ್ದವರಿಗೆ ಬಹಳ ನೋವಾಗಿದೆ. ಶೇ. 75%ಹೆಚ್ಚು ಮನೋವೈಕಲ್ಯ ಹೊಂದಿದ್ದವರಿಗೆ 1,400 ರೂ. ಗಳಿಂದ, 2,000 ರೂ.ಗಳಿಗೆ ಮಾಶಾಸನ ಹೆಚ್ಚಿಸುವ ಭರವಸೆ ಮತ್ತು ಬಸ್ ಪಾಸ್ ಪ್ರಸ್ತುತ ದರದಲ್ಲಿಯೇ ಹೆಚ್ಚಿನ ದೂರದ ಪ್ರಯಾಣ ನೀಡುವುದರ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಗಳು ಹುಸಿಯಾಗಿವೆ.

    ಸದನದಲ್ಲಿ ರಾಜ್ಯದ ಎಲ್ಲಾ ಶಾಸಕರು ತಮ್ಮ ವೇತನವನ್ನು ಹೆಚ್ಚಿಸಿಕೊಂಡರು. ಆದರೆ ಅಂಗವಿಕಲರ ಸಮಸ್ಯೆಯ ಬಗ್ಗೆ ಯಾರು ಪರಿಗಣಿಸಲಿಲ್ಲ. ಶೇ.75% ಮತ್ತು 25%ನ ತಾರತಮ್ಯವನ್ನು ಹೋಗಲಾಡಿಸಬೇಕು. ಗ್ರಾಮೀಣ ಪ್ರದೇಶದ ಪುನರ್ವಸತಿ ಕೇಂದ್ರಗಳ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಬೇಕು. ಸಮಾಜದಲ್ಲಿ ತಂದೆ-ತಾಯಿಗೆ ಬೇಡವಾದ ಕಟ್ಟಕಡೆಯ ವ್ಯಕ್ತಿಗಳೆಂದರೆ ವಿಕಲಚೇತನರಾಗಿದ್ದೇವೆ. ವಿಕಲಚೇತನರ ಆರ್ಥಿಕ ಸಬಲೀಕರಣ ಸೇರಿದಂತೆ ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಪ್ರಯತ್ನ ಮಾಡದೇ ಇರುವುದು ಖಂಡನೀಯವಾಗಿದೆ. ಸ್ಥಳೀಯ ಶಾಸಕರು ಸಹ ವಿಕಲಚೇತನರ ಅನುದಾನದಲ್ಲಿ ದೊರೆಯುವ ಯಾವುದೇ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಈ ಸಂಬಂಧ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಜೊತೆಗೂಡಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಸಂಘದ ಸಹಕಾರ್ಯದರ್ಶಿ ಎಸ್. ಗುರುಲಿಂಗಮೂರ್ತಿ ಮತ್ತು ಖಜಾಂಚಿ ವಿ.ಎಸ್. ಲಕ್ಷ್ಮಿಕಾಂತ್ ಮಾತನಾಡಿ, ತೈಲ ಬೆಲೆ ಏರಿಕೆ ಮತ್ತು ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ದುಡಿಯುವ ಮಧ್ಯಮ ಮತ್ತು ಕಾರ್ಮಿಕ ವರ್ಗ ಜೀವನ ನಡೆಸಲು ಹೈರಾಣಾಗಿದೆ. ಇಂತಹ ಸಂದರ್ಭದಲ್ಲಿ ಮಾಶಾಸನದ ಮೇಲೆ ಅವಲಂಬಿತರಾಗಿರುವ ವಿಕಲಚೇತನರ ಮಾಶಾಸನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಿಕಲಚೇತನರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಾದ ಬಸವರಾಜು ಎಸ್. ಬೊಮ್ಮಾಯಿ ಅವರು ಮುಂದಾಗಬೇಕು. ತಾಲೂಕಿನಲ್ಲಿ ಕೋವಿಡ್ ನಂತಹ ಪರಿಸ್ಥಿತಿಯಲ್ಲಿಯೂ ಸಹ ನಮಗೆ ಸ್ಥಳೀಯ ಶಾಸಕರಾಗಲಿ, ಯಾವುದೇ ಜನಪ್ರತಿನಿಧಿಗಳಾಗಲಿ ನೆರವಾಗಿಲ್ಲ ಎಂದು ದೂರಿದರು.

    ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಮಹಾಲಿಂಗಪ್ಪ, ಅಧ್ಯಕ್ಷರಾದ ಟಿ.ಎಲ್.ನಾಗರಾಜು ಉಪಾಧ್ಯಕ್ಷರಾದ ರವಿಕುಮಾರ್., ನಿರ್ದೇಶಕರುಗಳಾದ ಕೃಷ್ಣಮೂರ್ತಿ, ಲತಾ ಕುಮಾರ್, ಶಿವಬಸವಯ್ಯ, ಮಂಗಳ ಗೌರಮ್ಮ, ಸಂತೋಷ್ ಕುಮಾರ್, ಶಾಂತಕುಮಾರ್, ರಮೇಶ್, ಮಹೇಶ್, ಮುಗಳೂರು ಪರಮೇಶ್ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ವಿ.ಆರ್. ಡಬ್ಲ್ಯೂ./ ಯೂ.ಆರ್. ಡಬ್ಲ್ಯೂ./ ಎಂ.ಆರ್.ಡಬ್ಲ್ಯೂ. ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.