nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್

    November 10, 2025

    ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ

    November 10, 2025

    ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ

    November 10, 2025
    Facebook Twitter Instagram
    ಟ್ರೆಂಡಿಂಗ್
    • ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
    • ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
    • ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಗಂಗಾಧರನಾಥ ಸ್ವಾಮೀಜಿಯವರ 9ನೇ ಪುಣ್ಯಾರಾಧನಾ ಸಮಾರಂಭ
    ತಿಪಟೂರು January 13, 2022

    ಬಾಲಗಂಗಾಧರನಾಥ ಸ್ವಾಮೀಜಿಯವರ 9ನೇ ಪುಣ್ಯಾರಾಧನಾ ಸಮಾರಂಭ

    By adminJanuary 13, 2022No Comments2 Mins Read
    swamiji

    ತಿಪಟೂರು : ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ ಗುರುವಾರ ಆದಿಚುಂಚನಗಿರಿಯ  ಬಾಲಗಂಗಾಧರನಾಥ ಸ್ವಾಮೀಜಿಯವರು 9ನೇ ಪುಣ್ಯಾರಾಧನಾ ಸಮಾರಂಭ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಳಕಳಿ ಕಾರಣದಿಂದಲೇ ಜಗತ್ತಿನಾದ್ಯಂತ ಚಿರಸ್ಮರಣಿಯಾರಾದ್ದು ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು ಜಾರಿಗೆ ತಂದು ಯಶಸ್ವಿಯಾಗಿ ಇತರರಿಗೆ ಪ್ರೇರಣೆಯಾದರು. ಆದ್ದರಿಂದ ಪ್ರತಿಯೊಬ್ಬರು ಸ್ವಾಮೀಜಿಯವರ ಚಿಂತನೆ, ಆದರ್ಶಗಳನ್ನು ಅರಿತು ನಡೆಯಬೇಕಿದೆ ಎಂದರು.


    Provided by
    Provided by

    ಶ್ರೀರಂಗ ಆಸ್ಪತ್ರೆಯ ವೈದ್ಯ ಡಾ.ವಿವೇಚನ್ ಮಾತನಾಡಿ, ಶಿಕ್ಷಣ, ಧಾರ್ಮಿಕ ಚಿಂತನೆ, ಸಾಮಾಜಿಕ ಸೇವಾ ಮನೋಭಾವದಿಂದ ವಿಶ್ವದಲ್ಲಿಯೇ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದು ಸ್ವಾಮೀಜಿಯವರ ಕಾರ್ಯಕ್ಕೆ ಸಾಟಿ ಮತ್ತೊಂದಿಲ್ಲ. ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದಂತಹ ವಿಶಿಷ್ಟ ಯೋಜನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎನ್ನುವಂತಹ ಮನೋಭಾವ ಮೂಡುವ ಸಲುವಾಗಿ ಎಲ್ಲರನ್ನು ಗೌರವವಿಸುತ್ತಿದ್ದರು. ಪ್ರಕೃತಿಯ ವಿನಾಶದಿಂದ ಮಾನವ ಅಂತ್ಯ ಎಂಬ ಸಂದೇಶವನ್ನು ಅರಿತಿದ್ದ ಅವರು ಸಸಿಗಳನ್ನು ನೆಟ್ಟು ಪೋಷಣೆಯನ್ನು ಮಾಡುವಂತಹ ಕಾರ್ಯದಲ್ಲಿ ತೊಡಗಿದ್ದರು. ಸೇವಾ ಮನೋಭಾವಕ್ಕೆ ಉದಾಹರಣೆಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖಾಂತರ ಉಚಿತ ಸೇವೆ, ಜ್ಞಾನ ಪ್ರಸರಣವನ್ನು ಇಂದಿಗೂ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಈ ಸಮಾರಂಭದಲ್ಲಿ ಗುಡಿಗೌಡರು ಹುಚ್ಚೇಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ರುಕ್ಷ್ಮೀಣಿ ಪಾಟೀಲ್, ಶ್ರೀನಿವಾಸ್, ಕೃಷ್ಣಸ್ವಾಮಿ, ಮಾಜಿ ಗ್ರಾ.ಪಂ.ಸದಸ್ಯ ಮೋಹನ್ ಕುಮಾರ್, ನಂಜುಂಡೇಗೌಡ, ರಂಗಪ್ಪ, ಕಾಂತರಾಜು, ಡಿ.ಕೆ.ಸೋಮಶೇಖರ್, ಕೃಷ್ಣೇಗೌಡ.ಡಿ.ಟಿ., ಜಯಕುಮಾರ್.ಡಿ.ಟಿ., ಮಠದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಇದ್ದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್

    November 10, 2025

    ಕೊಡಿಗೇನಹಳ್ಳಿ: ಕನಕದಾಸರು ಕಾಯಕ ಮತ್ತು ಅಧ್ಯಾತ್ಮಿಕ ಮಾರ್ಗದಲ್ಲಿ ನಡೆದು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು ಎಂದು ಚೈತನ್ಯ ಸಿಂಚನ ಸಾಮಾಜಿಕ…

    ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ

    November 10, 2025

    ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ

    November 10, 2025

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.