ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ ಒಂದೂವರೆ ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
19/08/2022ರಂದು ಸಂಜೆ 6 ಗಂಟೆಯ ವೇಳೆಗೆ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ರಜಾತಾದ್ರಿಪುರ ಗ್ರಾಮದ ಅಪರಾಧಿ ಶಿವರಾಜು(33) ಕೊಟ್ಟಿಗೆಯ ಬಳಿ ಚಿಕ್ಕ ಸಂಪಲಿನ ರಸ್ತೆಯಲ್ಲಿ ನೊಂದ ಬಾಲಕಿ ತೆಂಗಿನ ಕಾಯಿ ಮಟ್ಟಿಯನ್ನು ಮಂಕರಿಯಲ್ಲಿ ಹೊತ್ತುಕೊಂಡು ಹೋಗುತ್ತಿದ್ದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು.
ಈ ಸಂಬಂಧ ಪೋಕ್ಸೋ ಕಾಯ್ದೆಯಡಿಯಲ್ಲಿ ತನಿಖಾಧಿಕಾರಿಗಳಾದ ಸಿದ್ಧಾರ್ಥ್ ಗೋಯೆಲ್ ರವರು ಘನ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಪ್ರಕರಣವು ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಆರೋಪಿಯು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿರುವುದು ರುಜುವಾತಾದ ಕಾರಣ ನ್ಯಾಯಾಧೀಶರಾದ ಸಂಧ್ಯಾರಾವ್ ಪಿ. ಅವರು ಅಪರಾಧಿಗೆ ಒಂದೂವರೆ ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜೊತೆಗೆ ದಂಡದ ಮೊತ್ತದಲ್ಲಿ 9500 ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ 20 ಸಾವಿರ ಒಟ್ಟಾರೆಯಾಗಿ 1,15,000 ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಆಶಾ ಕೆ.ಎಸ್. ವಾದ ಮಂಡಿಸಿದರು.
ವರದಿ: ಶಿವಕುಮಾರ್, ಮೇಷ್ಟ್ರುಮನೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA