ಚಿತ್ರದುರ್ಗ: ಬಾಲಕಿಯನ್ನು ಚುಡಾಯಿಸಿ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಪ್ರರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಹೊಸದುರ್ಗ ಡಿವೈಎಸ್ ರೋಷನ್ ಜಮೀರ್ ಹಾಗೂ ಸಿಪಿಐ ಫೈಜುಲ್ಲಾ ನೇತೃತ್ವದ ಪೊಲೀಸರ ಬಂದ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಸುದೀಪ,(19) ಕೋಟಿ ಅಲಿಯಾಸ್ ಕೋಟೇಶ (19)ಮುತ್ತು ಅಲಿಯಾಸ್ ಮುತ್ತುರಾಜ್, (21) ಅಭಿ ಅಲಿಯಾಸ್ ಅಭಿಷೇಕ್ (22) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳ ಕಿರುಕುಳದಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವೇಳೆ ಬಾಲಕಿಯ ತಂದೆ, ತನ್ನ ಮಗಳ ಸಾವಿಗೆ ಪುಂಡರು ಕಾರಣವಾಗಿದ್ದು, ಅವರ ಕಿರುಕುಳದಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದರು.
ಘಟನೆ ಸಂಬಂಧ ಹೊಸ ದುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೂ ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅವರು ಶ್ಲಾಘಿಸಿದ್ದಾರೆ.
ವರದಿ : ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy