ಉತ್ತರ ಪ್ರದೇಶ: ಅಮೇಥಿ ರಾಮಗಂಜ್ ಪ್ರದೇಶದ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಗುರುವಾರ ನಡೆದಿದೆ.
ತಮ್ಮ ಮಗಳು ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಮಾರ್ಚ್ 21ರಂದು ಸಂಜೆ ಮನೆಯಿಂದ ಹೊರಗೆ ಹೋಗಿದ್ದು, ಅದೇ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಹನದಲ್ಲಿ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.
ಘಟನೆಯ ಮರುದಿನ ಬೆಳಗ್ಗೆ ಬಾಲಕಿ ಮನೆಗೆ ಹಿಂದಿರುಗಿದಾಗ ಈ ಬಗ್ಗೆ ತಾಯಿಗೆ ಮಾಹಿತಿ ನೀಡಿದ್ದು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣ ದಾಖಲಿದ ಪೊಲೀಸರು ಎಫ್ ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರಾಮ್ಗಂಜ್ ಠಾಣಾಧಿಕಾರಿ ಪಂಕಜ್ ದ್ವಿವೇದಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


