ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಸಹನಾ ಬಾನು(18) ಮೃತ ದುರ್ದೈವಿಯಾಗಿದ್ದಾರೆ. ಈಕೆ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿಯಾಗಿದ್ದಾರೆ.
ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ .


