ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಬೆಂಗಳೂರಿನ ನಾನಾ ಕಡೆ ದಾಳಿ ನಡೆಸಿ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಿದೆ. ಒಂದು ಇ- ಸಿಗರೇಟ್ ಬೆಲೆ 5 ಸಾವಿರದವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.
2019 ರಲ್ಲಿ ಮನುಷ್ಯನ ಮೆದುಳು ಹಾಗೂ ಆರೋಗ್ಯಕ್ಕೆ ಹೆಚ್ಚು ಹಾನಿಕಾರಕ ಎಂದು ಸರ್ಕಾರ ಇ- ಸಿಗರೇಟ್ ಬ್ಯಾನ್ ಮಾಡಿದೆ.
ಆದರೂ ಬೆಂಗಳೂರಿನ ಕೋರಮಂಗಲ, ಬಾಣಸವಾಡಿ, ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಲ್ಲಿ ಕೇರಳ ಮೂಲದ ಆರೋಪಿಗಳು ಅಕ್ರಮವಾಗಿ ನಿಷೇಧಿತ ಇ- ಸಿಗರೇಟ್ ಮಾರಾಟ ಮಾಡುತ್ತಿದ್ದಾರೆ. ಪುಲಕೇಶಿ ನಗರ, ಬಾಣಸವಾಡಿ, ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


