ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ರೂ. ಲಂಚ ಕೇಳಿದ್ದ ಮಹಿಳಾ ವೈದ್ಯರನ್ನ ರಾಮನಗರ ಡಿಎಚ್ ಒ ಡಾ. ಕಾಂತರಾಜು ಅಮಾನತು ಮಾಡಿ ಆದೇಶಿಸಿದ್ದಾರೆ.
ಬಿಡದಿ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಶಶಿಕಲಾ, ಡಾ.ಐಶ್ವರ್ಯ ಅಮಾನತುಗೊಂಡವರು. ಬಾಣಂತಿ ರೂಪ ಅವರ ಬಳಿ ಡಿಸ್ಚಾರ್ಜ್ ಮಾಡಲು ವೈದ್ಯೆ ಶಶಿಕಲಾ ಅವರು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
ತಕ್ಷಣ ಎಚ್ಚೆತ್ತ ರಾಮನಗರ ಡಿಎಚ್ ಒ ಡಾ. ಕಾಂತರಾಜು ಅವರು , ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಶಿಕಲಾ, ಡಾ.ಐಶ್ವರ್ಯರನ್ನ ಅಮಾನತು ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಇದು ಬಹಳ ವಿಷಾದದ ಸಂಗತಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೀವೆ. ಭ್ರಷ್ಟಾಚಾರ ಎಲ್ಲಾ ಕ್ಷೇತ್ರದಲ್ಲೂ ಇದೆ. ಅದನ್ನ ತೊಡೆದು ಹಾಕಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy