nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 
    ತುರುವೇಕೆರೆ January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    By adminJanuary 7, 2026No Comments2 Mins Read
    turuvekere

    ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಂದ ಕುಂಟೆ ನಾಗರಾಜಯ್ಯ ನುಡಿ ನಮನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಆಯೋಜನೆ ಮಾಡಲಾಗಿತ್ತು.

    ಹಿರಿಯ ದಲಿತ ಮುಖಂಡ ಹೋರಾಟಗಾರ ಕುಂದೂರು ತಿಮ್ಮಯ್ಯ ನೇತೃತ್ವದಲ್ಲಿ ನಾಗರಾಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಇದೇ ವೇಳೆ ಕುಂದೂರು ತಿಮ್ಮಯ್ಯ ಮಾತನಾಡಿ, 1972 –73 ರಲ್ಲಿ ತುಮಕೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದ ಬಂದ ಕುಂಟೆ ನಾಗರಾಜಯ್ಯ ಆ ದಿನಗಳಲ್ಲಿ ಕೆಲವು ದಲಿತ ವಿದ್ಯಾರ್ಥಿಗಳೊಂದಿಗೆ ಸೇರಿ ಅಸ್ಪೃಶ್ಯತಾ ನಿವಾರಣಾ ಸಂಘ ಹಾಗೂ 1974– 75 ರಲ್ಲಿ ದಲಿತ ವಿದ್ಯಾರ್ಥಿ ಸಂಘ ಸ್ಥಾಪಿಸುವ ಮೊದಲ ಹೋರಾಟದೊಂದಿಗೆ ನಾಗರಾಜಯ್ಯನವರ ಸಾಮಾಜಿಕ ನ್ಯಾಯದ ಹೋರಾಟ ಆರಂಭವಾಯಿತು. ನಂತರದ ದಿನಗಳಲ್ಲಿ ಇವರ ಹೋರಾಟ ಶಿಖರ ಶೃಂಗ ತಲುಪಿದ್ದು , ನಮ್ಮ ತುರುವೇಕೆರೆ ತಾಲೂಕಿನಲ್ಲೂ ಸಹ ಅನೇಕ ಹೋರಾಟಗಳ ಮುಂದಾಳತ್ವವನ್ನು ವಹಿಸಿ ಹೋರಾಟಕ್ಕೆ ಮುನ್ನುಡಿ ಬರೆದ ಏಕೈಕ ವ್ಯಕ್ತಿ ಬಂದ ಕುಂಟೆ ನಾಗರಾಜಯ್ಯ ಇವರೊಂದಿಗೆ ನಾನು ಸಹ ಅನೇಕ ಹೋರಾಟದಲ್ಲಿ ಪಾಲ್ಗೊಂಡಿದ್ದೇನೆ ಎಂದರು.

    ಜೊತೆಗೆ ನಾಗರಾಜಯ್ಯನವರಲ್ಲಿ ಪ್ರೌಢಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಅವರು ಪಟ್ಟನಾಯಕನಹಳ್ಳಿಯಲ್ಲಿರುವ ಒಂದು ಮಠದ ಸ್ವಾಮೀಜಿಯ ವಿರುದ್ಧ ತಿರುಗಿ ಬಿದ್ದ ಸನ್ನಿವೇಶವು ಕೂಡ ಇದೆ ಅನೇಕ ವಿದ್ಯಾರ್ಥಿಗಳಿಗೆ ಮತ್ತು  ದೊಣ್ಣೆಯಿಂದ ಭಾರಿಸಿದ ಸ್ವಾಮೀಜಿಯ ವಿರುದ್ಧ ಪ್ರತಿಭಟನೆಯ ಸಂಕೇತಾರ್ಥವಾಗಿ ತಲೆ ಮೇಲೆ ಟ್ರೆಂಕುಗಳನ್ನು ಹೊತ್ತು ಪಟ್ಟನಾಯಕನಹಳ್ಳಿ ಬೀದಿಗಳಲ್ಲಿ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಿ ಹೋರಾಟ ರೂಪಿಸಿದವರು ಜೊತೆಗೆ ವಿದ್ಯಾರ್ಥಿಯ ದಿನಗಳ ಪ್ರತಿಭಟನೆಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಬೌದ್ಧಿಕ ಆಕಾರ ದೊರೆತದ್ದು ಪ್ರೊ,.ಬಿ.ಕೆ.ಜೊತೆಗಿನ ಒಡನಾಟದೊಂದಿಗೆ ಇದ್ದ ಫಲವಾಗಿ ದಲಿತ ಚಳುವಳಿ ಆರಂಭವಾಯಿತು, ಒಟ್ಟಾರೆ ಬಂದ ಕುಂಟೆ ನಾಗರಾಜಯ್ಯ ಅವರು ದಬ್ಬಾಳಿಕೆ ದೌರ್ಜನ್ಯ ವಿರುದ್ಧ ಹೋರಾಡುತ್ತಾ ದೀನ ದಲಿತರ ಪರವಾಗಿ ಸಾತ್ವಿಕ ಪ್ರತಿಭಟಕರಾಗಿದ್ದರು ಎಂದರು.

    ಬಳಿಕ ಸೋಮೇನಹಳ್ಳಿ ಜಗದೀಶ್ ಮಾತನಾಡಿ, ಬಂದ ಕುಂಟೆ ನಾಗರಾಜಯ್ಯರವರು 1974ರಲ್ಲಿ ರೂಪಿಸಲಾದ ದಲೇಖದಿಂದ ಹಿಡಿದು ದೇವರಾಯನ ದುರ್ಗದ ನಾಮದ ಚಿಲುಮೆಯಲ್ಲಿ ನಡೆದ ರಾಜ್ಯಮಟ್ಟದ ಮೊಟ್ಟ ಮೊದಲ ದಲಿತ ಕಾರ್ಯಕರ್ತರ ತರಬೇತಿ ಶಿಬಿರ, ಹಾಡ್ಯದ ಸೋಮಶೇಖರ್ ನಿರುಪಾಲು, ದುರ್ಮರಣ, ಬಂಡಾಯ, ಸಾಹಿತ್ಯ ಸಂಘಟನೆಯ ಪ್ರಥಮ ಸಮಾವೇಶ, ದಸಂಸದ ಭೂ ಹೋರಾಟಗಳು, ಜನಕಲಾ ಮೇಳ, ದಸಂಸ ಮುಖವಾಣಿಯಾದ ಪಂಚಮ ಮತ್ತು ಸುದ್ದಿ ಸಂಗಾತಿ ಪತ್ರಿಕೆಗಳ ಪ್ರಕಟಣೆ, ದಸಂಸದ ರಾಜಕೀಯ ಪ್ರವೇಶ, ದಲಿತ ಚಳುವಳಿಯ ವಿಘಟನೆ, ಮಂಡಲ್ ವರದಿ ಹೋರಾಟ, ಬ್ಯಾಕ್ಲ್ಯಾಕ್ ಹುದ್ದೆ ಬರ್ತಿ ಹೋರಾಟ, ಬಹುಜನ ಸಮಾಜ ಪಕ್ಷ ಒಳ ಮೀಸಲಾತಿ ವರ್ಗಿಕರಣ ಚಳವಳಿ, ದಲಿತ ಚಳುವಳಿಯಲ್ಲಿ ಮಿಂಚಿನಂತೆ ಹೊಳೆದು ನೆನಪು ಉಳಿಸಿ ಹೋದ ಚೇಳೂರು ವೆಂಕಟೇಶ್ ರವರ ಮುಂತಾದ ಅನೇಕ ಪ್ರಮುಖ ಸಂಗತಿಗಳಲ್ಲಿ ಬಂದ ಕುಂಟೆ ನಾಗರಾಜಯ್ಯ ದಲಿತ ಚಳುವಳಿಯ ಕಾಲ ಯಾನದ ಸಾಕ್ಷಿಪ್ರಜ್ಞೆಯಾಗಿದ್ಧರು ಎಂದು ನೆನಪಿಸಿದರು.

    ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತುರುವೇಕೆರೆ ತಾಲೂಕು ಸಂಚಾಲಕ ಕೃಷ್ಣ ಸ್ವಾಮಿ ಮಾತನಾಡಿ, ದಲಿತ ಚಳುವಳಿಯ ಮಾತೃಸ್ಥಾನದಲ್ಲಿರುವ ಮತ್ತು ಸರಳ ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರರಾದ ನಮ್ಮ ಬಂಧ ಕುಂಟೆ ನಾಗರಾಜಯ್ಯ ಇಂದು ನಮ್ಮನ್ನು ಅಗಲಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ನಾವು ಸಹ ಮುಂದಿನ ದಿನಗಳಲ್ಲಿ ಅವರಂತೆ ಹೋರಾಟ ಮುಂದುವರಿಸಿ ದೀನ ದಲಿತರ ಪರವಾಗಿ ಉತ್ತಮವಾದ ಹೋರಾಟ ಮಾಡಿ ನ್ಯಾಯ ದೊರಕಿಸಿ ಕೊಡುವಲ್ಲಿ ಹೆಜ್ಜೆ ಇಡುತ್ತೇವೆ ಎಂದರು.

    ಇನ್ನು ನುಡಿ ನಮನ ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ದಲಿತ ಮುಖಂಡರುಗಳು ವಿವಿಧಪರ ಸಂಘಟನೆಗಳ ಮುಖಂಡರುಗಳು ಹಲವರು ಉಪಸ್ಥಿತರಿದ್ದರು.

    ವರದಿ: ಮಂಜುನಾಥ್ ಕೆ.ಎ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.